ವಿಮೋಚನಕಾಂಡ 14:3 - ಪರಿಶುದ್ದ ಬೈಬಲ್3 ಇಸ್ರೇಲರು ಅರಣ್ಯದಲ್ಲಿ ದಾರಿ ತಪ್ಪಿದರು; ಅವರಿಗೆ ಹೋಗಲು ಯಾವ ಸ್ಥಳವೂ ಇರುವುದಿಲ್ಲ ಎಂದು ಫರೋಹನು ಭಾವಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಫರೋಹನು ಅದನ್ನು ಕಂಡು ಇಸ್ರಾಯೇಲರನ್ನು ಕುರಿತು, ‘ಅವರಿಗೆ ದಾರಿತಪ್ಪಿದೆ, ಎಲ್ಲಾ ಕಡೆಯಲ್ಲಿಯೂ ಮರುಭೂಮಿ ಅವರನ್ನು ಸುತ್ತುವರಿದಿದೆ’ ಎಂದು ಅಂದುಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಫರೋಹನು ಅದನ್ನು ಕಂಡು, ‘ಇಸ್ರಯೇಲರಿಗೆ ದಾರಿತಪ್ಪಿತು, ಸುತ್ತಲೂ ಮರುಭೂಮಿ ಅವರನ್ನು ಆವರಿಸಿದೆ” ಎಂದುಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಫರೋಹನು ಅದನ್ನು ಕಂಡು - ಇಸ್ರಾಯೇಲ್ಯರಿಗೆ ದಾರಿತಪ್ಪಿತು, ಎಲ್ಲಾ ಕಡೆಯಲ್ಲಿಯೂ ಅರಣ್ಯವು ಅವರನ್ನು ಸುತ್ತಿಕೊಂಡದೆ ಅಂದುಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಏಕೆಂದರೆ ಫರೋಹನು ಇಸ್ರಾಯೇಲರ ವಿಷಯದಲ್ಲಿ, ‘ಅವರು ಗಲಿಬಿಲಿಗೊಂಡು ಮರುಭೂಮಿಯನ್ನು ಸುತ್ತುವರಿದ ಪ್ರದೇಶದಲ್ಲಿ ಅತ್ತಿತ್ತ ಹೋಗುತ್ತಿರುವರು,’ ಎಂದುಕೊಳ್ಳುವನು. ಅಧ್ಯಾಯವನ್ನು ನೋಡಿ |
ಇದು ನನ್ನ ಒಡೆಯನಾದ ಯೆಹೋವನ ನುಡಿ: “ಆಗ ನಾನು ನಿನ್ನ ವಿಷಯದಲ್ಲಿ ಹೇಳಿದ್ದು ಜನರು ಜ್ಞಾಪಕಕ್ಕೆ ಬರುವದು. ನಾನು ಇದನ್ನು ನನ್ನ ಸೇವಕರಾದ ಪ್ರವಾದಿಗಳಿಗೆ ತಿಳಿಸಿರುತ್ತೇನೆ ಎಂದು ಅರಿಯುವರು. ಹಿಂದಿನ ಕಾಲದಲ್ಲಿ ಇಸ್ರೇಲ್ ಪ್ರವಾದಿಗಳು ನನ್ನ ಪರವಾಗಿ ಮಾತನಾಡಿ ನೀವು ಅವರ ವಿರುದ್ಧವಾಗಿ ಯುದ್ಧಕ್ಕೆ ಬರುವಿರೆಂದು ಹೇಳಿರುತ್ತೇನೆ ಎಂಬುದನ್ನು ತಮ್ಮ ಜ್ಞಾಪಕಕ್ಕೆ ತರುವರು.”
ಯಾರೋ ಒಬ್ಬರು, “ಸಂಸೋನನು ಇಲ್ಲಿಗೆ ಬಂದಿದ್ದಾನೆ” ಎಂದು ಗಾಜಾದ ಜನರಿಗೆ ಹೇಳಿದರು. ಅವರು ಅವನನ್ನು ಕೊಲ್ಲಬೇಕೆಂದಿದ್ದರು. ಅದಕ್ಕಾಗಿ ಅವರು ಆ ಸ್ಥಳವನ್ನು ಸುತ್ತುಗಟ್ಟಿದರು. ನಗರದ ಬಾಗಿಲುಗಳನ್ನು ಭದ್ರಪಡಿಸಿ ಅಡಗಿಕೊಂಡು ಸಂಸೋನನ ದಾರಿಕಾಯ್ದರು. ಇಡೀರಾತ್ರಿ ಅವರು ನಗರದ ಬಾಗಿಲಲ್ಲಿ ಸುಮ್ಮನಿದ್ದರು. “ಬೆಳಗಾದ ಮೇಲೆ ನಾವು ಸಂಸೋನನನ್ನು ಕೊಲ್ಲೋಣ” ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.