ವಿಮೋಚನಕಾಂಡ 16:22 - ಪರಿಶುದ್ದ ಬೈಬಲ್22 ಆರನೆಯ ದಿನವಾದ ಶುಕ್ರವಾರದಲ್ಲಿ ಜನರು ಎರಡರಷ್ಟನ್ನು ಕೂಡಿಸಿಕೊಂಡರು. ಅವರು ಪ್ರತಿಯೊಬ್ಬನಿಗೆ ಆರು ಸೇರಿನಷ್ಟು ಕೂಡಿಸಿಕೊಂಡರು. ಆದ್ದರಿಂದ ಜನನಾಯಕರೆಲ್ಲರೂ ಬಂದು ಮೋಶೆಗೆ ಇದನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆರನೆಯ ದಿನ ಎರಡರಷ್ಟು ಆಹಾರವು, ಅಂದರೆ ಒಬ್ಬೊಬ್ಬನಿಗೆ ಎರಡೆರಡು ಸೇರಿನಂತೆ ಆರಿಸಿ ತುಂಬಿಟ್ಟುಕೊಂಡಿದ್ದರಿಂದ ಸಮೂಹದ ಅಧಿಕಾರಿಗಳೆಲ್ಲರು ಮೋಶೆಯ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆರನೆಯ ದಿನ ಎರಡಷ್ಟು ಆಹಾರವನ್ನು ಅಂದರೆ ಒಬ್ಬೊಬ್ಬನಿಗೆ ಎರಡೆರಡು ಹೋಮೆರಿನ ಮೇರೆಗೆ ಕೂಡಿಸಿಕೊಂಡರು. ಆದ್ದರಿಂದ ಸಮಾಜದ ಅಧಿಕಾರಿಗಳೆಲ್ಲರು ಮೋಶೆಯ ಬಳಿಗೆ ಬಂದು ಈ ಸಂಗತಿಯನ್ನು ವರದಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆರನೆಯ ದಿನ ಕೂಡಿಸಿಕೊಳ್ಳುವಲ್ಲಿ ಎರಡರಷ್ಟು ಆಹಾರವು ಅಂದರೆ ಒಬ್ಬೊಬ್ಬನಿಗೆ ಎರಡೆರಡು ಗೋಮೆರಿನ ಮೇರೆಗೆ ದೊರೆತದ್ದರಿಂದ ಸಮೂಹದ ಅಧಿಕಾರಿಗಳೆಲ್ಲರು ಮೋಶೆಯ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆರನೆಯ ದಿನದಲ್ಲಿ ಅವರು ಎರಡರಷ್ಟು ಅಂದರೆ ಒಬ್ಬನಿಗೆ ಎರಡು ಓಮೆರದಂತೆ ಕೂಡಿಸಿದ್ದರಿಂದ ಸಭೆಯ ಎಲ್ಲಾ ಅಧಿಕಾರಿಗಳು ಬಂದು ಮೋಶೆಗೆ ತಿಳಿಸಿದರು. ಅಧ್ಯಾಯವನ್ನು ನೋಡಿ |