Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:19 - ಪರಿಶುದ್ದ ಬೈಬಲ್‌

19 ಮೋಶೆಯು ಅವರಿಗೆ, “ಆಹಾರವನ್ನು ಮರುದಿನಕ್ಕಾಗಿ ಉಳಿಸಿಕೊಳ್ಳಬೇಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದಲ್ಲದೆ ಮೋಶೆ ಅವರಿಗೆ, “ಇದನ್ನು ಯಾರೂ ಮರು ದಿನದವರೆಗೆ ಇಟ್ಟುಕೊಳ್ಳಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇದಲ್ಲದೆ ಮೋಶೆ ಅವರಿಗೆ, “ಯಾರೂ ಇದನ್ನು ಮಾರನೆ ದಿನದ ತನಕ ಇಟ್ಟುಕೊಳ್ಳಕೂಡದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅದಲ್ಲದೆ ಮೋಶೆ ಅವರಿಗೆ - ಯಾರೂ ಇದನ್ನು ಮಾರಣೆ ದಿನದ ತನಕ ಇಟ್ಟುಕೊಳ್ಳಕೂಡದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮೋಶೆ ಅವರಿಗೆ, “ಇದನ್ನು ಯಾರೂ ಮರುದಿನದವರೆಗೆ ಇಟ್ಟುಕೊಳ್ಳಬಾರದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:19
5 ತಿಳಿವುಗಳ ಹೋಲಿಕೆ  

“ನೀವು ನನಗೆ ಯಜ್ಞವನ್ನು ಅರ್ಪಿಸುವಾಗ ಯಜ್ಞಪಶುವಿನ ರಕ್ತದೊಡನೆ ಹುಳಿಬೆರಸಿದ ಏನನ್ನೂ ಸಮರ್ಪಿಸಬಾರದು. ಅಲ್ಲದೆ ಅದರ ಮಾಂಸವನ್ನು ಒಂದೇ ದಿನದಲ್ಲಿ ತಿಂದು ಮುಗಿಸಬೇಕು; ಮರುದಿನದವರೆಗೂ ಇಟ್ಟುಕೊಳ್ಳಬಾರದು.


ಅದರ ಮಾಂಸವನ್ನೆಲ್ಲಾ ಆ ರಾತ್ರಿಯಲ್ಲಿಯೇ ತಿನ್ನಬೇಕು. ಬೆಳಗಾಗುವವರೆಗೆ ಮಾಂಸವೇನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಆದ್ದರಿಂದ ನಾಳೆಗಾಗಿ ಚಿಂತಿಸಬೇಡಿ. ಪ್ರತಿದಿನವು ತನ್ನದೇ ಆದ ಎಷ್ಟೋ ಕಷ್ಟಗಳನ್ನು ಹೊಂದಿರುತ್ತದೆ. ನಾಳೆಯು ಸಹ ತನ್ನದೇ ಆದ ಚಿಂತೆಗಳನ್ನು ಹೊಂದಿದೆ.


ಮೋಶೆಯು ಅವರಿಗೆ, “ಯೆಹೋವನೇ ಇದರ ಬಗ್ಗೆ ತಿಳಿಸಿದ್ದನು. ನಾಳೆ ಮುಂಜಾನೆ ಯೆಹೋವನನ್ನು ಸನ್ಮಾನಿಸತಕ್ಕ ವಿಶೇಷ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆದ್ದರಿಂದ ಇದು ಹೀಗೆ ಸಂಭವಿಸಿತು. ಈ ದಿನಕ್ಕೆ ಬೇಕಾದ ಅಡಿಗೆಯನ್ನು ನೀವು ತಯಾರಿಸಿಕೊಳ್ಳಿರಿ. ಆದರೆ ಈ ಆಹಾರದಲ್ಲಿ ಉಳಿದದ್ದನ್ನು ನಾಳೆ ಪ್ರಾತಃಕಾಲಕ್ಕಾಗಿ ಉಳಿಸಿಕೊಳ್ಳಿರಿ” ಎಂದು ಹೇಳಿದನು.


ಆದರೆ ಅವರು ಮೋಶೆಯ ಮಾತಿಗೆ ವಿಧೇಯರಾಗಲಿಲ್ಲ. ಕೆಲವು ಜನರು ಮರುದಿನ ತಿನ್ನುವುದಕ್ಕಾಗಿ ಆಹಾರವನ್ನು ಉಳಿಸಿಕೊಂಡರು; ಹೀಗೆ ಉಳಿಸಿಟ್ಟ ಆಹಾರವು ಹುಳಗಳಿಂದ ತುಂಬಿ ಕೊಳೆಯತೊಡಗಿತು. ಮೋಶೆಯು ಹೀಗೆ ಮಾಡಿದ ಜನರ ಮೇಲೆ ಕೋಪಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು