Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:26 - ಪರಿಶುದ್ದ ಬೈಬಲ್‌

26 ನೀವು ಆರು ದಿನಗಳಲ್ಲಿ ಆಹಾರವನ್ನು ಕೂಡಿಸಬೇಕು. ಆದರೆ ವಾರದ ಏಳನೆಯ ದಿನವು ಸಬ್ಬತ್ ದಿನವಾಗಿದೆ, ಅಂದರೆ ವಿಶ್ರಾಂತಿಯ ದಿನವಾಗಿದೆ. ಆದ್ದರಿಂದ ಆ ದಿನದಲ್ಲಿ ನೆಲದ ಮೇಲೆ ಯಾವ ಆಹಾರವೂ ಇರುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆರು ದಿನ ಅದನ್ನು ಕೂಡಿಸಿಡಬೇಕು. ಏಳನೆಯ ದಿನ ಸಬ್ಬತ್ ದಿನವಾಗಿರುವುದರಿಂದ ಅದು ದೊರೆಯುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆರು ದಿವಸ ಅದನ್ನು ಕೂಡಿಸಬಹುದು. ಏಳನಯ ದಿನ ಸಬ್ಬತ್ ಆದುದರಿಂದ ಅದು ದೊರೆಯುವುದೇ ಇಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆರು ದಿವಸ ಅದನ್ನು ಕೂಡಿಸಬಹುದು; ಏಳನೆಯ ದಿನ ಸಬ್ಬತಾದದರಿಂದ ಅದು ದೊರೆಯುವದೇ ಇಲ್ಲ ಎಂದು ಹೇಳಿದನು. ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆರು ದಿವಸ ಅದನ್ನು ಕೂಡಿಸಬೇಕು. ಏಳನೆಯ ದಿನ ಸಬ್ಬತ್ ದಿನವಾಗಿರುವುದರಿಂದ ಅದು ದೊರೆಯುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:26
6 ತಿಳಿವುಗಳ ಹೋಲಿಕೆ  

ಯೇಸು ಸಬ್ಬತ್‌ದಿನದಲ್ಲಿ ವಾಸಿಮಾಡಿದ್ದರಿಂದ ಸಭಾಮಂದಿರದ ಅಧಿಕಾರಿ ಕೋಪಗೊಂಡು ಜನರಿಗೆ, “ಕೆಲಸಕ್ಕಾಗಿ ವಾರದಲ್ಲಿ ಆರು ದಿನಗಳಿವೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ. ಸಬ್ಬತ್‌ದಿನದಲ್ಲಿ ವಾಸಿಮಾಡಿಸಿಕೊಳ್ಳಬಾರದು” ಎಂದು ಹೇಳಿದನು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಒಳಗಿನ ಪ್ರಾಕಾರದ ಪೂರ್ವ ದಿಕ್ಕಿನ ದ್ವಾರವು ಆರು ಕೆಲಸದ ದಿವಸಗಳಲ್ಲಿ ಮುಚ್ಚಲ್ಪಡುವದು. ಅದು ಸಬ್ಬತ್ ದಿವಸಗಳಲ್ಲಿಯೂ ಅಮಾವಾಸ್ಯೆಯ ದಿವಸಗಳಲ್ಲಿಯೂ ತೆರೆಯಲ್ಪಡುವದು.


ವಾರದ ಆರು ದಿನಗಳಲ್ಲಿ ಕೆಲಸಮಾಡಿರಿ.


ಶನಿವಾರದಲ್ಲಿ ಮೋಶೆಯು ಜನರಿಗೆ, “ಈ ದಿನ ಸಬ್ಬತ್ತಾಗಿದೆ. ಇದು ಯೆಹೋವನನ್ನು ಸನ್ಮಾನಿಸುವುದಕ್ಕಿರುವ ವಿಶೇಷವಾದ ವಿಶ್ರಾಂತಿ ದಿನವಾಗಿದೆ. ನೀವು ನಿನ್ನೆಯಿಂದ ಇಟ್ಟುಕೊಂಡಿದ್ದ ಆಹಾರವನ್ನು ಊಟಮಾಡಿರಿ. ಇಂದು ನೀವು ಹೊಲದಲ್ಲಿ ಯಾವ ಆಹಾರವನ್ನೂ ಕಾಣುವುದಿಲ್ಲ.


ಏಳನೆಯ ದಿನದಲ್ಲಿ ಕೆಲವು ಜನರು ಆಹಾರವನ್ನು ಕೂಡಿಸಿಕೊಳ್ಳಲು ಹೊರಗೆ ಹೋದರು. ಆದರೆ ಅವರಿಗೆ ಏನೂ ಸಿಕ್ಕಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು