Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:8 - ಪರಿಶುದ್ದ ಬೈಬಲ್‌

8 ಇಸ್ರೇಲರು ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ಧೈರ್ಯದಿಂದ ಹೋಗುತ್ತಿದ್ದರು. ಆದರೆ ಈಜಿಪ್ಟಿನ ಅರಸನಾದ ಫರೋಹನ ಹೃದಯವನ್ನು ಯೆಹೋವನು ಕಠಿಣಗೊಳಿಸಿದ್ದರಿಂದ ಅವನು ಇಸ್ರೇಲರನ್ನು ಬೆನ್ನಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಐಗುಪ್ತ ದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಇಸ್ರಾಯೇಲರನ್ನು ಬೆನ್ನಟ್ಟಿಹೋದನು. ಆದರೆ ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಹೊರಟು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈಜಿಪ್ಟ್ ರಾಜ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣಪಡಿಸಿದ್ದರಿಂದ ಅವನು ಇಸ್ರಯೇಲರನ್ನು ಬೆನ್ನಟ್ಟಿಹೋದನು. ಇತ್ತ ಅಟ್ಟಹಾಸದಿಂದ ಹೊರಟಿದ್ದರು ಇಸ್ರಯೇಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ಐಗುಪ್ತದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದದರಿಂದ ಅವನು ಇಸ್ರಾಯೇಲ್ಯರನ್ನು ಬೆನ್ನಟ್ಟಿಹೋದನು. ಇಸ್ರಾಯೇಲ್ಯರು ಅಟ್ಟಹಾಸದಿಂದ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈಜಿಪ್ಟಿನ ಅರಸನಾದ ಫರೋಹನ ಹೃದಯವನ್ನು ಯೆಹೋವ ದೇವರು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲರನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲರು ಧೈರ್ಯದಿಂದ ಹೊರಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:8
21 ತಿಳಿವುಗಳ ಹೋಲಿಕೆ  

ಇಸ್ರೇಲರ ದೇವರು ನಮ್ಮ ಪಿತೃಗಳನ್ನು ಆರಿಸಿಕೊಂಡನು. ಈಜಿಪ್ಟಿನಲ್ಲಿ ಪ್ರವಾಸಿಗರಾಗಿ ವಾಸಿಸುತ್ತಿದ್ದ ತನ್ನ ಜನರಿಗೆ ದೇವರು ಸಹಾಯಮಾಡಿ ಅಭಿವೃದ್ಧಿಪಡಿಸಿದನು. ದೇವರು ತನ್ನ ಮಹಾಶಕ್ತಿಯಿಂದ ಅವರನ್ನು ಆ ದೇಶದೊಳಗಿಂದ ಬರಮಾಡಿದನು.


ಮೊದಲನೆ ತಿಂಗಳಿನ ಹದಿನೈದನೆಯ ದಿನದಲ್ಲಿ ಅವರು ರಮ್ಸೇಸ್ ಪಟ್ಟಣವನ್ನು ಬಿಟ್ಟು ಹೊರಟರು. ಪಸ್ಕಹಬ್ಬದ ಮರುದಿನದಲ್ಲಿ ಇಸ್ರೇಲರು ಜಯದೊಂದಿಗೆ ತಮ್ಮ ಕೈಗಳನ್ನು ಎತ್ತಿಕೊಂಡು ಈಜಿಪ್ಟಿನಿಂದ ಹೊರಗೆ ನಡೆದರು. ಈಜಿಪ್ಟಿನ ಜನರೆಲ್ಲರೂ ಇದನ್ನು ನೋಡಿದರು.


ಆಮೇಲೆ ಯೆಹೋವನು ತನ್ನ ಭುಜಪರಾಕ್ರಮದಿಂದ ನಮ್ಮನ್ನು ಈಜಿಪ್ಟಿನಿಂದ ಹೊರತಂದನು. ಆತನು ಅದ್ಭುತಕಾರ್ಯಗಳನ್ನು, ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿದನು.


ನಾನು ಫರೋಹನ ಹೃದಯವನ್ನು ಕಠಿಣಪಡಿಸುವುದರಿಂದ ಅವನು ನಿಮ್ಮನ್ನು ಬೆನ್ನಟ್ಟುವನು. ಆದರೆ ನಾನು ಫರೋಹನನ್ನು ಮತ್ತು ಅವನ ಸೈನ್ಯವನ್ನು ಸೋಲಿಸುವೆನು. ಇದು ನನಗೆ ಗೌರವವನ್ನು ತರುವುದು. ಆಗ ನಾನೇ ಯೆಹೋವನೆಂದು ಈಜಿಪ್ಟಿನ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು. ಇಸ್ರೇಲರು ದೇವರಿಗೆ ವಿಧೇಯರಾಗಿ ಆತನು ಹೇಳಿದ್ದನ್ನು ಮಾಡಿದರು.


ಇದು ನಿಮ್ಮ ಕೈಗೆ ದಾರ ಕಟ್ಟಿದಂತಿರುತ್ತದೆ; ನಿಮ್ಮ ಕಣ್ಣುಗಳ ಮುಂದೆ ಒಂದು ಚಿಹ್ನೆಯಂತೆ ಇರುತ್ತದೆ. ಯೆಹೋವನು ತನ್ನ ಮಹಾಶಕ್ತಿಯಿಂದ ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನೆಂಬುದನ್ನು ಜ್ಞಾಪಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ.”


ಆಗ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನಾನು ನನ್ನ ಮಹಾಶಕ್ತಿಯನ್ನು ಅವನಿಗೆ ವಿರುದ್ಧವಾಗಿ ಉಪಯೋಗಿಸುವುದರಿಂದ ಅವನು ನನ್ನ ಜನರನ್ನು ಹೋಗಗೊಡಿಸುವನು; ಬಲವಂತದಿಂದ ಅವರನ್ನು ಹೊರಡಿಸುವನು” ಎಂದು ಹೇಳಿದನು.


ನೀನು ನನ್ನ ಮೇಲೆ ಎಷ್ಟೋ ಪ್ರೀತಿಯನ್ನು ಇಟ್ಟಿರುವೆ. ನೀನು ನನ್ನನ್ನು ಪಾತಾಳದಿಂದ ರಕ್ಷಿಸಿದೆ.


ಆದರೆ ಅವರ ವೈರಿಗಳು ಏನು ಹೇಳುತ್ತಾರೆಂಬುದು ನನಗೆ ಗೊತ್ತಿದೆ. ವೈರಿಯು ಅರ್ಥಮಾಡಿಕೊಳ್ಳುವುದಿಲ್ಲ, ಅವರಿಗೆ ವಿಷಯವು ತಿಳಿಯದು. ಅವರು ಜಂಬದಿಂದ ಹೀಗೆ ಹೇಳುವರು, “ಯೆಹೋವನು ಇಸ್ರೇಲನ್ನು ನಾಶಮಾಡಲಿಲ್ಲ. ನಾವು ನಮ್ಮ ಬಲದಿಂದಲೇ ಅವರನ್ನು ಬಡಿದುಹಾಕಿದೆವು.”’


ಆದ್ದರಿಂದ ಯೆಹೋವನು ಅವರನ್ನು ಕೆಂಪು ಸಮುದ್ರದ ಅರಣ್ಯದ ಮೂಲಕ ನಡೆಸಿದನು. ಇಸ್ರೇಲರು ಈಜಿಪ್ಟನ್ನು ಬಿಟ್ಟಾಗ ಯುದ್ಧವಸ್ತ್ರಗಳನ್ನು ಧರಿಸಿಕೊಂಡಿದ್ದರು.


“ಈ ಹಬ್ಬವು ನಿಮ್ಮ ಕೈಗಳಲ್ಲಿ ಜ್ಞಾಪಕಪಟ್ಟಿಯಂತಿದ್ದು ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ಮತ್ತು ನಿಮಗೆ ಆತನು ನೀಡಿದ ಉಪದೇಶಗಳನ್ನು ನೆನಪಿಗೆ ತರುತ್ತದೆ.


ಮೋಶೆ ಈಜಿಪ್ಟಿಗೆ ಪ್ರಯಾಣ ಮಾಡುತ್ತಿದ್ದಾಗ ಯೆಹೋವನು ಅವನೊಡನೆ ಮಾತಾಡಿ, “ನೀನು ಫರೋಹನೊಂದಿಗೆ ಮಾತಾಡುವಾಗ ನಾನು ತೋರಿಸಿಕೊಟ್ಟ ಅದ್ಭುತಕಾರ್ಯಗಳನ್ನೆಲ್ಲಾ ಅವನ ಮುಂದೆ ಮಾಡು. ಆದರೂ ನಾನು ಫರೋಹನ ಹೃದಯವನ್ನು ಕಠಿಣಗೊಳಿಸುವುದರಿಂದ ಅವನು ಇಸ್ರೇಲರನ್ನು ಹೋಗಗೊಡಿಸುವುದಿಲ್ಲ.


ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಫರೋಹನು ಮೋಶೆ ಆರೋನರ ಮಾತನ್ನು ಕೇಳಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.


ಯೆಹೋವನು ಫರೋಹನ ಹೃದಯವನ್ನು ಮತ್ತೆ ಕಠಿಣಗೊಳಿಸಿದನು. ಆದ್ದರಿಂದ ಫರೋಹನು ಅವರನ್ನು ಕಳುಹಿಸಿಕೊಡಲಿಲ್ಲ.


ಫರೋಹನು ತನ್ನ ಆರುನೂರು ರಥಗಳನ್ನೂ ಅವುಗಳ ಚಾಲಕರನ್ನೂ ಮತ್ತು ಅವುಗಳೊಡನೆ ಈಜಿಪ್ಟಿನ ಇತರ ರಥಗಳನ್ನೂ ತೆಗೆದುಕೊಂಡನು. ಪ್ರತಿಯೊಂದು ರಥದಲ್ಲಿ ಒಬ್ಬ ದಳಪತಿ ಇದ್ದನು.


ಈಜಿಪ್ಟಿನವರು ನಿಮ್ಮನ್ನು ಬೆನ್ನಟ್ಟುವಂತೆ ನಾನು ಅವರ ಹೃದಯಗಳನ್ನು ಕಠಿಣಗೊಳಿಸುವುದರಿಂದ ನಾನು ಫರೋಹನಿಗಿಂತಲೂ ಅವನ ಎಲ್ಲಾ ರಾಹುತರುಗಳಿಗಿಂತಲೂ ರಥಗಳಿಗಿಂತಲೂ ಶಕ್ತಿಶಾಲಿ ಎಂಬುದನ್ನು ನಿಮಗೆ ತೋರಿಸುವೆನು.


“‘ನಾವು ಅವರನ್ನು ಬೆನ್ನಟ್ಟಿ ಹಿಡಿಯುವೆವು; ನಾವು ಅವರ ಸಂಪತ್ತನ್ನೆಲ್ಲಾ ತೆಗೆದುಕೊಳ್ಳುವೆವು. ನಾವು ಖಡ್ಗದಿಂದ ಅವರನ್ನು ಸಂಹರಿಸುವೆವು. ನಮ್ಮ ಭುಜಬಲದಿಂದ ಅವರ ಸ್ವತ್ತುಗಳನ್ನೆಲ್ಲಾ ವಶಪಡಿಸಿಕೊಳ್ಳುವೆವು’ ಎಂದುಕೊಂಡರು ವೈರಿಗಳು.


ಅವರ ಹೃದಯವನ್ನು ಕಠಿಣಗೊಳಿಸು! ಬಳಿಕ ಅವರನ್ನು ಶಪಿಸು!


ನಿಮ್ಮ ದೇವರಾಗಿರುವ ಯೆಹೋವನು ನಾನೇ! ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಿರಿ. ಆದರೆ ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ನೀವು ಗುಲಾಮರಾಗಿ ಭಾರವಾದ ಹೊರೆಗಳನ್ನು ಹೊರುತ್ತಾ ಗೂನಾಗಿದ್ದಿರಿ. ಆದರೆ ನಿಮ್ಮ ಭುಜದ ಮೇಲಿದ್ದ್ದ ನೊಗವನ್ನು ನಾನು ಮುರಿದುಹಾಕಿ ನೀವು ಮತ್ತೆ ನೆಟ್ಟಗೆ ನಡೆಯುವಂತೆ ಮಾಡಿದೆನು.


ತಾವು ಶಕ್ತಿಶಾಲಿಗಳೆಂಬ ಭಾವನೆಯನ್ನು ಯೆಹೋವನು ಆ ಜನರಲ್ಲಿ ಹುಟ್ಟಿಸಿ ಅವರನ್ನು ಇಸ್ರೇಲರ ಮೇಲೆ ಯುದ್ಧಕ್ಕೆ ಬರಮಾಡಿದನು. ಯುದ್ಧದಲ್ಲಿ ಕರುಣೆಯಿಲ್ಲದೆ ಅವರನ್ನು ಸಂಹರಿಸಬೇಕೆಂಬುದು ಯೆಹೋವನ ಯೋಜನೆಯಾಗಿತ್ತು. ಯೆಹೋವನು ಮೋಶೆಗೆ ಹೇಳಿದ ರೀತಿಯಲ್ಲಿ ಯೆಹೋಶುವನು ಆ ಪಟ್ಟಣಗಳನ್ನು ನಾಶಮಾಡಲು ಇದರಿಂದ ಸಾಧ್ಯವಾಯಿತು.


ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನ್ ನದಿಗೆ ಬರುವಂತೆ ಮಾಡುತ್ತೇನೆ. ಅಲ್ಲಿ ನೀನು ಸೀಸೆರನನ್ನು ಸೋಲಿಸುವಂತೆ ಮಾಡುತ್ತೇನೆ’ ಎಂದು ಹೇಳಿದ್ದಾನೆ” ಎಂದಳು.


ಆತನು ತನ್ನ ಜನರನ್ನು ಈಜಿಪ್ಟಿನಿಂದ ಹೊರತಂದನು. ಜನರು ಉಲ್ಲಾಸಪಡುತ್ತಾ ಹರ್ಷಗೀತೆಗಳನ್ನು ಹಾಡುತ್ತಾ ಹೊರಬಂದರು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು