ವಿಮೋಚನಕಾಂಡ 15:22 - ಪರಿಶುದ್ದ ಬೈಬಲ್22 ಮೋಶೆಯು ಇಸ್ರೇಲರನ್ನು ಕೆಂಪುಸಮುದ್ರದಿಂದ ಮುನ್ನಡೆಸಿದನು. ಅವರು ಶೂರಿನ ಅರಣ್ಯದೊಳಗೆ ಹೋದರು. ಅವರು ಅರಣ್ಯದಲ್ಲಿ ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಜನರಿಗೆ ಎಲ್ಲಿಯೂ ನೀರು ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆನಂತರ ಮೋಶೆಯು ಇಸ್ರಾಯೇಲರನ್ನು ಕೆಂಪುಸಮುದ್ರದ ಮೂಲಕವಾಗಿ ನಡೆಸಿದನು. ಅವರು ಶೂರ್ ಮರುಭೂಮಿಯಲ್ಲಿ ಮೂರು ದಿನಗಳು ನೀರಿಲ್ಲದೆ ಪ್ರಯಾಣ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಬಳಿಕ ಮೋಶೆ ಇಸ್ರಯೇಲರನ್ನು ಕೆಂಪು ಸಮುದ್ರದ ಬಳಿಯಿಂದ ಕರೆದುಕೊಂಡು ಹೋದನು. ಅವರು ಶೂರ್ ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಬೇಕಾಯಿತು. ಅಲ್ಲಿ ಅವರಿಗೆ ನೀರು ಸಿಕ್ಕಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಬಳಿಕ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದ ಬಳಿಯಿಂದ ಪ್ರಯಾಣ ಮಾಡಿಸಲು ಅವರು ಶೂರಿನ ಅರಣ್ಯದೊಳಗೆ ಮೂರು ದಿನ ನಡೆದು ಹೋದರು. ಅಲ್ಲಿ ಅವರಿಗೆ ನೀರು ಸಿಕ್ಕಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಮೇಲೆ ಮೋಶೆಯು ಇಸ್ರಾಯೇಲರನ್ನು ಕೆಂಪು ಸಮುದ್ರದಿಂದ ನಡೆಸಿದನು. ಅವರು ಶೂರಿನ ಮರುಭೂಮಿಯೊಳಗೆ ಹೋದರು. ಅವರು ಮರುಭೂಮಿಯಲ್ಲಿ ಮೂರು ದಿನಗಳು ಪ್ರಯಾಣಮಾಡಿದರೂ ನೀರನ್ನು ಕಂಡುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |