25 ಮೋಶೆಯು ಯೆಹೋವನಿಗೆ ಪ್ರಾರ್ಥಿಸಲು ಆತನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಮೋಶೆಯು ಆ ಗಿಡವನ್ನು ನೀರಿನಲ್ಲಿ ಹಾಕಿದಾಗ ಕಹಿನೀರು ಸಿಹಿ ನೀರಾಯಿತು. ಆ ಸ್ಥಳದಲ್ಲಿ ಯೆಹೋವನು ಅವರಿಗಾಗಿ ನಿಯಮವನ್ನು ಮಾಡಿದನು. ಯೆಹೋವನು ಅವರ ನಂಬಿಕೆಯನ್ನು ಸಹ ಪರೀಕ್ಷಿಸಿದನು.
25 ಮೋಶೆಯು ಯೆಹೋವನಿಗೆ ಪ್ರಾರ್ಥಿಸಿದನು. ಆಗ ಯೆಹೋವನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಅವನು ಅದನ್ನು ನೀರಿನಲ್ಲಿ ಹಾಕಿದಾಗ, ನೀರು ಸಿಹಿಯಾಯಿತು. ಅಲ್ಲಿ ಯೆಹೋವನು ಇಸ್ರಾಯೇಲರಿಗಾಗಿ ಒಂದು ನಿಯಮವನ್ನು ಮಾಡಿ ಅವರನ್ನು ಪರೀಕ್ಷಿಸಿದನು.
25 ಆಗ ಯೆಹೋವನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಅದನ್ನು ಆ ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಯಿತು. ಅಲ್ಲಿ ಯೆಹೋವನು ಇಸ್ರಾಯೇಲ್ಯರಿಗಾಗಿ ಒಂದು ನಿಯಮವನ್ನು ನಿರ್ಣಯಮಾಡಿ ಅವರನ್ನು ಪರೀಕ್ಷಿಸಿ ಹೀಗಂದನು -
25 ಅವನು ಯೆಹೋವ ದೇವರಿಗೆ ಮೊರೆಯಿಟ್ಟನು. ಯೆಹೋವ ದೇವರು ಅವನಿಗೆ ಒಂದು ಗಿಡವನ್ನು ತೋರಿಸಿದರು. ಅವನು ಅದನ್ನು ನೀರಿನಲ್ಲಿ ಹಾಕಿದಾಗ, ನೀರು ಸಿಹಿಯಾಗಿ ಬಿಟ್ಟಿತು. ಅಲ್ಲಿ ದೇವರು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿದರು. ಅಲ್ಲಿಯೇ ದೇವರು ಅವರನ್ನು ಪರೀಕ್ಷಿಸಿದರು.
ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.
ಇಸ್ರೇಲರ ಪ್ರದೇಶವನ್ನು ಬಿಟ್ಟುಹೋಗುವಂತೆ ಯೆಹೋವನು ಉಳಿದೆಲ್ಲ ಜನಾಂಗದವರನ್ನು ಒತ್ತಾಯಪಡಿಸಲಿಲ್ಲ. ಯೆಹೋವನು ಇಸ್ರೇಲರನ್ನು ಪರೀಕ್ಷಿಸಬೇಕೆಂದಿದ್ದನು. ಈಗ ಬದುಕಿದ್ದ ಇಸ್ರೇಲರಲ್ಲಿ ಯಾರೂ ಕಾನಾನ್ಯರ ಭೂಮಿಯನ್ನು ತೆಗೆದುಕೊಳ್ಳುವುದಕ್ಕಾಗಿ ಯುದ್ಧ ಮಾಡಿರಲಿಲ್ಲ. ಅದಕ್ಕಾಗಿ ಯೆಹೋವನು ಆ ಬೇರೆ ಜನಾಂಗದವರನ್ನು ಅವರ ದೇಶದಲ್ಲಿ ವಾಸಿಸಲು ಬಿಟ್ಟನು. (ಆ ಯುದ್ಧಗಳಲ್ಲಿ ಭಾಗವಹಿಸದ ಈ ಇಸ್ರೇಲರಿಗೆ ಯುದ್ಧ ಮಾಡುವುದನ್ನು ಕಲಿತುಕೊಳ್ಳಲು ಒಂದು ಅವಕಾಶ ದೊರೆಯುವಂತೆ ಯೆಹೋವನು ಹೀಗೆ ಮಾಡಿದ್ದನು.) ಯೆಹೋವನು ಆ ಭೂಮಿಯಲ್ಲಿ ವಾಸಿಸಲು ಬಿಟ್ಟ ಜನಾಂಗಗಳ ಹೆಸರುಗಳು ಇಂತಿವೆ:
ಯೆಹೋವನು ಇಸ್ರೇಲರನ್ನು ಪರೀಕ್ಷಿಸುವುದಕ್ಕಾಗಿ ಬೇರೆ ಜನಾಂಗದವರನ್ನು ಆ ಪ್ರದೇಶದಲ್ಲಿ ಬಿಟ್ಟಿದ್ದನು. ಯೆಹೋವನು ಮೋಶೆಯ ಮೂಲಕ ಅವರ ಪೂರ್ವಿಕರಿಗೆ ಕೊಟ್ಟ ಆಜ್ಞೆಗಳನ್ನು ಇಸ್ರೇಲರು ಪಾಲಿಸುತ್ತಿದ್ದಾರೆಯೇ ಎಂಬುದನ್ನು ಆತನು ನೋಡಬೇಕೆಂದಿದ್ದನು.
ನಿಮ್ಮ ಪೂರ್ವಿಕರು ನೋಡಿಲ್ಲದ ಮನ್ನವನ್ನು ಯೆಹೋವನು ನಿಮಗೆ ಮರುಭೂಮಿಯಲ್ಲಿ ತಿನ್ನಲು ಕೊಟ್ಟನು. ಯೆಹೋವನು ನಿಮ್ಮನ್ನು ಪರೀಕ್ಷಿಸಿದನು. ನೀವು ಒಳ್ಳೆಯ ಫಲಭರಿತವಾದ ಜೀವಿತವನ್ನು ನಡೆಸಬೇಕೆಂದು ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿದನು.
ಆಗ ಯೆಹೋವನು ಮೋಶೆಗೆ, “ಆಕಾಶದಿಂದ ನಿಮಗೋಸ್ಕರ ರೊಟ್ಟಿ ಸುರಿಯುವಂತೆ ಮಾಡುವೆನು. ಪ್ರತಿದಿನ ಅವರು ಹೊರಗೆ ಹೋಗಿ, ತಮಗೆ ಆ ದಿನದಲ್ಲಿ ತಿನ್ನಲು ಬೇಕಾದ ಆಹಾರವನ್ನು ಕೂಡಿಸಿಕೊಳ್ಳಬೇಕು. ನಾನು ಹೇಳುವುದನ್ನು ಅವರು ಮಾಡುತ್ತಾರೊ ಇಲ್ಲವೊ ಎಂದು ನೋಡಲು ನಾನು ಇದನ್ನು ಮಾಡುವೆನು.
ನಂತರ ಎಲೀಷನು ನೆಲದಿಂದ ನೀರು ಹರಿಯುತ್ತಿದ್ದ ಸ್ಥಳಕ್ಕೆ ಹೋದನು. ಎಲೀಷನು ಉಪ್ಪನ್ನು ನೀರಿನಲ್ಲಿ ಎಸೆದು, “‘ನಾನು ಈ ನೀರನ್ನು ಶುಚಿಗೊಳಿಸಿದ್ದೇನೆ! ಇಲ್ಲಿಂದಾಚೆಗೆ ಈ ನೀರು ಯಾರಿಗೂ ಸಾವನ್ನು ಮತ್ತು ಬಂಜೆತನವನ್ನು ಉಂಟುಮಾಡುವುದಿಲ್ಲ ಮತ್ತು ಈ ಭೂಮಿಯಲ್ಲಿ ಬೆಳೆಗಳು ಬೆಳೆಯುತ್ತವೆ’ ಎಂದು ಯೆಹೋವನು ಹೇಳುತ್ತಾನೆ” ಎಂದನು.
ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಜನರು ಲೋಹವನ್ನು ಪುಟಕ್ಕಿಟ್ಟು ಪರೀಕ್ಷಿಸುವಂತೆ ನಾನು ಯೆಹೂದದ ಜನರನ್ನು ಪರೀಕ್ಷಿಸುತ್ತೇನೆ. ನನಗೆ ಬೇರೆ ಮಾರ್ಗವೇ ಇಲ್ಲ. ನನ್ನ ಜನರು ಪಾಪವನ್ನು ಮಾಡಿದ್ದಾರೆ.
ಆದರೆ ಎಲೀಷನು, “ಸ್ವಲ್ಪ ಹಿಟ್ಟನ್ನು ತನ್ನಿ” ಎಂದು ಹೇಳಿದನು. ಅವರು ಎಲೀಷನ ಬಳಿಗೆ ಹಿಟ್ಟನ್ನು ತಂದರು. ಅವನು ಅದನ್ನು ಪಾತ್ರೆಯೊಳಗೆ ಹಾಕಿದನು. ನಂತರ ಎಲೀಷನು, “ಜನರಿಗೆ ಸಾರನ್ನು ಬಡಿಸಿ, ಅವರು ಊಟಮಾಡಲಿ” ಎಂದು ಹೇಳಿದನು. ಆಗ ಆ ಸಾರಿನಲ್ಲಿ ಯಾವ ದೋಷವೂ ಇರಲಿಲ್ಲ.
ನೀವು ಆಪತ್ತಿನಲ್ಲಿದ್ದಾಗ ಸಹಾಯಕ್ಕಾಗಿ ಮೊರೆಯಿಟ್ಟಿರಿ. ಆಗ ನಾನು ನಿಮ್ಮನ್ನು ಬಿಡಿಸಿದೆನು. ನಾನು ಕಾರ್ಮೋಡದಲ್ಲಿ ಮರೆಯಾಗಿದ್ದರೂ ನಿಮಗೆ ಉತ್ತರಿಸಿದೆನು. ನಾನು ನಿಮ್ಮನ್ನು ಮೆರೀಬಾದ ನೀರಿನಿಂದ ಪರೀಕ್ಷಿಸಿದೆನು.”
ಅಂಥ ಮನುಷ್ಯನಿಗೆ ಕಿವಿಗೊಡಬೇಡಿ. ದೇವರು ನಿಮ್ಮನ್ನು ಪರೀಕ್ಷೆ ಮಾಡುತ್ತಿದ್ದಾನೆ. ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸುತ್ತೀರೋ ಇಲ್ಲವೋ ಎಂದು ನಿಮ್ಮನ್ನು ಪರೀಕ್ಷಿಸುವನು.
ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.
ಆಗ ಮೋಶೆಯು ಜನರಿಗೆ, “ಭಯಪಡಬೇಡಿರಿ, ಯೆಹೋವನು ನಿಮ್ಮನ್ನು ಪರೀಕ್ಷಿಸಲು ಬಂದಿದ್ದಾನೆ. ನೀವು ಆತನಲ್ಲಿ ಭಕ್ತಿಯುಳ್ಳವರಾಗಿರಬೇಕೆಂದು ಆತನು ಬಯಸುತ್ತಾನೆ. ಆಗ ನೀವು ಪಾಪ ಮಾಡುವುದಿಲ್ಲ” ಎಂದು ಹೇಳಿದನು.
ದೇವಮನುಷ್ಯನು, “ಅದು ಎಲ್ಲಿ ಬಿದ್ದಿತು?” ಎಂದು ಕೇಳಿದನು. ಆ ಮನುಷ್ಯನು ಕೊಡಲಿಯು ಬಿದ್ದ ಸ್ಥಳವನ್ನು ಎಲೀಷನಿಗೆ ತೋರಿಸಿದನು. ಆಗ ಎಲೀಷನು ಒಂದು ಕಡ್ಡಿಯನ್ನು ಮುರಿದು ಅದನ್ನು ನೀರಿನೊಳಕ್ಕೆ ಎಸೆದನು. ಆ ಕಡ್ಡಿಯು ಕಬ್ಬಿಣದ ಕೊಡಲಿಯನ್ನು ತೇಲುವಂತೆ ಮಾಡಿತು.