ವಿಮೋಚನಕಾಂಡ 16:25 - ಪರಿಶುದ್ದ ಬೈಬಲ್25 ಶನಿವಾರದಲ್ಲಿ ಮೋಶೆಯು ಜನರಿಗೆ, “ಈ ದಿನ ಸಬ್ಬತ್ತಾಗಿದೆ. ಇದು ಯೆಹೋವನನ್ನು ಸನ್ಮಾನಿಸುವುದಕ್ಕಿರುವ ವಿಶೇಷವಾದ ವಿಶ್ರಾಂತಿ ದಿನವಾಗಿದೆ. ನೀವು ನಿನ್ನೆಯಿಂದ ಇಟ್ಟುಕೊಂಡಿದ್ದ ಆಹಾರವನ್ನು ಊಟಮಾಡಿರಿ. ಇಂದು ನೀವು ಹೊಲದಲ್ಲಿ ಯಾವ ಆಹಾರವನ್ನೂ ಕಾಣುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆಗ ಮೋಶೆ ಅವರಿಗೆ, “ಈ ಹೊತ್ತು ಅದನ್ನು ಊಟ ಮಾಡಿರಿ. ಈ ದಿನವು ಯೆಹೋವನ ಸಬ್ಬತ್ ದಿನವಾಗಿರುವುದರಿಂದ ಈ ದಿನ ಅದು ಹೊಲದಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಮೋಶೆ ಅವರಿಗೆ, “ಈ ದಿನ ಅದನ್ನು ಊಟಮಾಡಿ. ಇದು ಸರ್ವೇಶ್ವರನ ಸಬ್ಬತ್ ದಿನವಾದ್ದರಿಂದ ಈ ದಿನ ಅದು ಅಡವಿಯಲ್ಲಿ ದೊರೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆಗ ಮೋಶೆ ಅವರಿಗೆ - ಈ ಹೊತ್ತು ಅದನ್ನು ಊಟ ಮಾಡಿರಿ; ಈ ದಿನವು ಯೆಹೋವನ ಸಬ್ಬತ್ ದಿನವಾದದರಿಂದ ಈ ಹೊತ್ತು ಅದು ಅಡವಿಯಲ್ಲಿ ದೊರೆಯುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಗ ಮೋಶೆಯು, “ಈ ಹೊತ್ತು ಅದನ್ನು ಊಟಮಾಡಿರಿ. ಏಕೆಂದರೆ ಈ ದಿನವು ಯೆಹೋವ ದೇವರ ಸಬ್ಬತ್ ದಿನವಾಗಿದೆ. ಈ ಹೊತ್ತು ನಿಮಗೆ ಹೊಲದಲ್ಲಿ ಆಹಾರ ಸಿಕ್ಕುವುದಿಲ್ಲ. ಅಧ್ಯಾಯವನ್ನು ನೋಡಿ |