Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:13 - ಪರಿಶುದ್ದ ಬೈಬಲ್‌

13 ನೀನು ಬಿಡುಗಡೆ ಮಾಡಿದ ನಿನ್ನ ಜನರನ್ನು ಪ್ರೀತಿಯಿಂದ ನಡೆಸುವೆ. ನಿನ್ನ ಬಲದಿಂದ ನೀನು ಈ ಜನರನ್ನು ನಿನ್ನ ಪವಿತ್ರವಾದ ದೇಶಕ್ಕೆ ನಡಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ನೀನು ನಿನ್ನ ಪ್ರಜೆಯನ್ನು ಬಿಡುಗಡೆ ಮಾಡಿರುವೆ. ನಿನ್ನ ಶಕ್ತಿಯಿಂದ ಅವರನ್ನು ನೀನು ವಾಸಮಾಡುವ ಪರಿಶುದ್ಧ ನಿವಾಸಕ್ಕೆ ನಡೆಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೀ ಬಿಡುಗಡೆ ಮಾಡಿದ ಜನರನ್ನು ನಡೆಸಿಕೊಂಡೆ ಪ್ರೀತಿಯಿಂದ ನಿನ್ನ ಶ್ರೀನಿವಾಸದ ತನಕ ಅವರನ್ನು ಬರಮಾಡಿದೆ ಶಕ್ತಿಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀನು ಬಿಡುಗಡೆ ಮಾಡಿದ ಪ್ರಜೆಯನ್ನೋ ಪ್ರೀತಿಯಿಂದ ನಡಿಸಿಕೊಂಡು ನಿನ್ನ ಪರಿಶುದ್ಧ ನಿವಾಸಸ್ಥಾನದ ತನಕ ನಿನ್ನ ಶಕ್ತಿಯಿಂದ ಬರಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀವು ವಿಮೋಚಿಸಿದ ಜನರನ್ನು ನೀವು ನಿಮ್ಮ ಪ್ರೀತಿಯಿಂದ ನಡೆಸಿದ್ದೀರಿ. ನೀವು ಅವರನ್ನು ನಿಮ್ಮ ಬಲದಿಂದ ನಿಮ್ಮ ಪರಿಶುದ್ಧ ನಿವಾಸಕ್ಕೆ ನಡೆಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:13
21 ತಿಳಿವುಗಳ ಹೋಲಿಕೆ  

ಕುರುಬನು ಕುರಿಹಿಂಡನ್ನು ಕರೆದೊಯ್ಯುವಂತೆ ನಿನ್ನ ಜನರನ್ನು ಕರೆದೊಯ್ಯಲು ಮೋಶೆಯನ್ನೂ ಆರೋನನನ್ನೂ ಉಪಯೋಗಿಸಿದೆ.


ದೇವರ ಶಕ್ತಿಯು ನಿಮ್ಮ ನಂಬಿಕೆಯ ಮೂಲಕ ನಿಮ್ಮನ್ನು ಕಾಯುತ್ತದೆ. ನಿಮಗೆ ರಕ್ಷಣೆಯಾಗುವವರೆಗೆ ನಿಮ್ಮನ್ನು ಸುರಕ್ಷಿತವಾಗಿಡುತ್ತದೆ. ಸಿದ್ಧವಾಗಿರುವ ಆ ರಕ್ಷಣೆಯು ಅಂತ್ಯಕಾಲದಲ್ಲಿ ನಿಮಗೆ ದೊರೆಯುವುದು.


‘ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ಮರಳುಗಾಡಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ನಿರ್ಜನವಾದ ಬೆಟ್ಟಪ್ರದೇಶದಿಂದ ನಮ್ಮನ್ನು ತಂದ ಯೆಹೋವನು ಎಲ್ಲಿದ್ದಾನೆ? ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. ಯೆಹೋವನು ನಮ್ಮನ್ನು ಅಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. ಆ ಭೂಮಿಯ ಮಾರ್ಗವಾಗಿ ಯಾರೂ ಪ್ರಯಾಣ ಮಾಡುವುದಿಲ್ಲ. ಯಾರೂ ಆ ಭೂಮಿಯ ಮೇಲೆ ವಾಸ ಮಾಡುವದಿಲ್ಲ. ಈಗ ಆ ಯೆಹೋವನು ಎಲ್ಲಿದ್ದಾನೆ?’” ನಿಮ್ಮ ಪೂರ್ವಿಕರು ಆ ಪ್ರಶ್ನೆಗಳನ್ನು ಕೇಳಲೇ ಇಲ್ಲ.


ಆತನು ಆಜ್ಞಾಪಿಸಲು ಕೆಂಪು ಸಮುದ್ರವು ಒಣಗಿಹೋಯಿತು. ಆತನು ಆಳವಾದ ಸಮುದ್ರವನ್ನು ಇಬ್ಭಾಗ ಮಾಡಿ ಮರಳುಗಾಡಿನಂತೆ ಒಣಗಿಹೋಗಿದ್ದ ಭೂಮಿಯ ಮೇಲೆ ನಮ್ಮ ಪೂರ್ವಿಕರನ್ನು ನಡೆಸಿದನು.


ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಬಹಳವಾಗಿ ಪ್ರೀತಿಸಿದನು.


ಇಸ್ರೇಲನ್ನು ಕಾಯುವ ಕುರುಬನೇ, ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ, ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ, ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ.


ಆದರೆ ಲೋಟನು ಗಲಿಬಿಲಿಗೊಂಡು ತಡಮಾಡಲು ಆ ಇಬ್ಬರು ಪುರುಷರು ಲೋಟನನ್ನೂ ಅವನ ಹೆಂಡತಿಯನ್ನೂ ಅವನ ಇಬ್ಬರು ಹೆಣ್ಣುಮಕ್ಕಳನ್ನೂ ಕೈಹಿಡಿದುಕೊಂಡು ನಗರದ ಹೊರಕ್ಕೆ ಸುರಕ್ಷಿತವಾಗಿ ತಂದುಬಿಟ್ಟರು. ಹೀಗೆ ಯೆಹೋವನು ಲೋಟನಿಗೂ ಅವನ ಕುಟುಂಬದವರಿಗೂ ದಯೆತೋರಿದನು.


ಹಗಲಿನಲ್ಲಿ ಅವರನ್ನು ನಡೆಸಲು ಮೇಘಸ್ತಂಭವನ್ನು ಉಪಯೋಗಿಸಿದೆ. ರಾತ್ರಿವೇಳೆಯಲ್ಲಿ ಅಗ್ನಿಸ್ತಂಭವನ್ನು ಉಪಯೋಗಿಸಿದೆ. ಹೀಗೆ ಅವರ ಮಾರ್ಗವನ್ನು ಬೆಳಕಿನಿಂದ ಹೊದಿಸಿದೆ. ಎಲ್ಲಿಗೆ ಹೋಗಬೇಕೆಂದು ಅವರಿಗೆ ತೋರಿಸಿದಿ.


ಆದ್ದರಿಂದ ನನ್ನ ಈ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು.


ನಿನ್ನ ಭುಜಬಲವನ್ನು ಅವರು ಕಂಡು ಭಯಭೀತರಾಗುವರು. ಯೆಹೋವನ ಜನರು ದಾಟಿ ಹೋಗುವವರೆಗೆ, ನೀನು ರೂಪಿಸಿದ ಜನರು ದಾಟಿ ಹೋಗುವವರೆಗೆ, ಅವರು ಬಂಡೆಯಂತೆ ಮೌನವಾಗಿರುವರು.


ನೀನು ನಿನ್ನ ಜನರನ್ನು ನಿನ್ನ ಬೆಟ್ಟದ ಸೀಮೆಗೂ ನಿನ್ನ ಸಿಂಹಾಸನಕ್ಕಾಗಿ ನೀನು ಸಿದ್ಧಮಾಡಿದ ಸ್ಥಳಕ್ಕೂ ನಡಿಸುವೆ. ಯೆಹೋವನೇ, ಒಡೆಯನೇ, ನಿನ್ನ ಕೈಗಳಿಂದ ನಿನ್ನ ಆಲಯವನ್ನು ಕಟ್ಟು.


“ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಆ ದೇಶದಿಂದ ಹೊರಗೆ ನಡಿಸಿದವನು ನಾನೇ.


ರಾಜನಾದ ದಾವೀದನು ಚಾದೋಕನಿಗೆ, “ದೇವರ ಪವಿತ್ರ ಪೆಟ್ಟಿಗೆಯನ್ನು ಜೆರುಸಲೇಮಿಗೆ ಮತ್ತೆ ತೆಗೆದುಕೊಂಡು ಹೋಗು. ಯೆಹೋವನು ನನಗೆ ದಯಾಪರನಾಗಿದ್ದರೆ, ನನ್ನನ್ನು ಮತ್ತೆ ಬರಮಾಡುತ್ತಾನೆ. ಜೆರುಸಲೇಮನ್ನು ಮತ್ತು ಆತನ ಆಲಯವನ್ನು ಮತ್ತೆ ನಾನು ನೋಡುವ ಹಾಗೆ ಯೆಹೋವನು ಮಾಡುತ್ತಾನೆ.


ಬಹುಕಾಲದ ಹಿಂದೆ ನೀನು ಕೊಂಡುಕೊಂಡ ನಿನ್ನ ಜನರನ್ನು ಜ್ಞಾಪಿಸಿಕೊ. ನೀನು ನಮ್ಮನ್ನು ರಕ್ಷಿಸಿದೆ. ನಾವು ನಿನ್ನವರೇ. ನೀನು ವಾಸಿಸಿದ ಚೀಯೋನ್ ಪರ್ವತವನ್ನು ಜ್ಞಾಪಿಸಿಕೊ.


ದೇವರೇ ತಮ್ಮ ಆಶ್ರಯಸ್ಥಾನವೆಂಬುದನ್ನೂ ಮಹೋನ್ನತನಾದ ದೇವರೇ ತಮ್ಮ ರಕ್ಷಕನೆಂಬುದನ್ನೂ ಅವರು ಜ್ಞಾಪಿಸಿಕೊಳ್ಳುತ್ತಿದ್ದರು.


ನೀನು ಸಮುದ್ರವನ್ನು ಬತ್ತಿಸಿರುವೆ. ಮಹಾ ಆಳದ ಗುಂಡಿಗಳ ನೀರನ್ನು ನೀನು ಬತ್ತಿಸಿರುವೆ. ಅತ್ಯಂತ ಆಳವಾದ ಸಮುದ್ರದ ತಳವನ್ನು ನೀನು ರಸ್ತೆಯನ್ನಾಗಿ ಮಾಡಿರುವೆ. ನಿನ್ನ ಜನರು ಆ ರಸ್ತೆಯಲ್ಲಿ ಸಮುದ್ರವನ್ನು ದಾಟಿ ರಕ್ಷಿಸಲ್ಪಟ್ಟರು.


ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


ಜನರಿಗೆ ಅನೇಕ ತೊಂದರೆಗಳು ಪ್ರಾಪ್ತವಾಗಿದ್ದವು. ಆದರೆ ಯೆಹೋವನು ಅವರಿಗೆ ವಿರುದ್ಧನಾಗಿರಲಿಲ್ಲ. ಆತನು ಅವರನ್ನು ಪ್ರೀತಿಸಿ ಅವರಿಗಾಗಿ ಚಿಂತಿಸಿದನು; ತನ್ನ ವಿಶೇಷ ದೂತನನ್ನು ಕಳುಹಿಸಿ ಅವರನ್ನು ರಕ್ಷಿಸಿದನು. ಯೆಹೋವನು ಅವರನ್ನು ನಿತ್ಯಕಾಲಕ್ಕೂ ಸಲಹುವನು. ತನ್ನ ಜನರಿಗೆ ಯೆಹೋವನು ಸಲಹುವದನ್ನು ನಿಲ್ಲಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು