ವಿಮೋಚನಕಾಂಡ 15:16 - ಪರಿಶುದ್ದ ಬೈಬಲ್16 ನಿನ್ನ ಭುಜಬಲವನ್ನು ಅವರು ಕಂಡು ಭಯಭೀತರಾಗುವರು. ಯೆಹೋವನ ಜನರು ದಾಟಿ ಹೋಗುವವರೆಗೆ, ನೀನು ರೂಪಿಸಿದ ಜನರು ದಾಟಿ ಹೋಗುವವರೆಗೆ, ಅವರು ಬಂಡೆಯಂತೆ ಮೌನವಾಗಿರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಭಯವೂ, ಹೆದರಿಕೆಯೂ, ಅವರಿಗುಂಟಾಗುವುದು. ನಿನ್ನ ಭುಜಬಲದ ಶಕ್ತಿಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು. ಅಷ್ಟರಲ್ಲಿ ಯೆಹೋವನೇ, ನೀನು ಕಾಪಾಡಿದ ನಿನ್ನ ಪ್ರಜೆಗಳು ದಾಟಿ ಹೋಗಿ ದೇಶವನ್ನು ಸೇರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಭಯಭೀತಿ ಅವರನ್ನು ಆವರಿಸಿದೆ ನಿನ್ನ ಭುಜಬಲ ನೋಡಿ ಸ್ತಬ್ದರಾಗಿಹರವರು ಕಲ್ಲಿನಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಗಾಬರಿಯೂ ಹೆದರಿಕೆಯೂ ಅವರನ್ನು ಹಿಡಿದವೆ. ನಿನ್ನ ಭುಜಬಲದ ದೆಸೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗಿದ್ದಾರೆ. ಅಷ್ಟರಲ್ಲಿ ಯೆಹೋವನೇ, ನೀನು ಸಂಪಾದಿಸಿಕೊಂಡ ನಿನ್ನ ಪ್ರಜೆಗಳು ಸಾಗಿಹೋಗಿ ದೇಶವನ್ನು ಸೇರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಭಯವೂ ಹೆದರಿಕೆಯೂ ಅವರಿಗಾಗುವುದು; ನಿಮ್ಮ ಜನರು ದಾಟಿ ಹೋಗುವವರೆಗೆ ಯೆಹೋವ ದೇವರೇ, ನೀವು ಕೊಂಡುಕೊಂಡ ಜನರು ದಾಟಿಹೋಗುವವರೆಗೆ ನಿಮ್ಮ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗಿರುವರು. ಅಧ್ಯಾಯವನ್ನು ನೋಡಿ |
ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.
“ನಿನ್ನ ಜನರಾದ ಇಸ್ರೇಲರಂಥವರು ಈ ಲೋಕದಲ್ಲಿ ಬೇರೆ ಯಾರೂ ಇಲ್ಲ, ಅವರು ವಿಶೇಷವಾದ ಜನರು. ಅವರು ಗುಲಾಮರಾಗಿದ್ದರು, ಆದರೆ ಅವರನ್ನು ಈಜಿಪ್ಟಿನಿಂದ ನೀನು ಹೊರತಂದು ಸ್ವತಂತ್ರರನ್ನಾಗಿ ಮಾಡಿರುವೆ. ನೀನು ಅವರನ್ನು ನಿನ್ನ ಜನರನ್ನಾಗಿ ಮಾಡಿಕೊಂಡೆ. ಇಸ್ರೇಲರಿಗಾಗಿ ನೀನು ಉತ್ತಮವಾದ ಮತ್ತು ಮಹತ್ತಾದ ಕಾರ್ಯಗಳನ್ನು ಮಾಡಿದೆ. ನಿನ್ನ ದೇಶಕ್ಕಾಗಿ ನೀನು ಮಹತ್ಕಾರ್ಯಗಳನ್ನು ಮಾಡಿದೆ.
ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ಸಂಗತಿಯನ್ನು ಮೋಶೆ ಇತ್ರೋನನಿಗೆ ಹೇಳಿದನು. ಯೆಹೋವನು ಫರೋಹನಿಗೆ ಮತ್ತು ಈಜಿಪ್ಟಿನವರಿಗೆ ಮಾಡಿದ ಸಂಗತಿಗಳ ಬಗ್ಗೆ ಮೋಶೆಯು ಹೇಳಿದನು. ದಾರಿಯ ಉದ್ದಕ್ಕೂ ತಮಗೆ ಬಂದೊದಗಿದ ಎಲ್ಲಾ ಸಮಸ್ಯೆಗಳ ಬಗ್ಗೆ ಮತ್ತು ತೊಂದರೆ ಬಂದೊದಗಿದ ಪ್ರತಿ ಸಾರಿಯೂ ಯೆಹೋವನು ಇಸ್ರೇಲರನ್ನು ಹೇಗೆ ರಕ್ಷಿಸಿದನೆಂಬುದನ್ನು ಮೋಶೆಯು ತನ್ನ ಮಾವನಿಗೆ ತಿಳಿಸಿದನು.