33 ಆದ್ದರಿಂದ ಮೋಶೆಯು ಆರೋನನಿಗೆ, “ಒಂದು ಭರಣಿಯನ್ನು ತೆಗೆದುಕೊಂಡು ಅದರಲ್ಲಿ ಮೂರು ಸೇರಿನಷ್ಟು ಮನ್ನವನ್ನು ತುಂಬಿಸು. ನಿಮ್ಮ ಮುಂದಿನ ಸಂತತಿಯವರು ನೋಡುವುದಕೋಸ್ಕರ ಇದನ್ನು ಉಳಿಸಿ ಯೆಹೋವನ ಮುಂದೆ ಇಡು” ಎಂದು ಹೇಳಿದನು.
33 ಆದಕಾರಣ ಮೋಶೆಯು ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು, ಅದರಲ್ಲಿ ಒಂದು ಸೇರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಇಡಬೇಕು” ಎಂದು ಹೇಳಿದನು.
33 ಆದಕಾರಣ ಮೋಶೆ ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಅದರಲ್ಲಿ ಮೂರು ಸೇರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕೋಸ್ಕರ ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿಡು,” ಎಂದು ಹೇಳಿದನು.
33 ಆದಕಾರಣ ಮೋಶೆಯು ಆರೋನನಿಗೆ - ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಅದರಲ್ಲಿ ಒಂದು ಗೋಮೆರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವದಕ್ಕೋಸ್ಕರ ಅದನ್ನು ಯೆಹೋವನ ಸನ್ನಿಧಿಯಲ್ಲಿ ಇಡು ಎಂದು ಹೇಳಿದನು.
33 ಮೋಶೆ ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಒಂದು ಓಮೆರ್ ಮನ್ನವನ್ನು ಅದರಲ್ಲಿ ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕೋಸ್ಕರ ಅದನ್ನು ಯೆಹೋವ ದೇವರ ಮುಂದೆ ಇಡು,” ಎಂದನು.
ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.
“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.
ಮೋಶೆಯು, “ಯೆಹೋವನು ಆಜ್ಞಾಪಿಸಿದ್ದೇನೆಂದರೆ, ‘ಮೂರು ಸೇರಿನಷ್ಟು ಮನ್ನವನ್ನು ನಿಮ್ಮ ಮುಂದಿನ ಸಂತತಿಯವರಿಗಾಗಿ ಉಳಿಸಿರಿ. ನಾನು ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ನಡೆಸಿದಾಗ ಅರಣ್ಯದಲ್ಲಿ ನಾನು ನಿಮಗೆ ಕೊಟ್ಟ ಈ ಆಹಾರವನ್ನು ನೋಡುವರು’” ಎಂದು ಹೇಳಿದನು.