ವಿಮೋಚನಕಾಂಡ 16:29 - ಪರಿಶುದ್ದ ಬೈಬಲ್29 ನೋಡಿರಿ, ಯೆಹೋವನು ಸಬ್ಬತ್ ದಿನವನ್ನು ನಿಮಗೆ ವಿಶ್ರಾಂತಿ ದಿನವನ್ನಾಗಿ ಮಾಡಿದ್ದಾನೆ. ಆದ್ದರಿಂದ ಯೆಹೋವನು ಶುಕ್ರವಾರದಂದು ನಿಮಗೆ ಎರಡು ದಿನಗಳಿಗೆ ಬೇಕಾದಷ್ಟು ಆಹಾರವನ್ನು ಕೊಡುವನು. ಆದ್ದರಿಂದ ಸಬ್ಬತ್ತಿನಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ಕುಳಿತುಕೊಂಡು ವಿಶ್ರಮಿಸಿಕೊಳ್ಳಬೇಕು. ನೀವು ಇರುವಲ್ಲೇ ಇರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನೋಡಿರಿ, ಯೆಹೋವನು ನಿಮಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಅಪ್ಪಣೆಕೊಟ್ಟಿರುವುದರಿಂದಲೇ ಆರನೆಯ ದಿನದಲ್ಲಿ ಎರಡು ದಿನದ ಆಹಾರವು ನಿಮಗೆ ದೊರಕುವಂತೆ ಅನುಗ್ರಹಿಸಿದ್ದಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವ ಸ್ಥಳದಲ್ಲಿ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಬಾರದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ನೋಡಿ, ಸಬ್ಬತ್ ದಿನವನ್ನು ನೀವು ಆಚರಿಸಬೇಕೆಂದು ಸರ್ವೇಶ್ವರನಾದ ನಾನು ಅಪ್ಪಣೆ ಮಾಡಿರುವುದರಿಂದಲೇ ಆರನೆಯ ದಿನ ಎರಡು ದಿನದ ಆಹಾರ ನಿಮಗೆ ದೊರಕುವಂತೆ ಅನುಗ್ರಹಿಸಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವಲ್ಲಿಯೇ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಕೂಡದು,’ ಎಂದು ಮೋಶೆಗೆ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನೋಡಿರಿ, ನೀವು ಸಬ್ಬತ್ ದಿನವನ್ನು ಆಚರಿಸಬೇಕೆಂದು ನಾನು ಅಪ್ಪಣೆ ಮಾಡಿರುವದರಿಂದಲೇ ಆರನೆಯ ದಿನದಲ್ಲಿ ಎರಡು ದಿನದ ಆಹಾರವು ನಿಮಗೆ ದೊರಕುವಂತೆ ಅನುಗ್ರಹಿಸಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವಲ್ಲಿಯೇ ಇರಬೇಕು; ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಕೂಡದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ನೋಡಿರಿ, ಯೆಹೋವ ದೇವರಾದ ನಾನು ನಿಮಗೆ ಸಬ್ಬತ್ ದಿನವನ್ನು ಕೊಟ್ಟಿದ್ದರಿಂದಲೇ, ಆರನೆಯ ದಿನದಲ್ಲಿ ನಿಮಗೆ ಎರಡು ದಿನಗಳಿಗೆ ಸಾಕಾಗುವಷ್ಟು ಆಹಾರ ಕೊಟ್ಟಿದ್ದೇನೆ. ಪ್ರತಿಯೊಬ್ಬನೂ ತನ್ನ ತನ್ನ ಸ್ಥಳದಲ್ಲಿ ಇರಲಿ. ಏಳನೆಯ ದಿನದಲ್ಲಿ ಯಾರೂ ತನ್ನ ಸ್ಥಳವನ್ನು ಬಿಟ್ಟುಹೋಗಬಾರದು,” ಎಂದರು. ಅಧ್ಯಾಯವನ್ನು ನೋಡಿ |