ವಿಮೋಚನಕಾಂಡ 15:17 - ಪರಿಶುದ್ದ ಬೈಬಲ್17 ನೀನು ನಿನ್ನ ಜನರನ್ನು ನಿನ್ನ ಬೆಟ್ಟದ ಸೀಮೆಗೂ ನಿನ್ನ ಸಿಂಹಾಸನಕ್ಕಾಗಿ ನೀನು ಸಿದ್ಧಮಾಡಿದ ಸ್ಥಳಕ್ಕೂ ನಡಿಸುವೆ. ಯೆಹೋವನೇ, ಒಡೆಯನೇ, ನಿನ್ನ ಕೈಗಳಿಂದ ನಿನ್ನ ಆಲಯವನ್ನು ಕಟ್ಟು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನೀನು ಅವರನ್ನು ನಿನ್ನ ಸ್ವಕೀಯ ದೇಶವಾಗಿರುವ ಬೆಟ್ಟದ ಸೀಮೆಗೆ ತಂದು ಬಲಪಡಿಸುವಿ, ಯೆಹೋವನೇ, ನೀನು ಸ್ವಂತ ನಿವಾಸಕ್ಕಾಗಿ ಕಟ್ಟಿಕೊಂಡಿರುವ ಸ್ಥಳದವರೆಗೂ ಕರ್ತನೇ, ನೀನು ನಿನಗಾಗಿ ಸಿದ್ಧಪಡಿಸಿಕೊಂಡಿರುವ ಪವಿತ್ರ ಪರ್ವತದವರೆಗೂ ಅವರನ್ನು ಬರಮಾಡುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಿನ್ನ ಸ್ವಂತ ನಾಡಾದ ಆ ಬೆಟ್ಟದ ಸೀಮೆಗೆ ನೀನವರನ್ನು ತಂದು ನೆಲೆಗೊಳಿಸುವೆ. ನಿನ್ನ ನಿವಾಸಕ್ಕಾಗಿ ನೀನಾರಿಸಿಕೊಂಡಾ ಸ್ಥಳಕ್ಕೆ ನೀ ಸಿದ್ಧಪಡಿಸಿಕೊಂಡಿರುವಾ ಪವಿತ್ರಾಲಯಕ್ಕೆ ಹೇ ಸರ್ವೇಶ್ವರಾ, ನೀನವರನ್ನು ಬರಮಾಡುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನೀನು ಅವರನ್ನು ನಿನ್ನ ಸ್ವಕೀಯ ದೇಶವಾಗಿರುವ ಬೆಟ್ಟದ ಸೀಮೆಗೆ ತಂದು ಸ್ಥಾಪಿಸುವಿ. ಯೆಹೋವನೇ, ನೀನು ಸ್ವಂತ ನಿವಾಸಕ್ಕಾಗಿ ಏರ್ಪಡಿಸಿಕೊಂಡಿರುವ ಸ್ಥಾನವಾಗಿಯೂ ಕರ್ತನೇ, ನೀನು ಸಿದ್ಧಪಡಿಸಿಕೊಂಡಿರುವ ಪವಿತ್ರಾಲಯವಾಗಿಯೂ ಇರುವಲ್ಲಿಗೆ ಅವರನ್ನು ಬರಮಾಡುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವರನ್ನು ಒಳಗೆ ಬರಮಾಡಿ, ಯೆಹೋವ ದೇವರೇ, ನಿಮ್ಮ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ ಯೆಹೋವ ದೇವರೇ, ನೀವು ವಾಸಿಸುವುದಕ್ಕೆ ಮಾಡಿಕೊಂಡಿರುವ ನಿಮ್ಮ ಸ್ವತ್ತಾಗಿರುವ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿರಿ. ಅಧ್ಯಾಯವನ್ನು ನೋಡಿ |
ನಾನು ನನ್ನ ಜನರಾದ ಇಸ್ರೇಲರಿಗೆ ಒಂದು ಸ್ಥಳವನ್ನು ಆರಿಸಿಕೊಂಡು ಅವರನ್ನು ನೆಲೆಗೊಳಿಸಿದ್ದೇನೆ. ವಾಸಿಸುವುದಕ್ಕಾಗಿ ಅವರ ಸ್ವಂತ ಸ್ಥಳವನ್ನು ಅವರಿಗೆ ಕೊಟ್ಟಿದ್ದೇನೆ. ಆದ್ದರಿಂದ ಈಗ ಅವರು ಅಲೆದಾಡುವ ಅಗತ್ಯವೇ ಇಲ್ಲ. ಮೊದಲು ನನ್ನ ಜನರಾದ ಇಸ್ರೇಲರನ್ನು ಮುನ್ನಡೆಸಲು ನ್ಯಾಯಾಧಿಪತಿಗಳನ್ನು ಕಳುಹಿಸಿದೆನು. ದುಷ್ಟಜನರು ಅವರಿಗೆ ತೊಂದರೆ ಕೊಟ್ಟರು. ಆದರೆ ಅದು ಈಗ ಸಂಭವಿಸುವುದಿಲ್ಲ. ನಿನಗೆ ಶತ್ರು ಭಯವಿಲ್ಲದಂತೆ ಮಾಡುತ್ತೇನೆ; ನಿನ್ನ ಕುಟುಂಬದಿಂದಲೇ ರಾಜರುಗಳನ್ನು ಬರಮಾಡುತ್ತೇನೆ.
“‘ನಿಮ್ಮ ಪ್ರದೇಶವು ದೇವಾರಾಧನೆ ಮಾಡಲು ಅಶುದ್ಧವಾಗಿದ್ದರೆ ನಮ್ಮ ಪ್ರದೇಶಕ್ಕೆ ಬಂದುಬಿಡಿ. ಯೆಹೋವನ ಗುಡಾರವು ನಮ್ಮ ಪ್ರದೇಶದಲ್ಲಿದೆ. ನೀವು ನಮ್ಮ ಸ್ವಲ್ಪ ಭೂಮಿಯನ್ನು ತೆಗೆದುಕೊಂಡು ಅಲ್ಲಿ ವಾಸವಾಗಿರಬಹುದು. ಆದರೆ ಯೆಹೋವನಿಗೆ ವಿರುದ್ಧವಾಗಿ ಹೋಗಬೇಡಿ. ಬೇರೊಂದು ಯಜ್ಞವೇದಿಕೆಯನ್ನು ಕಟ್ಟಬೇಡಿ. ದೇವದರ್ಶನಗುಡಾರದಲ್ಲಿ ನಾವು ಈಗಾಗಲೇ ಯೆಹೋವನಾದ ನಮ್ಮ ದೇವರ ಯಜ್ಞವೇದಿಕೆಯನ್ನು ಹೊಂದಿದ್ದೇವೆ.