Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:23 - ಪರಿಶುದ್ದ ಬೈಬಲ್‌

23 ಮೋಶೆಯು ಅವರಿಗೆ, “ಯೆಹೋವನೇ ಇದರ ಬಗ್ಗೆ ತಿಳಿಸಿದ್ದನು. ನಾಳೆ ಮುಂಜಾನೆ ಯೆಹೋವನನ್ನು ಸನ್ಮಾನಿಸತಕ್ಕ ವಿಶೇಷ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆದ್ದರಿಂದ ಇದು ಹೀಗೆ ಸಂಭವಿಸಿತು. ಈ ದಿನಕ್ಕೆ ಬೇಕಾದ ಅಡಿಗೆಯನ್ನು ನೀವು ತಯಾರಿಸಿಕೊಳ್ಳಿರಿ. ಆದರೆ ಈ ಆಹಾರದಲ್ಲಿ ಉಳಿದದ್ದನ್ನು ನಾಳೆ ಪ್ರಾತಃಕಾಲಕ್ಕಾಗಿ ಉಳಿಸಿಕೊಳ್ಳಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದಕ್ಕೆ ಅವನು, “ಇದು ಯೆಹೋವನು ಹೇಳಿದ ಮಾತು, ‘ನಾಳೆ ಯೆಹೋವನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ ದಿನವಾಗಿದೆ. ಈ ದಿನವೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ನಾಳೆಯವರೆಗೆ ಇಟ್ಟುಕೊಳ್ಳಿರಿ’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅದಕ್ಕೆ ಮೋಶೆ, “ಇದು ಸರ್ವೇಶ್ವರ ಹೇಳಿದ ಮಾತು. ನಾಳೆ ವಿಶ್ರಾಂತಿಯ ದಿನ, ಸರ್ವೇಶ್ವರನ ಪರಿಶುದ್ಧ ‘ಸಬ್ಬತ್’ ದಿನ. ಆಹಾರಕ್ಕೆ ಸುಡಬೇಕಾದುದನ್ನು ಸುಟ್ಟು, ಬೇಯಿಸಬೇಕಾದುದನ್ನು ಬೇಯಿಸಿದ ನಂತರ ಮಿಕ್ಕಿದ್ದನ್ನು ನಾಳೆಯ ತನಕ ಇಟ್ಟುಕೊಳ್ಳಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದಕ್ಕೆ ಅವನು - ಇದು ಯೆಹೋವನು ಹೇಳಿದ ಮಾತು; ನಾಳೆ ವಿರಾಮಮಾಡಿಕೊಳ್ಳತಕ್ಕ ಯೆಹೋವನ ಪರಿಶುದ್ಧ ಸಬ್ಬತ್ ದಿನವಾಗಿದೆ. [ಈ ಹೊತ್ತಿಗೆ] ಸುಡಬೇಕಾದದ್ದನ್ನು ಸುಟ್ಟು ಬೇಯಿಸಬೇಕಾದದ್ದನ್ನು ಬೇಯಿಸಿದ ನಂತರ ವಿುಕ್ಕದ್ದನ್ನು ನಾಳೆಯ ತನಕ ಇಟ್ಟುಕೊಳ್ಳಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅದಕ್ಕೆ ಮೋಶೆ, “ಯೆಹೋವ ದೇವರು ಆಜ್ಞಾಪಿಸಿದ ಮಾತು ಇದೇ: ‘ನಾಳೆ ಯೆಹೋವ ದೇವರಿಗೆ ಪರಿಶುದ್ಧ ಸಬ್ಬತ್ ದಿನವಾಗಿದೆ. ಇಂದೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನವರೆಗೆ ಇಟ್ಟುಕೊಳ್ಳಿರಿ,’ ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:23
16 ತಿಳಿವುಗಳ ಹೋಲಿಕೆ  

“ಆರು ದಿನಗಳಲ್ಲಿ ನೀವು ಕೆಲಸಮಾಡಿರಿ. ಆದರೆ ಏಳನೆಯ ದಿನವು ವಿಶೇಷವಾದ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆ ದಿನದಲ್ಲಿ ಪವಿತ್ರಸಭೆ ಕೂಡಬೇಕು. ನೀವು ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಅದು ಯೆಹೋವನಿಗೆ ಮೀಸಲಾದ ಸಬ್ಬತ್ತಾಗಿದೆ.


ಕೆಲಸ ಮಾಡುವುದಕ್ಕೆ ವಾರದಲ್ಲಿ ಬೇರೆ ಆರು ದಿನಗಳಿವೆ. ಆದರೆ ಏಳನೆಯ ದಿನವು ವಿಶ್ರಾಂತಿಯ ಬಹು ವಿಶೇಷವಾದ ದಿನವಾಗಿದೆ. ಯೆಹೋವನನ್ನು ಸನ್ಮಾನಿಸಲು ಅದೊಂದು ವಿಶೇಷ ದಿನವಾಗಿದೆ. ಸಬ್ಬತ್ತಿನ ಸಮಯದಲ್ಲಿ ಕೆಲಸಮಾಡುವವನು ಕೊಲ್ಲಲ್ಪಡಬೇಕು.


ಬಳಿಕ ಆ ಸ್ತ್ರೀಯರು ಯೇಸುವಿನ ದೇಹಕ್ಕೆ ಹಚ್ಚಲು ಪರಿಮಳದ್ರವ್ಯಗಳನ್ನು ಸಿದ್ಧಮಾಡುವುದಕ್ಕಾಗಿ ಹೊರಟುಹೋದರು. ಸಬ್ಬತ್ ದಿನದಲ್ಲಿ ಅವರು ವಿಶ್ರಮಿಸಿಕೊಂಡರು. ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಸಬ್ಬತ್‌ದಿನದಂದು ಜನರೆಲ್ಲರೂ ವಿಶ್ರಾಂತಿ ತೆಗೆದುಕೊಳ್ಳಬೇಕಿತ್ತು.


“ಆರು ದಿನಗಳಲ್ಲಿ ನಿಮ್ಮ ಕೆಲಸ ಮಾಡಿರಿ. ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಿರಿ. ಏಳನೆಯ ದಿನದಲ್ಲಿ ನಿಮ್ಮ ಗುಲಾಮರೂ ಎತ್ತುಗಳೂ ಕತ್ತೆಗಳೂ ವಿದೇಶಿಯರೂ ವಿಶ್ರಮಿಸಿಕೊಳ್ಳಲಿ.


ಪ್ರಭುವಿನ ದಿನದಂದು ಪವಿತ್ರಾತ್ಮನು ನನ್ನನ್ನು ವಶಪಡಿಸಿಕೊಂಡನು. ಆಗ ನನ್ನ ಹಿಂಭಾಗದಲ್ಲಿ ಒಂದು ಮಹಾಶಬ್ದವನ್ನು ಕೇಳಿದೆನು. ಆ ಶಬ್ದವು ತುತೂರಿಯ ಧ್ವನಿಯಂತಿತ್ತು.


ಜನರು ಮನ್ನವನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ ಅಥವಾ ಒರಳಲ್ಲಿ ಕುಟ್ಟಿ, ಮಡಕೆಗಳಲ್ಲಿ ಬೇಯಿಸಿ ತೆಳುವಾದ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಆಲಿವ್ ಎಣ್ಣೆಯಿಂದ ಮಾಡಿದ ಭಕ್ಷ್ಯಗಳಂತಿತ್ತು.


ಮೋಶೆಯು ಅವರಿಗೆ, “ಆಹಾರವನ್ನು ಮರುದಿನಕ್ಕಾಗಿ ಉಳಿಸಿಕೊಳ್ಳಬೇಡಿರಿ” ಎಂದು ಹೇಳಿದನು.


‘ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಸಬ್ಬತ್ ದಿನವನ್ನು ವಿಶೇಷದಿನವೆಂದು ಪರಿಗಣಿಸಬೇಕು.


ಆಮೇಲೆ ಸೀನಾಯ ಬೆಟ್ಟಕ್ಕೆ ಇಳಿದುಬಂದೆ. ಪರಲೋಕದಿಂದ ಅವರೊಂದಿಗೆ ಮಾತನಾಡಿದೆ. ಅವರಿಗೆ ಒಳ್ಳೆಯ ಕಟ್ಟಳೆಗಳನ್ನು ದಯಪಾಲಿಸಿದೆ; ಸತ್ಯಬೋಧನೆಯನ್ನು ನೀಡಿದೆ, ವಿಧಿನಿಯಮಗಳನ್ನು ಕಲಿಸಿದೆ. ಅವುಗಳೆಲ್ಲಾ ಉತ್ತಮವಾದವುಗಳೇ.


ಅವರಿಗೆ ನಿನ್ನ ವಿಶೇಷ ದಿನವಾದ ಸಬ್ಬತ್ತನ್ನು ತಿಳಿಸಿದೆ. ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಕಟ್ಟಳೆಗಳನ್ನು ತಿಳಿಸಿದೆ.


ಸಬ್ಬತ್‌ದಿನದಂದು ನಿಮ್ಮ ಮನೆಯಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ. ಆ ದಿನ ಯಾವ ಕೆಲಸವನ್ನೂ ಮಾಡಬೇಡಿರಿ. ಸಬ್ಬತ್‌ದಿನವನ್ನು ನೀವು ಪವಿತ್ರದಿನವನ್ನಾಗಿ ಮಾಡಬೇಕು. ನಾನು ನಿಮ್ಮ ಪೂರ್ವಿಕರಿಗೆ ಇದೇ ಆದೇಶವನ್ನು ಕೊಟ್ಟೆ.


ಈ ಮನ್ನವು ಕೊತ್ತುಂಬರಿ ಕಾಳಿನಂತಿತ್ತು ಮತ್ತು ಅಂಟು ಪದಾರ್ಥದಂತೆ ಕಾಣಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು