ವಿಮೋಚನಕಾಂಡ 15:14 - ಪರಿಶುದ್ದ ಬೈಬಲ್14 “ಬೇರೆ ಜನಾಂಗಗಳವರು ಇದನ್ನು ಕೇಳಿ ಭಯಭೀತರಾಗುವರು; ಫಿಲಿಷ್ಟಿಯರು ಭಯದಿಂದ ತಲ್ಲಣಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಜನಾಂಗಗಳು ಇದನ್ನು ಕೇಳಿ ನಡುಗುವರು. ಫಿಲಿಷ್ಟಿಯದಲ್ಲಿ ವಾಸಿಸುವವರು ಭಯಭೀತರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇದನ್ನು ಕೇಳಿ ನಡುಗುತ್ತಿರುವುವು ಜನಾಂಗಗಳು ಪ್ರಸವವೇದನೆ ಪಡುತ್ತಿರುವರು ಫಿಲಿಷ್ಟಿಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಜನಾಂಗಗಳು ಇದನ್ನು ಕೇಳಿ ನಡುಗುತ್ತಿರುವವು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಜನರು ಇದನ್ನು ಕೇಳಿದಾಗ ಭಯಪಡುವರು. ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವುದು. ಅಧ್ಯಾಯವನ್ನು ನೋಡಿ |
ಬೆಯೋರನ ಮಗನಾದ ಬಿಳಾಮನನ್ನು ಕರೆಸುವುದಕ್ಕೆ ಕೆಲವು ಸಂದೇಶಕರನ್ನು ಕಳುಹಿಸಿದನು. ಬಿಳಾಮನು ಯೂಫ್ರೆಟೀಸ್ ನದಿಯ ಬಳಿ “ಪೆತೋರ್” ಎಂಬ ಸ್ಥಳದಲ್ಲಿದ್ದನು. ಬಿಳಾಮನ ಜನರು ಇಲ್ಲಿ ವಾಸಿಸುತ್ತಿದ್ದರು. ಬಾಲಾಕನು ತನ್ನ ಸಂದೇಶಕರನ್ನು ಕಳುಹಿಸಿ ಬಿಳಾಮನಿಗೆ, “ಒಂದು ಜನಾಂಗವು ಈಜಿಪ್ಟಿನಿಂದ ಬಂದಿದೆ. ಅವರು ದೇಶವನ್ನೆಲ್ಲಾ ಮುಚ್ಚಿಕೊಂಡು ನನ್ನ ಪಕ್ಕದಲ್ಲಿ ನೆಲೆಸಿದ್ದಾರೆ. ಅವರು ನಮಗಿಂತ ಬಲಿಷ್ಠರು.