Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:20 - ಪರಿಶುದ್ದ ಬೈಬಲ್‌

20 ಆರೋನನ ಅಕ್ಕ ಮಿರ್ಯಾಮಳು ಪ್ರವಾದಿನಿಯಾಗಿದ್ದು ದಮ್ಮಡಿಯನ್ನು ಕೈಯಲ್ಲಿ ತೆಗೆದುಕೊಂಡಳು. ಮಿರ್ಯಾಮಳು ಮತ್ತು ಸ್ತ್ರೀಯರು ಹಾಡುವುದಕ್ಕೂ ಕುಣಿಯುವುದಕ್ಕೂ ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ಕೈಗಳಲ್ಲಿ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆರೋನನ ಅಕ್ಕ ಮಿರ್ಯಾಮಳು ಒಬ್ಬ ಪ್ರವಾದಿನಿ. ಆಕೆ ತಮ್ಮಟೆಯನ್ನು ಕೈಗೆ ತೆಗೆದುಕೊಂಡಳು. ಮಹಿಳೆಯರೆಲ್ಲರು ತಮ್ಮಟೆ ಹಿಡಿದು ನಾಟ್ಯವಾಡುತ್ತಾ ಆಕೆಯ ಹಿಂದೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆರೋನನ ಅಕ್ಕನಾದ ವಿುರ್ಯಾಮಳು ಪ್ರವಾದಿನಿಯಾಗಿದ್ದು ದಮ್ಮಡಿಯನ್ನು ಕೈಯಲ್ಲಿ ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ನಾಟ್ಯವಾಡುತ್ತಾ ಆಕೆಯ ಹಿಂದೆ ಹೋಗುತ್ತಿರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯನ್ನು ಹಿಂಬಾಲಿಸಿ ಹೊರಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:20
33 ತಿಳಿವುಗಳ ಹೋಲಿಕೆ  

ದಮ್ಮಡಿಗಳನ್ನು ಬಡಿಯುತ್ತಾ ಕುಣಿಯುತ್ತಾ ಆತನನ್ನು ಸ್ತುತಿಸಿರಿ. ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.


ದಾವೀದನು ಫಿಲಿಷ್ಟಿಯರೊಡನೆ ಹೋರಾಡಲು ಹೋಗುತ್ತಿದ್ದನು. ಯುದ್ಧದ ನಂತರ ಅವನು ಮನೆಗೆ ಹಿಂದಿರುಗುತ್ತಿದ್ದನು. ಇಸ್ರೇಲಿನ ಎಲ್ಲ ಪಟ್ಟಣಗಳಲ್ಲೂ ಹೆಂಗಸರು ದಾವೀದನನ್ನು ನೋಡುವುದಕ್ಕಾಗಿ ಹೊರಬರುತ್ತಿದ್ದರು. ಅವರು ಡೋಲು ಮುಂತಾದ ವಾದ್ಯಗಳನ್ನು ಬಾರಿಸುತ್ತಾ ಕೇಕೆ ಹಾಕಿ ನಗುತ್ತಾ ನರ್ತಿಸುತ್ತಿದ್ದರು. ಅವರು ಸೌಲನ ಸಮ್ಮುಖದಲ್ಲಿಯೇ ಇವನ್ನೆಲ್ಲ ಮಾಡುತ್ತಿದ್ದರು.


ಮುಂಭಾಗದಲ್ಲಿ ಗಾಯಕರೂ ಹಿಂಭಾಗದಲ್ಲಿ ವಾದ್ಯ ಬಾರಿಸುವವರೂ ಸುತ್ತಲು ದಮ್ಮಡಿ ಬಡಿಯುವ ಯುವತಿಯರೂ ಹೋಗುತ್ತಿದ್ದಾರೆ.


ಯೆಫ್ತಾಹನು ಮಿಚ್ಛೆಗೆ ಹಿಂದಿರುಗಿದನು. ಯೆಫ್ತಾಹನು ತನ್ನ ಮನೆಗೆ ಹೋಗುತ್ತಿರಲು ಅವನನ್ನು ಎದುರುಗೊಳ್ಳಲು ಅವನ ಮಗಳು ಮನೆಯಿಂದ ಹೊರಗೆ ಬಂದಳು. ಅವಳು ದಮ್ಮಡಿ ಬಡಿಯುತ್ತ ನಾಟ್ಯವಾಡುತ್ತಿದ್ದಳು. ಅವಳು ಅವನ ಒಬ್ಬಳೇ ಮಗಳಾಗಿದ್ದಳು. ಯೆಫ್ತಾಹನಿಗೆ ಬೇರೆ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಇರಲಿಲ್ಲ. ಯೆಫ್ತಾಹನು ಅವಳನ್ನು ತುಂಬ ಪ್ರೀತಿಸುತ್ತಿದ್ದನು.


ಅಮ್ರಾಮನು ಕೆಹಾತನ ಕುಲಕ್ಕೆ ಸೇರಿದವನು. ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಅವಳು ಲೇವಿ ಕುಟುಂಬದವಳು. ಅವಳು ಈಜಿಪ್ಟಿನಲ್ಲಿ ಹುಟ್ಟಿದಳು. ಅಮ್ರಾಮ್ ಮತ್ತು ಯೋಕೆಬೆದಳಿಗೆ ಇಬ್ಬರು ಗಂಡುಮಕ್ಕಳು ಹುಟ್ಟಿದರು. ಅವರು ಯಾರೆಂದರೆ ಆರೋನ ಮತ್ತು ಮೋಶೆ. ಅವರಿಗೆ ಒಬ್ಬ ಮಗಳೂ ಇದ್ದಳು. ಅವಳ ಹೆಸರು ಮಿರ್ಯಾಮಳು.


ನಾನು ಮಾಡಿದ್ದನ್ನು ನಿಮಗೆ ಹೇಳುತ್ತೇನೆ, ನಾನು ನಿಮ್ಮ ಬಳಿಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ಕಳುಹಿಸಿದೆನು. ನಾನು ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆತಂದೆನು. ಗುಲಾಮತನದಿಂದ ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದೆನು.


ಅವರು ನೃತ್ಯಮಾಡುತ್ತಾ ಝಲ್ಲರಿಗಳನ್ನು ಬಡಿಯುತ್ತಾ ಹಾರ್ಪ್‌ವಾದ್ಯಗಳನ್ನು ನುಡಿಸುತ್ತಾ ಆತನನ್ನು ಸ್ತುತಿಸಲಿ.


ಆಗ ದೆಬೋರಳೆಂಬ ಒಬ್ಬ ಪ್ರವಾದಿನಿ ಇದ್ದಳು. ಅವಳು ಲಪ್ಪೀದೋತ್ ಎಂಬವನ ಪತ್ನಿಯಾಗಿದ್ದಳು. ಅವಳು ಆಗ ಇಸ್ರೇಲಿನ ನ್ಯಾಯಾಧೀಶೆಯಾಗಿದ್ದಳು.


ದೇವಾಲಯದಲ್ಲಿ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆಯು ಅಸೇರನ ವಂಶದ ಫನುವೇಲನ ಕುಟುಂಬದವಳಾಗಿದ್ದಳು. ಅನ್ನಳು ಬಹಳ ಮುಪ್ಪಿನವಳಾಗಿದ್ದಳು. ಆಕೆಯು ಮದುವೆಯಾದ ಏಳು ವರ್ಷಕ್ಕೆ ಗಂಡನನ್ನು ಕಳೆದುಕೊಂಡಳು.


ವಾದ್ಯವನ್ನು ನುಡಿಸಲಾರಂಭಿಸಿರಿ; ದಮ್ಮಡಿಯನ್ನು ಬಡಿಯಿರಿ. ಇಂಪಾದ ಹಾರ್ಪ್ ಮತ್ತು ಲೈರ್ ವಾದ್ಯಗಳನ್ನು ಬಾರಿಸಿರಿ.


ಆದ್ದರಿಂದ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಎಂಬವರು ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋದರು. ಹುಲ್ದಳು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ಶಲ್ಲೂಮನ ಹೆಂಡತಿ. ಅವನು ಯಾಜಕರ ವಸ್ತ್ರಗಳಿಗೆ ಮೇಲ್ವಿಚಾರಕನಾಗಿದ್ದನು. ಹುಲ್ದಳು ಜೆರುಸಲೇಮಿನ ಎರಡನೆಯ ಭಾಗದಲ್ಲಿ ವಾಸಿಸುತ್ತಿದ್ದಳು. ಅವರು ಹೋಗಿ ಹುಲ್ದಳ ಜೊತೆಯಲ್ಲಿ ಮಾತನಾಡಿದರು.


ಮಗುವಿಗೆ ಏನಾಗುವುದೋ ಎಂದು ನೋಡಲು ಮಗುವಿನ ಅಕ್ಕ ಅಲ್ಲಿದ್ದುಕೊಂಡು ಕಾಯುತ್ತಿದ್ದಳು.


ಮದುವೆಯಾಗಿಲ್ಲದ ನಾಲ್ಕುಮಂದಿ ಹೆಣ್ಣುಮಕ್ಕಳು ಅವನಿಗಿದ್ದರು. ಅವರೆಲ್ಲರಿಗೂ ಪ್ರವಾದಿಸುವ ವರವಿತ್ತು.


ದೇವರು ಆಜ್ಞಾಪಿಸಲು ಅನೇಕರು ಈ ಸುವಾರ್ತೆಯನ್ನು ಸಾರಲು ಹೋದರು:


ಆಗ ನೀನು ನನಗೆ ಸಹಾಯಮಾಡಿ ನನ್ನ ಗೋಳಾಟವನ್ನು ಸಂತೋಷದ ನರ್ತನವನ್ನಾಗಿ ಮಾರ್ಪಡಿಸಿದೆ. ನನ್ನ ಶೋಕವಸ್ತ್ರಗಳನ್ನು ತೆಗೆದುಹಾಕಿ ಹರ್ಷವಸ್ತ್ರಗಳನ್ನು ಹೊದಿಸಿದೆ.


ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ತನ್ನ ಶಕ್ತಿಮೀರಿ ನರ್ತಿಸಿದನು. ಅವನು ಏಫೋದನ್ನು ಧರಿಸಿದ್ದನು.


ನಂತರ ನೀನು ಗಿಬಿಯತ್ ಎಲೋಹಿಮಿಗೆ ಹೋಗುವೆ. ಅಲ್ಲಿ ಒಂದು ಫಿಲಿಷ್ಟಿಯರ ಕೋಟೆಯಿದೆ. ನೀನು ಆ ಪಟ್ಟಣಕ್ಕೆ ಬಂದಾಗ, ಪ್ರವಾದಿಗಳ ಗುಂಪೊಂದು ಹೊರಬರುತ್ತದೆ. ಈ ಪ್ರವಾದಿಗಳು ಆರಾಧನಾ ಸ್ಥಳದಿಂದ ಇಳಿದು ಬರುತ್ತಾರೆ, ಅವರು ಪ್ರವಾದಿಸುತ್ತಿರುತ್ತಾರೆ. ಅವರು ಸ್ವರಮಂಡಲವನ್ನೂ ದಮ್ಮಡಿಯನ್ನೂ ಕೊಳಲನ್ನೂ ಕಿನ್ನರಿಯನ್ನೂ ನುಡಿಸುತ್ತಿರುತ್ತಾರೆ.


ಉತ್ಸವಕಾಲದಲ್ಲಿ ಶೀಲೋವಿನ ಯುವತಿಯರು ನಾಟ್ಯಕ್ಕೆ ಬರುವ ಸಮಯವನ್ನು ನಿರೀಕ್ಷಿಸುತ್ತಿರಿ. ಅವರು ಬಂದ ತಕ್ಷಣ ನೀವು ಅಡಗಿಕೊಂಡಿದ್ದ ಸ್ಥಳದಿಂದ ಹೊರಗೆ ಬನ್ನಿ; ನಿಮ್ಮಲ್ಲಿ ಪ್ರತಿಯೊಬ್ಬನು ಒಬ್ಬೊಬ್ಬ ಶೀಲೋವಿನ ಯುವತಿಯನ್ನು ತೆಗೆದುಕೊಳ್ಳಿರಿ. ಆ ಯುವತಿಯರನ್ನು ಬೆನ್ಯಾಮೀನ್ಯರ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮದುವೆಯಾಗಿರಿ.


