Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:9 - ಪರಿಶುದ್ದ ಬೈಬಲ್‌

9 ಈಜಿಪ್ಟಿನ ಸೈನ್ಯದಲ್ಲಿ ಅನೇಕ ರಾಹುತರು ಇದ್ದರು; ರಥಗಳೂ ಇದ್ದವು. ಅವರು ಇಸ್ರೇಲರನ್ನು ಬೆನ್ನಟ್ಟಿದರು. ಇಸ್ರೇಲರು ಪೀಹಹೀರೋತಿನ ಹತ್ತಿರವಿರುವ ಬಾಳ್ಚೆಫೋನಿನ ಎದುರಾಗಿ ಸಮುದ್ರತೀರದಲ್ಲಿ ಇಳಿದುಕೊಳ್ಳುವಾಗಲೇ ಈಜಿಪ್ಟಿನ ಸೈನ್ಯದವರು ಅವರ ಹತ್ತಿರಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಐಗುಪ್ತ್ಯರು ಅಂದರೆ ಫರೋಹನ ಕುದುರೆಗಳೂ, ರಥಗಳೂ, ಅವನ ರಾಹುತರೂ, ಸೈನ್ಯದವರೆಲ್ಲರೂ ಅವರ ಹಿಂದೆ ಹೊರಟು ಇಸ್ರಾಯೇಲರು ಪೀಹಹೀರೋತಿನ ಹತ್ತಿರ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುತ್ತಿರುವಾಗಲೇ ಅವರ ಸಮೀಪಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈಜಿಪ್ಟಿನವರು, ಅಂದರೆ ಫರೋಹನ ಕುದುರೆಗಳು, ರಥಗಳು, ರಾಹುತರು, ಸೈನ್ಯದವರೆಲ್ಲರು ಅವನ ಹಿಂದೆ ಹೊರಟು ಇಸ್ರಯೇಲರ ಸಮೀಪಕ್ಕೆ ಬಂದರು; ಪೀಹಹೀರೋತಿನ ಬಳಿ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುವಾಗಲೇ ಅವರ ಹತ್ತಿರಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಐಗುಪ್ತ್ಯರು ಅಂದರೆ ಫರೋಹನ ಕುದುರೆಗಳೂ ರಥಗಳೂ ಅವನ ರಾಹುತರೂ ಸೈನ್ಯದವರೆಲ್ಲರೂ ಅವರ ಹಿಂದೆ ಹೊರಟು ಇಸ್ರಾಯೇಲ್ಯರು ಪೀಹಹೀರೋತಿನ ಹತ್ತಿರ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುವಾಗಲೇ ಅವರ ಹತ್ತಿರಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈಜಿಪ್ಟಿನವರು ಅವರನ್ನು ಹಿಂದಟ್ಟಿದರು. ಅವರು ಸಮುದ್ರ ತೀರದಲ್ಲಿ ಇಳಿದುಕೊಂಡಿರುವಾಗ, ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸಮೀಪದಲ್ಲಿ ಬಾಲ್ಜೆಫೋನಿನ ಎದುರಾಗಿ ಇಸ್ರಾಯೇಲರನ್ನು ಸಮೀಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:9
5 ತಿಳಿವುಗಳ ಹೋಲಿಕೆ  

“‘ನಾವು ಅವರನ್ನು ಬೆನ್ನಟ್ಟಿ ಹಿಡಿಯುವೆವು; ನಾವು ಅವರ ಸಂಪತ್ತನ್ನೆಲ್ಲಾ ತೆಗೆದುಕೊಳ್ಳುವೆವು. ನಾವು ಖಡ್ಗದಿಂದ ಅವರನ್ನು ಸಂಹರಿಸುವೆವು. ನಮ್ಮ ಭುಜಬಲದಿಂದ ಅವರ ಸ್ವತ್ತುಗಳನ್ನೆಲ್ಲಾ ವಶಪಡಿಸಿಕೊಳ್ಳುವೆವು’ ಎಂದುಕೊಂಡರು ವೈರಿಗಳು.


ಹೀಗೆ ನಿಮ್ಮ ಪೂರ್ವಿಕರು ಈಜಿಪ್ಟಿನಿಂದ ಹೊರಡು ಕೆಂಪು ಸಮುದ್ರಕ್ಕೆ ಬಂದರು. ಈಜಿಪ್ಟಿನ ಜನರು ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಅವರನ್ನು ಬೆನ್ನಟ್ಟಿಕೊಂಡು ಬಂದರು.


“ಪೀಹಹೀರೋತಿನ ಪೂರ್ವಕಡೆಯಲ್ಲಿ ಪ್ರಯಾಣ ಮಾಡಿ ಬಾಳ್ಚೆಫೋನಿಗೆ ಸಮೀಪದಲ್ಲಿರುವ ಮಿಗ್ದೋಲ್ ಮತ್ತು ಕೆಂಪು ಸಮುದ್ರದ ನಡುವೆ ಇಳಿದುಕೊಳ್ಳಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು.


ಆದ್ದರಿಂದ ಯೆಹೋವನು ಅವರನ್ನು ಕೆಂಪು ಸಮುದ್ರದ ಅರಣ್ಯದ ಮೂಲಕ ನಡೆಸಿದನು. ಇಸ್ರೇಲರು ಈಜಿಪ್ಟನ್ನು ಬಿಟ್ಟಾಗ ಯುದ್ಧವಸ್ತ್ರಗಳನ್ನು ಧರಿಸಿಕೊಂಡಿದ್ದರು.


ಅವರು ಏತಾಮನ್ನು ಬಿಟ್ಟು ಪೀಹಹೀರೋತಿಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು. ಇದು ಬಾಳ್ಚೆಫೋನಿನ ಹತ್ತಿರವಿತ್ತು. ಜನರು ಮಿಗ್ದೋಲಿನ ಬಳಿ ಪಾಳೆಯ ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು