ವಿಮೋಚನಕಾಂಡ 16:14 - ಪರಿಶುದ್ದ ಬೈಬಲ್14 ಸೂರ್ಯನು ಮೇಲಕ್ಕೇರಿದ ನಂತರ ಮಂಜು ಕರಗಿ ಇಲ್ಲವಾಯಿತು. ಆದರೆ ಮಂಜು ಕರಗಿ ಹೋದನಂತರ ನೆಲದ ಮೇಲೆ ಮಂಜಿನ ಹನಿಗಳಂತಿದ್ದ ತೆಳುವಾದ ಕಾಳುಗಳು ಬಿದ್ದಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆ ಮಂಜು ಕರಗಿ ಹೋದ ಮೇಲೆ ಮರುಭೂಮಿಯ ನೆಲದಲ್ಲಿ ಮಂಜಿನ ಹನಿಗಳಂತೆ ಏನೋ ಸಣ್ಣ ಸಣ್ಣ ರವೆಗಳು ಕಾಣಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆ ಮಂಜು ಆರಿಹೋದ ನಂತರ ಮರುಭೂಮಿಯ ನೆಲದಲ್ಲಿ ಮಂಜಿನ ಹನಿಗಳಂತೆ ಏನೋ ಸಣ್ಣ ಸಣ್ಣ ರವೆಗಳು ಕಾಣಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆ ಮಂಜು ಆರಿಹೋದನಂತರ ಅರಣ್ಯದ ನೆಲದಲ್ಲಿ ಮಂಜಿನ ಹನಿಗಳಂತೆ ಏನೋ ಸಣ್ಣಸಣ್ಣ ರವೆಗಳು ಕಾಣಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಬಿದ್ದಿದ್ದ ಮಂಜು ಹೋದ ಮೇಲೆ, ಗಟ್ಟಿಯಾದ ಪದಾರ್ಥವು ಮಂಜಿನ ಹನಿಯಷ್ಟು ಚಿಕ್ಕದಾದದ್ದೂ, ಗುಂಡಾದದ್ದೂ ಮರುಭೂಮಿಯಲ್ಲಿ ಹರಡಿತ್ತು. ಅಧ್ಯಾಯವನ್ನು ನೋಡಿ |
ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿ ನಿಮಗೆ ಹಸಿವೆಯಾಗುವಂತೆ ಮಾಡಿದನು. ಆ ಬಳಿಕ ಮನ್ನದ ಮೂಲಕ ನಿಮ್ಮ ಹಸಿವೆಯನ್ನು ನೀಗಿದನು. ಇದರ ವಿಷಯವಾಗಿ ನೀವು ಹಿಂದೆಂದೂ ಕೇಳಿರಲಿಲ್ಲ. ನಿಮ್ಮ ಪೂರ್ವಿಕರೂ ನೋಡಿರಲಿಲ್ಲ. ಆತನು ಹೀಗೇಕೆ ಮಾಡಿದನು? ಯಾಕೆಂದರೆ ಕೇವಲ ರೊಟ್ಟಿ ತಿಂದ ಮಾತ್ರದಿಂದ ಮನುಷ್ಯರು ಬದುಕದೆ ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೇ ಬದುಕುವರೆಂಬುದನ್ನು ನೀವು ತಿಳಿಯಬೇಕೆಂದು ಹೀಗೆ ಮಾಡಿದನು.