ವಿಮೋಚನಕಾಂಡ 14:7 - ಪರಿಶುದ್ದ ಬೈಬಲ್7 ಫರೋಹನು ತನ್ನ ಆರುನೂರು ರಥಗಳನ್ನೂ ಅವುಗಳ ಚಾಲಕರನ್ನೂ ಮತ್ತು ಅವುಗಳೊಡನೆ ಈಜಿಪ್ಟಿನ ಇತರ ರಥಗಳನ್ನೂ ತೆಗೆದುಕೊಂಡನು. ಪ್ರತಿಯೊಂದು ರಥದಲ್ಲಿ ಒಬ್ಬ ದಳಪತಿ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಶ್ರೇಷ್ಠವಾದ ಆರುನೂರು ರಥಗಳನ್ನೂ, ಐಗುಪ್ತ ದೇಶದ ಎಲ್ಲಾ ರಥಗಳನ್ನೂ ತೆಗೆದುಕೊಂಡು ಬೆನ್ನಟ್ಟಿ ಹೋದನು. ಆ ಎಲ್ಲಾ ರಥಗಳಲ್ಲಿ ಅಧಿಪತಿಗಳನ್ನೂ ಕರೆಸಿ ಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಈಜಿಪ್ಟಿನ ಎಲ್ಲ ರಥಗಳನ್ನೂ ಆರುನೂರು ಶ್ರೇಷ್ಠರಥಗಳನ್ನು ತೆಗೆದುಕೊಂಡು ಹೋದನು. ಈ ಎಲ್ಲ ರಥಗಳಲ್ಲಿ ಸೇನಾನಿಗಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಶ್ರೇಷ್ಠವಾದ ಆರುನೂರು ರಥಗಳನ್ನೂ ಐಗುಪ್ತದೇಶದ ಎಲ್ಲಾ ರಥಗಳನ್ನೂ ತೆಗೆದುಕೊಂಡು ಹೋದನು. ಆ ಎಲ್ಲಾ ರಥಗಳಲ್ಲಿ ಭಟರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇದಲ್ಲದೆ ಅವನು ಆರಿಸಿಕೊಂಡ ಅತ್ಯುತ್ತಮ ಆರುನೂರು ರಥಗಳನ್ನೂ, ಈಜಿಪ್ಟಿನ ಎಲ್ಲಾ ರಥಗಳನ್ನೂ, ಅವುಗಳ ಮೇಲೆ ಅಧಿಪತಿಗಳನ್ನೂ ತೆಗೆದುಕೊಂಡನು. ಅಧ್ಯಾಯವನ್ನು ನೋಡಿ |
ನನ್ನ ಒಡೆಯನಾದ ಯೆಹೋವನನ್ನು ತುಚ್ಛೀಕರಿಸಲಿಕ್ಕೆ ನೀನು ನಿನ್ನ ಅಧಿಕಾರಿಯನ್ನು ಕಳುಹಿಸಿದೆ. “ನನ್ನಲ್ಲಿ ಬಲ ಸಾಮರ್ಥ್ಯಗಳಿವೆ; ನನ್ನಲ್ಲಿ ಅನೇಕಾನೇಕ ರಥಗಳಿವೆ. ನನ್ನ ಬಲದಿಂದ ನಾನು ಲೆಬನೋನನ್ನು ಸೋಲಿಸಿದೆ. ಲೆಬನೋನಿನ ಉನ್ನತ ಶಿಖರಗಳನ್ನು ನಾನು ಏರಿದೆನು. ಲೆಬನೋನಿನ ಎತ್ತರವಾದ ದೇವದಾರು ಮರಗಳನ್ನೂ ಶ್ರೇಷ್ಠವಾದ ತುರಾಯಿ ಮರಗಳನ್ನೂ (ಸೈನ್ಯ) ನಾನು ಕಡಿದುಹಾಕಿದೆನು. ನಾನು ಅತ್ಯುನ್ನತ ಶಿಖರಕ್ಕೂ ದಟ್ಟವಾದ ಕಾಡಿನೊಳಗೂ ಹೋಗಿದ್ದೇನೆ.