ವಿಮೋಚನಕಾಂಡ 15:6 - ಪರಿಶುದ್ದ ಬೈಬಲ್6 “ನಿನ್ನ ಭುಜಬಲವು ಎಷ್ಟೋ ಶಕ್ತಿಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಭುಜಬಲವು ವೈರಿಯನ್ನು ನುಚ್ಚುನೂರು ಮಾಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನೇ, ನಿನ್ನ ಬಲಗೈಯಲ್ಲಿರುವ ಶಕ್ತಿ ಎಷ್ಟೋ ಮಹಿಮೆಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಬಲಗೈ ಶತ್ರುಗಳನ್ನು ಪುಡಿಪುಡಿಮಾಡಿಬಿಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಹೇ ಸರ್ವೇಶ್ವರಾ, ನಿನ್ನ ಭುಜಬಲ ಶಕ್ತಿಯುತ! ಪುಡಿ ಪುಡಿ ಮಾಡಿತು ನಿನ್ನ ಶತ್ರುಗಳನು ಆ ಬಾಹುಬಲ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೋವನೇ, ನಿನ್ನ ಭುಜಬಲವು ಎಷ್ಟೋ ಘನವಾದದ್ದು; ಯೆಹೋವನೇ, ನಿನ್ನ ಭುಜಬಲವು ನಿನ್ನ ಶತ್ರುಗಳನ್ನು ಪುಡಿಪುಡಿ ಮಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆಹೋವ ದೇವರೇ, ನಿಮ್ಮ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳದ್ದಾಗಿದೆ; ಯೆಹೋವ ದೇವರೇ, ನಿಮ್ಮ ಬಲಗೈ ಶತ್ರುವನ್ನು ಜಜ್ಜಿ ಪುಡಿ ಮಾಡಿತು. ಅಧ್ಯಾಯವನ್ನು ನೋಡಿ |
ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ಸಂಗತಿಯನ್ನು ಮೋಶೆ ಇತ್ರೋನನಿಗೆ ಹೇಳಿದನು. ಯೆಹೋವನು ಫರೋಹನಿಗೆ ಮತ್ತು ಈಜಿಪ್ಟಿನವರಿಗೆ ಮಾಡಿದ ಸಂಗತಿಗಳ ಬಗ್ಗೆ ಮೋಶೆಯು ಹೇಳಿದನು. ದಾರಿಯ ಉದ್ದಕ್ಕೂ ತಮಗೆ ಬಂದೊದಗಿದ ಎಲ್ಲಾ ಸಮಸ್ಯೆಗಳ ಬಗ್ಗೆ ಮತ್ತು ತೊಂದರೆ ಬಂದೊದಗಿದ ಪ್ರತಿ ಸಾರಿಯೂ ಯೆಹೋವನು ಇಸ್ರೇಲರನ್ನು ಹೇಗೆ ರಕ್ಷಿಸಿದನೆಂಬುದನ್ನು ಮೋಶೆಯು ತನ್ನ ಮಾವನಿಗೆ ತಿಳಿಸಿದನು.