ವಿಮೋಚನಕಾಂಡ 16:15 - ಪರಿಶುದ್ದ ಬೈಬಲ್15 ಇಸ್ರೇಲರು ಅದನ್ನು ನೋಡಿ “ಏನದು” ಎಂಬುದಾಗಿ ಒಬ್ಬರನ್ನೊಬ್ಬರು ಕೇಳಿದರು. ಅದು ಏನೆಂದು ಅವರಿಗೆ ಗೊತ್ತಿಲ್ಲದ ಕಾರಣ ಅವರು ಈ ಪ್ರಶ್ನೆಯನ್ನು ಕೇಳಿದರು. ಆದ್ದರಿಂದ ಮೋಶೆ ಅವರಿಗೆ, “ಇದು ಯೆಹೋವನು ನಿಮಗೆ ಕೊಟ್ಟಿರುವ ಆಹಾರ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇಸ್ರಾಯೇಲರು ಅದನ್ನು ಕಂಡು ಒಬ್ಬರಿಗೊಬ್ಬರು, “ಇದೇನಿರಬಹುದು?” ಎಂದು ಅಂದುಕೊಂಡರು. ಅದು ಏನೆಂದು ಅವರಿಗೆ ತಿಳಿಯಲಿಲ್ಲ. ಮೋಶೆ ಅವರಿಗೆ, “ಇದು ಯೆಹೋವನು ನಿಮಗಾಗಿ ತಿನ್ನುವುದಕ್ಕೆ ಕೊಟ್ಟಿರುವ ರೊಟ್ಟಿಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇಸ್ರಯೇಲರು ಅದನ್ನು ಕಂಡು ಇಂಥದೆಂದು ತಿಳಿಯದೆ ಒಬ್ಬರಿಗೊಬ್ಬರು ‘ಮನ್ನ’ ಎಂದರು. ಇದೇನಿರಬಹುದೆಂದು ವಿಚಾರಿಸಿದರು ಮೋಶೆ ಅವರಿಗೆ, “ಇದು ಸರ್ವೇಶ್ವರ ಸ್ವಾಮಿ ನಿಮಗೋಸ್ಕರ ಕೊಟ್ಟ ಆಹಾರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇಸ್ರಾಯೇಲ್ಯರು ಅದನ್ನು ಕಂಡು ಇಂಥದೆಂದು ತಿಳಿಯದೆ ಒಬ್ಬರಿಗೊಬ್ಬರು ಇದೇನಿರಬಹುದು ಎಂದು ಹೇಳಿಕೊಂಡರು. ಮೋಶೆ ಅವರಿಗೆ - ಇದು ಯೆಹೋವನು ನಿಮಗೋಸ್ಕರ ಕೊಟ್ಟ ಆಹಾರವು; ಯೆಹೋವನು ಇದರ ವಿಷಯದಲ್ಲಿ ಆಜ್ಞಾಪಿಸಿದ್ದೇನಂದರೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇಸ್ರಾಯೇಲರು ಅದನ್ನು ನೋಡಿದಾಗ ಅವರು, ಒಬ್ಬರಿಗೊಬ್ಬರು, “ಇದೇನು?” ಎಂದರು. ಏಕೆಂದರೆ ಅದು ಏನಾಗಿತ್ತೆಂದು ಅವರಿಗೆ ತಿಳಿಯಲಿಲ್ಲ. ಆಗ ಮೋಶೆಯು ಅವರಿಗೆ, “ಯೆಹೋವ ದೇವರು ನಿಮಗೆ ಕೊಟ್ಟಿರುವ ರೊಟ್ಟಿಯು ಇದೇ. ಅಧ್ಯಾಯವನ್ನು ನೋಡಿ |
ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿ ನಿಮಗೆ ಹಸಿವೆಯಾಗುವಂತೆ ಮಾಡಿದನು. ಆ ಬಳಿಕ ಮನ್ನದ ಮೂಲಕ ನಿಮ್ಮ ಹಸಿವೆಯನ್ನು ನೀಗಿದನು. ಇದರ ವಿಷಯವಾಗಿ ನೀವು ಹಿಂದೆಂದೂ ಕೇಳಿರಲಿಲ್ಲ. ನಿಮ್ಮ ಪೂರ್ವಿಕರೂ ನೋಡಿರಲಿಲ್ಲ. ಆತನು ಹೀಗೇಕೆ ಮಾಡಿದನು? ಯಾಕೆಂದರೆ ಕೇವಲ ರೊಟ್ಟಿ ತಿಂದ ಮಾತ್ರದಿಂದ ಮನುಷ್ಯರು ಬದುಕದೆ ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೇ ಬದುಕುವರೆಂಬುದನ್ನು ನೀವು ತಿಳಿಯಬೇಕೆಂದು ಹೀಗೆ ಮಾಡಿದನು.
“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.
ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.