ವಿಮೋಚನಕಾಂಡ 14:4 - ಪರಿಶುದ್ದ ಬೈಬಲ್4 ನಾನು ಫರೋಹನ ಹೃದಯವನ್ನು ಕಠಿಣಪಡಿಸುವುದರಿಂದ ಅವನು ನಿಮ್ಮನ್ನು ಬೆನ್ನಟ್ಟುವನು. ಆದರೆ ನಾನು ಫರೋಹನನ್ನು ಮತ್ತು ಅವನ ಸೈನ್ಯವನ್ನು ಸೋಲಿಸುವೆನು. ಇದು ನನಗೆ ಗೌರವವನ್ನು ತರುವುದು. ಆಗ ನಾನೇ ಯೆಹೋವನೆಂದು ಈಜಿಪ್ಟಿನ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು. ಇಸ್ರೇಲರು ದೇವರಿಗೆ ವಿಧೇಯರಾಗಿ ಆತನು ಹೇಳಿದ್ದನ್ನು ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. ‘ನಾನೇ ಯೆಹೋವನು’ ಎಂದು ಐಗುಪ್ತ್ಯರಿಗೆ ತಿಳಿದು ಬರುವುದು” ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಾನು ಫರೋಹನ ಹೃದಯವನ್ನು ಕಠಿಣವಾಗಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ಆ ಫರೋಹನನ್ನೂ ಅವನ ಸೈನ್ಯವನ್ನೂ ಗೆದ್ದು ನಾನು ಪ್ರಖ್ಯಾತಿ ಹೊಂದುವೆನು. ನಾನೇ ಸರ್ವೇಶ್ವರ ಎಂಬುದು ಈಜಿಪ್ಟಿನವರಿಗೆ ಗೊತ್ತಾಗುವುದು.” ಸರ್ವೇಶ್ವರನ ಆಜ್ಞೆಯಂತೆಯೇ ಇಸ್ರಯೇಲರು ನಡೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನಾದದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು; ಆಗ ನಾನು ಫರೋಹನಲ್ಲಿಯೂ ಅವನ ಸೈನ್ಯದಲ್ಲಿಯೂ ಪ್ರಖ್ಯಾತಿಗೊಳ್ಳುವೆನು. ನಾನೇ ಯೆಹೋವನೆಂಬದು ಐಗುಪ್ತ್ಯರಿಗೆ ತಿಳಿದುಬರುವದು ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ನಡೆದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇದಲ್ಲದೆ ಫರೋಹನು ನಿಮ್ಮನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು. ಫರೋಹನಲ್ಲಿಯೂ, ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು. ಆಗ ನಾನೇ ಯೆಹೋವ ದೇವರೆಂದು ಈಜಿಪ್ಟಿನವರು ತಿಳಿಯುವರು,” ಎಂದು ಹೇಳಿದರು. ಅದರಂತೆಯೇ ಇಸ್ರಾಯೇಲರು ಮಾಡಿದರು. ಅಧ್ಯಾಯವನ್ನು ನೋಡಿ |
ನಾನು ಈಜಿಪ್ಟಿನಲ್ಲಿ ಮಾಡಿದ ಸೂಚಕಕಾರ್ಯಗಳನ್ನೂ ಇತರ ಅದ್ಭುತಕಾರ್ಯಗಳನ್ನೂ ನೀವು ನಿಮ್ಮ ಮಕ್ಕಳಿಗೆ ಮತ್ತು ಮೊಮ್ಮಕ್ಕಳಿಗೆ ವಿವರಿಸಿ, ‘ಯೆಹೋವನು ಈಜಿಪ್ಟಿನವರನ್ನು ತನಗೆ ಇಷ್ಟ ಬಂದಂತೆ ಶಿಕ್ಷಿಸಿದನು’ ಎಂಬುದಾಗಿ ತಿಳಿಸಬೇಕೆಂದು ನಾನು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳ ಮೂಲಕ ನಾನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದು ಹೇಳಿದನು.
ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕರೀ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಬಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಬೇಕಿದ್ದೇನೆಂದು ಅವರು ಕಾದು ನೋಡುವರು.’”