ಮೊದಲನೆಯ ತಿಂಗಳಲ್ಲಿ ಇಡೀ ಇಸ್ರೇಲ್ ಸಮುದಾಯವು ಚಿನ್ ಮರುಭೂಮಿಗೆ ಬಂದಿತು. ಅವರು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ಸತ್ತಳು. ಆಕೆಯ ಶವವನ್ನು ಅಲ್ಲಿ ಸಮಾಧಿ ಮಾಡಲಾಯಿತು.


ಆದರೆ ಸ್ತ್ರೀಯು ಪ್ರಾರ್ಥಿಸುವಾಗ ಅಥವಾ ಪ್ರವಾದಿಸುವಾಗ ತನ್ನ ತಲೆಗೆ ಮುಸುಕನ್ನು ಹಾಕಿಕೊಂಡಿರಬೇಕು. ಆಕೆಯು ತನ್ನ ತಲೆಗೆ ಮುಸುಕು ಹಾಕಿಲ್ಲದಿದ್ದರೆ, ಅದು ಆಕೆಯ ಶಿರಸ್ಸಾದ ಪುರುಷನಿಗೆ ಅಪಮಾನಕರವಾಗಿದೆ. ಅವಳಿಗೂ ತಲೆಯನ್ನು ಬೋಳಿಸಿಕೊಂಡಿರುವ ಸ್ತ್ರೀಗೂ ಯಾವ ವ್ಯತ್ಯಾಸವಿಲ್ಲ.


ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹೊರಗೆ ನೋಡುತ್ತಿದ್ದಳು. ಅದೇ ಸಮಯದಲ್ಲಿ ಯೆಹೋವನ ಪವಿತ್ರ ಪೆಟ್ಟಿಗೆಯು ನಗರಕ್ಕೆ ಬಂದಿತು. ದಾವೀದನು ಯೆಹೋವನ ಸನ್ನಿಧಿಯಲ್ಲಿ ಜಿಗಿಯುತ್ತಾ ಕುಣಿದಾಡುತ್ತಿದ್ದನು. ಮೀಕಲಳು ಇದನ್ನು ಕಂಡು ದಾವೀದನನ್ನು ತನ್ನ ಹೃದಯದಲ್ಲಿ ತಿರಸ್ಕರಿಸಿದಳು; ಅವನು ತನ್ನನ್ನು ತಾನೇ ಮೂರ್ಖನನ್ನಾಗಿ ಮಾಡಿಕೊಳ್ಳುತ್ತಿದ್ದಾನೆ ಎಂದು ಆಲೋಚಿಸಿಕೊಂಡಳು.


ದಾವೀದನು ಮತ್ತು ಇಸ್ರೇಲರೆಲ್ಲರು ಕಿನ್ನರಿ, ದಮ್ಮಡಿ, ಝಲ್ಲರಿ, ತಾಳಗಳನ್ನು ಬಾರಿಸುತ್ತಾ ಸನ್ನಿಧಿಯಲ್ಲಿ ನೃತ್ಯಮಾಡುತ್ತಿದ್ದರು.


ಸ್ತ್ರೀಯರು ಸಭಾಕೂಟಗಳಲ್ಲಿ ಮೌನವಾಗಿರಬೇಕು. ದೇವಮಕ್ಕಳ ಎಲ್ಲಾ ಸಭೆಗಳಲ್ಲಿಯೂ ಇದೇ ಪದ್ಧತಿ ರೂಢಿಯಲ್ಲಿದೆ. ಸ್ತ್ರೀಯರಿಗೆ ಮಾತಾಡಲು ಅನುಮತಿಯಿಲ್ಲ. ಅವರು ಅಧೀನರಾಗಿರಬೇಕು. ಮೋಶೆಯ ಧರ್ಮಶಾಸ್ತ್ರವು ಸಹ ಇದನ್ನೇ ಹೇಳುತ್ತದೆ.


ಮೋಶೆಯು ಇಥಿಯೋಪ್ಯದ ಸ್ತ್ರೀಯನ್ನು ಮದುವೆ ಮಾಡಿಕೊಂಡ ಕಾರಣ ಮಿರ್ಯಾಮಳೂ ಆರೋನನೂ ಮೋಶೆಗೆ ವಿರೋಧವಾಗಿ ಮಾತಾಡಿದರು.


ನೀನು ನನಗೆ ಹೇಳದೆ ಓಡಿಬಂದದ್ದೇಕೆ? ನೀನು ನನ್ನನ್ನು ಕೇಳಿದ್ದರೆ ನಾನು ನಿನಗಾಗಿ ಒಂದು ಔತಣಕೂಟವನ್ನೇರ್ಪಡಿಸುತ್ತಿದ್ದೆ. ಅಲ್ಲಿ ಗಾಯನ, ನೃತ್ಯ ಮತ್ತು ವಾದ್ಯಗೋಷ್ಠಿಗಳಿರುತ್ತಿದ್ದವು.


ಗತ್‌ನಲ್ಲಿ ಈ ಸುದ್ದಿಯನ್ನು ಹೇಳದಿರು. ಅಷ್ಕೆಲೋನಿನ ಬೀದಿಗಳಲ್ಲಿ ಇದನ್ನು ಸಾರದಿರು. ಫಿಲಿಷ್ಟಿಯರ ಪಟ್ಟಣಗಳೆಲ್ಲಾ ಸಂತೋಷಪಡುವವು. ಆ ವಿದೇಶಿಯರ ಹೆಣ್ಣುಮಕ್ಕಳು ಉಲ್ಲಾಸಪಡುವರು.


ಅಮ್ರಾಮನ ಮಕ್ಕಳು: ಆರೋನ, ಮೋಶೆ ಮತ್ತು ಮಿರ್ಯಾಮಳು. ಆರೋನನ ಮಕ್ಕಳು: ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್.


ದಾವೀದನು ಲೇವಿಯರಿಗೆ ತಮ್ಮ ಸಹೋದರರಾದ ಗಾಯಕರನ್ನು ಕರೆದುಕೊಂಡು ಬರಲು ಹೇಳಿದನು. ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ತಂದು ಆನಂದಗೀತೆಗಳನ್ನು ಹಾಡುವಂತೆ ಅವರಿಗೆ ತಿಳಿಸಿದನು.


ಅಳುವ ಸಮಯ, ನಗುವ ಸಮಯ. ಗೋಳಾಡುವ ಸಮಯ, ಕುಣಿದಾಡುವ ಸಮಯ.


ನನ್ನ ವಧುವಾದ ಇಸ್ರೇಲೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು, ಆಗ ನೀನು ಮತ್ತೆ ಒಂದು ಜನಾಂಗವಾಗುವೆ. ನೀನು ಮೊದಲಿನಂತೆ ನಿನ್ನ ದಮ್ಮಡಿಯನ್ನು ತೆಗೆದುಕೊಂಡು ಸಂತೋಷದಿಂದ ನೃತ್ಯ ಮಾಡುವವರೊಡನೆ ನೃತ್ಯ ಮಾಡುವೆ.


ಅವರು, “ಯೆಹೋವನು ಮೋಶೆಯೊಡನೆ ಮಾತ್ರ ಮಾತಾಡಿದ್ದಾನೋ? ಆತನು ನಮ್ಮೊಡನೆಯೂ ಮಾತಾಡಿದನಲ್ಲವೇ?” ಅಂದರು. ಯೆಹೋವನು ಅವರ ಮಾತುಗಳನ್ನು ಕೇಳಿದನು.


ದೇವರೇ, ಟೋಬೀಯ ಮತ್ತ ಸನ್ಬಲ್ಲಟನ ವಿಚಾರವಾಗಿ ನಿನ್ನ ಜ್ಞಾಪಕದಲ್ಲಿರಿಸು. ಅವರು ಮಾಡಿದ ಕೆಟ್ಟಕಾರ್ಯಗಳನ್ನು ನೆನಪಿನಲ್ಲಿಡು. ಅದೇ ಸಮಯದಲ್ಲಿ ಪ್ರವಾದಿನಿಯಾದ ನೋವದ್ಯಳನ್ನು, ಇತರ ಪ್ರವಾದಿಗಳನ್ನು, ನನ್ನನ್ನು ಹೆದರಿಸುವವರನ್ನು ನೆನಪು ಮಾಡಿಕೊ.


ಮಹಾಸಭೆಯಲ್ಲಿ ದೇವರಿಗೆ ಸ್ತೋತ್ರವಾಗಲಿ! ಇಸ್ರೇಲ್ ಜನರೇ, ಯೆಹೋವನಿಗೆ ಸ್ತೋತ್ರಮಾಡಿರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು