ವಿಮೋಚನಕಾಂಡ 15:11 - ಪರಿಶುದ್ದ ಬೈಬಲ್11 “ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ಪರಿಶುದ್ಧತೆಯಲ್ಲಿ ನೀನೇ ಸರ್ವೋತ್ತಮನು. ಭಯಂಕರ ಕಾರ್ಯಗಳನ್ನು ಮಾಡಿ ಪ್ರಖ್ಯಾತಿಹೊಂದಿದವನೂ ನೀನೇ. ಅದ್ಭುತಕಾರ್ಯಗಳನ್ನು ಮಾಡುವಾತನೂ ನೀನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವನೇ, ದೇವರುಗಳಲ್ಲಿ ನಿನ್ನ ಸಮಾನನು ಯಾವನು? ಪರಿಶುದ್ಧತ್ವದಿಂದ ಸರ್ವೋತ್ತಮನೂ ಪ್ರಖ್ಯಾತ ಕೃತ್ಯಗಳನ್ನು ಮಾಡಿರುವದರಿಂದ ಭಯಂಕರನೂ ಅದ್ಭುತಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನನು ಎಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರೇ, ನಿಮ್ಮ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ವೈಭವ ಹೊಂದಿದವರೂ, ಮಹಿಮೆಯಲ್ಲಿ ಅತಿಶಯರೂ, ಅದ್ಭುತಗಳನ್ನು ಮಾಡುವವರೂ ಆದ ನಿಮ್ಮ ಹಾಗೆ ಯಾರಿದ್ದಾರೆ? ಅಧ್ಯಾಯವನ್ನು ನೋಡಿ |
ಈ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಈ ಜೀವಿಗಳ ಹೊರಭಾಗದಲ್ಲೆಲ್ಲಾ ಮತ್ತು ಒಳಭಾಗದಲ್ಲೆಲ್ಲಾ ಕಣ್ಣುಗಳಿದ್ದವು. ಈ ನಾಲ್ಕು ಜೀವಿಗಳು ಹಗಲಿರುಳು ಎಡಬಿಡದೆ ಹೀಗೆ ಹೇಳುತ್ತಿದ್ದವು: “ದೇವರಾದ ಪ್ರಭು, ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಆತನು ಸರ್ವಶಕ್ತನು. ಆತನು ಭೂತಕಾಲದಲ್ಲಿ ಇದ್ದವನೂ ವರ್ತಮಾನಕಾಲದಲ್ಲಿ ಇರುವಾತನೂ ಮುಂದೆ ಬರುವಾತನೂ ಆಗಿದ್ದಾನೆ.”
“ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!