ವಿಮೋಚನಕಾಂಡ 14:30 - ಪರಿಶುದ್ದ ಬೈಬಲ್30 ಆದ್ದರಿಂದ ಆ ದಿನ ಯೆಹೋವನು ಇಸ್ರೇಲರನ್ನು ಈಜಿಪ್ಟಿನವರಿಂದ ರಕ್ಷಿಸಿದನು. ಇಸ್ರೇಲರು ಕೆಂಪುಸಮುದ್ರದ ದಡದಲ್ಲಿ ಬಿದ್ದಿದ್ದ ಈಜಿಪ್ಟಿನವರ ಹೆಣಗಳನ್ನು ನೋಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಐಗುಪ್ತ್ಯರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಾಯೇಲರು ನೋಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆ ದಿನ ಸರ್ವೇಶ್ವರ ಸ್ವಾಮಿ ಇಸ್ರಯೇಲರನ್ನು ಈಜಿಪ್ಟಿನವರ ಕೈಯಿಂದ ರಕ್ಷಿಸಿದರು. ಈಜಿಪ್ಟಿನವರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಯೇಲರು ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತ್ಯರ ಕೈಗೆ ತಪ್ಪಿಸಿದನು. ಐಗುಪ್ತ್ಯರು ಸತ್ತು ಸಮುದ್ರತೀರದಲ್ಲಿ ಬಿದ್ದಿರುವದನ್ನು ಇಸ್ರಾಯೇಲ್ಯರು ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆ ದಿನದಲ್ಲಿ ಯೆಹೋವ ದೇವರು ಈ ಪ್ರಕಾರ ಇಸ್ರಾಯೇಲರನ್ನು ಈಜಿಪ್ಟಿನವರ ಕೈಯಿಂದ ರಕ್ಷಿಸಿದರು. ಇಸ್ರಾಯೇಲರು ಸಮುದ್ರ ತೀರದಲ್ಲಿ ಸತ್ತ ಈಜಿಪ್ಟಿನವರನ್ನು ನೋಡಿದರು. ಅಧ್ಯಾಯವನ್ನು ನೋಡಿ |
ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!