ವಿಮೋಚನಕಾಂಡ 16:31 - ಪರಿಶುದ್ದ ಬೈಬಲ್31 ಜನರು ಈ ವಿಶೇಷ ಆಹಾರವನ್ನು ಮನ್ನ ಎಂದು ಕರೆಯತೊಡಗಿದರು. ಮನ್ನವು ಚಿಕ್ಕದಾದ ಬಿಳಿ ಕೊತ್ತಂಬರಿ ಬೀಜಗಳಂತಿದ್ದವು ಮತ್ತು ಜೇನುತುಪ್ಪದಿಂದ ಮಾಡಿದ ತೆಳುವಾದ ರೊಟ್ಟಿಯಂತೆ ರುಚಿಯಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಇಸ್ರಾಯೇಲರು ಆ ಆಹಾರಕ್ಕೆ “ಮನ್ನ” ಎಂದು ಹೆಸರಿಟ್ಟರು. ಅದು ಬಿಳಿ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಸವರಿದ ದೋಸೆಯಂತೆ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಇಸ್ರಯೇಲ್ ಮನೆತನದವರು ಆ ಆಹಾರಕ್ಕೆ ‘ಮನ್ನ’ ಎಂದು ಹೆಸರಿಟ್ಟರು. ಅದು ಬಿಳೀ ಕೊತ್ತಂಬರಿ ಕಾಳಿನಂತಿದ್ದು, ರುಚಿಯಲ್ಲಿ ಜೇನುತುಪ್ಪ ಹಾಕಿ ಕಲಸಿದ ದೋಸೆಗಳ ಹಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಇಸ್ರಾಯೇಲ್ಯರು ಆ ಆಹಾರಕ್ಕೆ ಮನ್ನ ಎಂದು ಹೆಸರಿಟ್ಟರು. ಅದು ಬಿಳೀ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಕಲಸಿದ ದೋಸೆಗಳ ಹಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಇಸ್ರಾಯೇಲರು ಆ ಆಹಾರಕ್ಕೆ ಮನ್ನಾ, ಎಂದು ಹೆಸರಿಟ್ಟರು. ಅದು ಕೊತ್ತಂಬರಿ ಬೀಜದಂತೆ ಬೆಳ್ಳಗಿತ್ತು. ಅದರ ರುಚಿಯು ಜೇನುತುಪ್ಪ ಕಲಸಿದ ದೋಸೆಯಂತೆ ಇತ್ತು. ಅಧ್ಯಾಯವನ್ನು ನೋಡಿ |
ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿ ನಿಮಗೆ ಹಸಿವೆಯಾಗುವಂತೆ ಮಾಡಿದನು. ಆ ಬಳಿಕ ಮನ್ನದ ಮೂಲಕ ನಿಮ್ಮ ಹಸಿವೆಯನ್ನು ನೀಗಿದನು. ಇದರ ವಿಷಯವಾಗಿ ನೀವು ಹಿಂದೆಂದೂ ಕೇಳಿರಲಿಲ್ಲ. ನಿಮ್ಮ ಪೂರ್ವಿಕರೂ ನೋಡಿರಲಿಲ್ಲ. ಆತನು ಹೀಗೇಕೆ ಮಾಡಿದನು? ಯಾಕೆಂದರೆ ಕೇವಲ ರೊಟ್ಟಿ ತಿಂದ ಮಾತ್ರದಿಂದ ಮನುಷ್ಯರು ಬದುಕದೆ ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೇ ಬದುಕುವರೆಂಬುದನ್ನು ನೀವು ತಿಳಿಯಬೇಕೆಂದು ಹೀಗೆ ಮಾಡಿದನು.