ವಿಮೋಚನಕಾಂಡ 16:28 - ಪರಿಶುದ್ದ ಬೈಬಲ್28 ಆಗ ಯೆಹೋವನು ಮೋಶೆಗೆ, “ಜನರೇ, ನೀವು ಇನ್ನೆಷ್ಟರವರೆಗೆ ನನ್ನ ಆಜ್ಞೆಗಳಿಗೆ ಮತ್ತು ಬೋಧನೆಗಳಿಗೆ ವಿಧೇಯರಾಗುವುದಿಲ್ಲ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆಗ ಯೆಹೋವನು ಮೋಶೆಗೆ, “ನೀವು ಎಲ್ಲಿಯವರೆಗೆ ನನ್ನ ಆಜ್ಞೆಗಳನ್ನೂ, ನಾನು ಮಾಡಿರುವ ನಿಯಮಗಳನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆಗ ಸರ್ವೇಶ್ವರ, “ಎಲ್ಲಿಯವರೆಗೆ ನೀವು ನನ್ನ ಆಜ್ಞೆಯನ್ನೂ ನಾನು ಮಾಡಿರುವ ನಿಯಮವನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆಗ ಯೆಹೋವನು ಮೋಶೆಗೆ - ನೀವು ಎಲ್ಲಿಯವರೆಗೂ ನನ್ನ ಆಜ್ಞೆಯನ್ನೂ ನಾನು ಮಾಡಿರುವ ನಿಯಮವನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರೋ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆಗ ಯೆಹೋವ ದೇವರು ಮೋಶೆಗೆ, “ಎಷ್ಟು ಕಾಲ ನನ್ನ ಕಟ್ಟಳೆಗಳನ್ನೂ, ನಿಯಮಗಳನ್ನೂ ಕೈಗೊಳ್ಳದೆ ನಿರಾಕರಿಸುವಿರಿ? ಅಧ್ಯಾಯವನ್ನು ನೋಡಿ |
“‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.
ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.