Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:31 - ಪರಿಶುದ್ದ ಬೈಬಲ್‌

31 ಈಜಿಪ್ಟಿನವರನ್ನು ಯೆಹೋವನು ಸೋಲಿಸಿದಾಗ ಇಸ್ರೇಲರು ಆತನ ಮಹಾಶಕ್ತಿಯನ್ನು ನೋಡಿದರು. ಆದ್ದರಿಂದ ಜನರು ಯೆಹೋವನನ್ನು ಸನ್ಮಾನಿಸಿ ಆತನ ಸೇವಕನಾದ ಮೋಶೆಯಲ್ಲಿ ಭರವಸವಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಾಯೇಲರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯನ್ನಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಸರ್ವೇಶ್ವರ ಈಜಿಪ್ಟಿನವರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಯೇಲರು ನೋಡಿ ಸರ್ವೇಶ್ವರನಿಗೆ ಭಯಪಟ್ಟು ಅವರಲ್ಲೂ ಅವರ ದಾಸ ಮೋಶೆಯಲ್ಲೂ ನಂಬಿಕೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಈಜಿಪ್ಟಿನವರ ಮೇಲೆ ಯೆಹೋವ ದೇವರು ಮಾಡಿದ ದೊಡ್ಡ ಕಾರ್ಯವನ್ನು ನೋಡಿದಾಗ, ಇಸ್ರಾಯೇಲರು ಯೆಹೋವ ದೇವರಿಗೆ ಭಯಪಟ್ಟು, ಅವರಲ್ಲಿಯೂ ಅವರ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:31
18 ತಿಳಿವುಗಳ ಹೋಲಿಕೆ  

ಯೇಸು ಮಾಡಿದ ಮೊದಲನೆಯ ಅದ್ಭುತಕಾರ್ಯವಿದು. ಯೇಸು ಇದನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹತ್ವವನ್ನು ತೋರಿದನು. ಆತನ ಶಿಷ್ಯರೂ ಆತನಲ್ಲಿ ನಂಬಿಕೆ ಇಟ್ಟರು.


ಮರಿಯಳನ್ನು ಸಂದರ್ಶಿಸಲು ಬಂದಿದ್ದ ಅನೇಕ ಯೆಹೂದ್ಯರು ಅಲ್ಲಿದ್ದರು. ಯೇಸು ಮಾಡಿದ ಈ ಕಾರ್ಯವನ್ನು ಕಂಡ ಇವರಲ್ಲಿ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು.


ಬಂಡೆಯ ಮೇಲೆ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯ ಕೇಳಿ ಸಂತೋಷದಿಂದ ಸ್ವೀಕರಿಸಿಕೊಳ್ಳುತ್ತಾರೆ. ಆದರೆ ಅವರಿಗೆ ಆಳವಾದ ಬೇರುಗಳಿರುವುದಿಲ್ಲ. ಅವರು ಸ್ವಲ್ಪಕಾಲ ಮಾತ್ರವೇ ನಂಬುತ್ತಾರೆ. ಬಳಿಕ ತೊಂದರೆಯೇನಾದರೂ ಬಂದರೆ ತಮ್ಮ ನಂಬಿಕೆಯನ್ನು ಕಳೆದುಕೊಂಡು ದೇವರಿಂದ ದೂರ ಸರಿಯುತ್ತಾರೆ.


ನಾನು ನಿನ್ನಲ್ಲಿ ಭಯವುಳ್ಳವನಾಗಿದ್ದೇನೆ. ನಾನು ನಿನ್ನ ತೀರ್ಪುಗಳಿಗೆ ಅಂಜಿಕೊಂಡಿದ್ದೇನೆ.


ಮರುದಿನ ಮುಂಜಾನೆ ಯೆಹೋಷಾಫಾಟನ ಸೈನ್ಯವು ತೆಕೋವದ ಅರಣ್ಯಕ್ಕೆ ಹೊರಟಿತು. ಅವರು ಹೊರಡುವ ಮುಂಚೆ ಯೆಹೋಷಾಫಾಟನು ಎದ್ದುನಿಂತು, “ಜೆರುಸಲೇಮಿನವರೇ, ಯೆಹೂದ ಪ್ರಾಂತ್ಯದವರೇ, ನನ್ನ ಮಾತನ್ನು ಕೇಳಿರಿ. ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಡಿರಿ. ಆಗ ನೀವು ಸ್ಥಿರಗೊಳ್ಳುವಿರಿ. ಯೆಹೋವನ ಪ್ರವಾದಿಗಳ ಮೇಲೆ ಭರವಸವಿಡಿರಿ; ಆಗ ನೀವು ಜಯಗಳಿಸುವಿರಿ” ಎಂದು ಹೇಳಿದನು.


ಯೆಹೋವನು ಮೋಶೆಗೆ, “ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬಂದು ಜನರೆಲ್ಲರಿಗೂ ಕೇಳುವಂತೆ ನಿನ್ನೊಡನೆ ಮಾತಾಡುವೆನು. ನೀನು ಹೇಳುವುದನ್ನು ಜನರು ಯಾವಾಗಲೂ ನಂಬಲು ಇದು ಸಹಾಯಕವಾಗುವುದು” ಎಂದು ಹೇಳಿದನು. ಆಗ ಮೋಶೆಯು ಜನರು ಹೇಳಿದ್ದನ್ನೆಲ್ಲಾ ದೇವರಿಗೆ ಅರಿಕೆಮಾಡಿದನು.


ಯೆಹೋವನು ಮೋಶೆಯನ್ನು ಕಳುಹಿಸಿದ್ದಾನೆಂದು ಜನರು ನಂಬಿದರು. ಯೆಹೋವನು ಇಸ್ರೇಲರಿಗೆ ಸಹಾಯಮಾಡಬೇಕೆಂದಿರುವುದನ್ನು ಅವರು ತಿಳಿದು ತಲೆಬಾಗಿ ಆತನನ್ನು ಆರಾಧಿಸಿದರು. ಯೆಹೋವನು ತಮ್ಮ ಸಂಕಟಗಳನ್ನು ನೋಡಿದ್ದರಿಂದ ಅವರು ಆತನನ್ನು ಆರಾಧಿಸಿದರು.


ಸಿಮೋನನು ಸಹ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡನು. ಸಿಮೋನನು ಫಿಲಿಪ್ಪನ ಸಮೀಪದಲ್ಲೇ ಇದ್ದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಸೂಚಕಕಾರ್ಯಗಳನ್ನು ಸಿಮೋನನು ನೋಡಿ ವಿಸ್ಮಿತನಾದನು.


ಸಮುವೇಲನು ಯೆಹೋವನಲ್ಲಿ ಪ್ರಾರ್ಥಿಸಿದನು. ಅದೇ ದಿನ ಯೆಹೋವನು ಗುಡುಗು ಮತ್ತು ಮಳೆಗಳನ್ನು ಕಳುಹಿಸಿದನು. ಜನರು ಯೆಹೋವನ ಬಗ್ಗೆ ಮತ್ತು ಸಮುವೇಲನ ಬಗ್ಗೆ ಬಹಳ ಭಯಗೊಂಡರು.


ದೇವರ ಮನೆಯಲ್ಲೆಲ್ಲಾ ಮೋಶೆಯು ಸೇವಕನಂತೆ ನಂಬಿಗಸ್ತನಾಗಿದ್ದನು. ಮುಂದೆ ಪ್ರಕಟವಾಗಲಿದ್ದ ಸಂಗತಿಗಳಿಗೆ ಅವನು ಸಾಕ್ಷಿಯಾಗಿದ್ದನು.


ಈ ಭೂಲೋಕದ ಜನರೆಲ್ಲರೂ ಯೆಹೋವನೇ ಸರ್ವಶಕ್ತನೆಂದು ತಿಳಿದುಕೊಳ್ಳಬೇಕೆಂದು ಆತನು ಹೀಗೆ ಮಾಡಿದನು. ಹೀಗೆ ಅವರು ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವರು” ಅಂದನು.


“ಈಗ ಯೆಹೋವನು ನಿಮ್ಮ ಕಣ್ಣುಗಳ ಮುಂದೆ ಮಾಡುವ ಮಹತ್ಕಾರ್ಯಗಳನ್ನು ನೋಡುವುದಕ್ಕಾಗಿ ಅಲುಗಾಡದೆ ನಿಂತುಕೊಳ್ಳಿ.


ನಮ್ಮ ಪೂರ್ವಿಕರು ಈಜಿಪ್ಟಿನಲ್ಲಿ ಸಂಕಟ ಅನುಭವಿಸುವುದನ್ನು ನೀನು ನೋಡಿದೆ. ಕೆಂಪು ಸಮುದ್ರದ ಬಳಿ ಸಹಾಯಕ್ಕಾಗಿ ಅವರು ಮೊರೆಯಿಟ್ಟಾಗ ನೀನು ಅವರಿಗೆ ಕಿವಿಗೊಟ್ಟೆ.


ಯೆಹೋವನು ಆ ದಿನ ಇಸ್ರೇಲಿನ ಎಲ್ಲಾ ಜನರ ದೃಷ್ಟಿಯಲ್ಲಿ ಯೆಹೋಶುವನನ್ನು ಘನವಂತನನ್ನಾಗಿ ಮಾಡಿದನು. ಆ ಹೊತ್ತಿನಿಂದ ಜನರು ಯೆಹೋಶುವನನ್ನು ಗೌರವಿಸತೊಡಗಿದರು. ಅವರು ಮೋಶೆಯನ್ನು ಗೌರವಿಸಿದಂತೆ ಯೆಹೋಶುವನನ್ನು ಅವನ ಜೀವಮಾನವೆಲ್ಲಾ ಗೌರವಿಸಿದರು.


ಆಗ ನಿಮ್ಮ ಜನರು ಯೆಹೋವನಾದ ನನ್ನ ಸಹಾಯ ಕೋರಿದರು. ನಾನು ಈಜಿಪ್ಟಿನ ಜನರಿಗೂ ಅವರಿಗೂ ಮಧ್ಯದಲ್ಲಿ ಕತ್ತಲೆಯಾಗುವಂತೆ ಮಾಡಿದೆ; ಸಮುದ್ರವು ಅವರನ್ನು ಮುಚ್ಚಿಬಿಡುವಂತೆ ಮಾಡಿದೆ. ಈಜಿಪ್ಟಿನ ಸೈನ್ಯಕ್ಕೆ ನಾನು ಮಾಡಿದ್ದನ್ನು ನೀವೇ ನೋಡಿದ್ದೀರಿ. “‘ತರುವಾಯ ಬಹಳ ಕಾಲದವರೆಗೆ ನೀವು ಅರಣ್ಯದಲ್ಲಿ ಪ್ರವಾಸ ಮಾಡಿಕೊಂಡಿದ್ದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು