Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:6 - ಪರಿಶುದ್ದ ಬೈಬಲ್‌

6 ಆದ್ದರಿಂದ ಮೋಶೆಯು ಮತ್ತು ಆರೋನನು ಇಸ್ರೇಲರಿಗೆ, “ಈ ರಾತ್ರಿ ನೀವು ಯೆಹೋವನ ಶಕ್ತಿಯನ್ನು ನೋಡುವಿರಿ. ನಿಮ್ಮನ್ನು ಈಜಿಪ್ಟಿನಿಂದ ರಕ್ಷಿಸಿದವನು ಆತನೇ ಎಂದು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೋಶೆ ಮತ್ತು ಆರೋನರು ಇಸ್ರಾಯೇಲರಿಗೆ, “ನಿಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾತನು ಯೆಹೋವನೇ ಎಂಬುದು ಇಂದು ಸಾಯಂಕಾಲದಲ್ಲಿ ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮೋಶೆ ಮತ್ತು ಆರೋನರು ಇಸ್ರಯೇಲರೆಲ್ಲರನ್ನು ಉದ್ದೇಶಿಸಿ, “ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದವರು ಸರ್ವೇಶ್ವರ ಸ್ವಾಮಿಯೇ ಎಂಬುದು ಈ ಸಂಜೆ ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮೋಶೆ ಆರೋನರು ಇಸ್ರಾಯೇಲ್ಯರೆಲ್ಲರಿಗೆ - ನಿಮ್ಮನ್ನು ಐಗುಪ್ತದೇಶದಿಂದ ಬಿಡಿಸಿದವನು ಯೆಹೋವನೇ ಎಂಬದು ಸಾಯಂಕಾಲದಲ್ಲಿ ನಿಮಗೆ ಗೊತ್ತಾಗುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಮೋಶೆ, ಆರೋನರು ಇಸ್ರಾಯೇಲರಿಗೆಲ್ಲಾ, “ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದವರು ಯೆಹೋವ ದೇವರೇ, ಎಂದು ಸಾಯಂಕಾಲವಾದಾಗ ನಿಮಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:6
14 ತಿಳಿವುಗಳ ಹೋಲಿಕೆ  

ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ನಿಮ್ಮ ದೇವರಾಗಿರುವ ಯೆಹೋವನಾದ ನಾನೇ ನಿಮ್ಮನ್ನು ಈಜಿಪ್ಟಿನವರ ಬಿಟ್ಟೀಕೆಲಸದಿಂದ ಬಿಡುಗಡೆಗೊಳಿಸಿದೆನೆಂದು ಆಗ ನೀವು ತಿಳಿದುಕೊಳ್ಳುವಿರಿ.


ಆದರೆ ಯೆಹೋವನು ಇವರಿಗೋಸ್ಕರ ಅಪೂರ್ವ ಶಿಕ್ಷೆಯನ್ನು ಕಲ್ಪಿಸಿದರೆ ಅಂದರೆ ಭೂಮಿಯು ಬಾಯ್ದೆರೆದು ಇವರನ್ನೂ ಇವರ ಸರ್ವಸ್ವವನ್ನೂ ನುಂಗುವುದರಿಂದ ಇವರೆಲ್ಲರೂ ಸಜೀವಿಗಳಾಗಿ ಸಮಾಧಿಯಾದರೆ, ಇವರು ನಿಜವಾಗಿಯೂ ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದನು.


ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಯೆಹೋವನೇ ಈ ಕಾರ್ಯಗಳನ್ನು ಮಾಡುವುದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವು ತಿಳಿದುಕೊಳ್ಳುವಂತೆ ನಾನು ಸಾಕ್ಷಿಯನ್ನು ಕೊಡುವೆನು.


ಕುರುಬನು ಕುರಿಹಿಂಡನ್ನು ಕರೆದೊಯ್ಯುವಂತೆ ನಿನ್ನ ಜನರನ್ನು ಕರೆದೊಯ್ಯಲು ಮೋಶೆಯನ್ನೂ ಆರೋನನನ್ನೂ ಉಪಯೋಗಿಸಿದೆ.


ಆದರೆ ಮೋಶೆಯು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ನಿನ್ನ ಕೋಪವು ನಿನ್ನ ಜನರನ್ನು ನಾಶಮಾಡದಿರಲಿ. ನಿನ್ನ ಮಹಾಶಕ್ತಿಯಿಂದಲೂ ಬಲದಿಂದಲೂ ಈ ಜನರನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆಯಲ್ಲಾ.


ಅದೇ ಸಮಯದಲ್ಲಿ ಯೆಹೋವನು ಮೋಶೆಗೆ, “ಬೆಟ್ಟದಿಂದ ಇಳಿದುಹೋಗು. ನೀನು ಈಜಿಪ್ಟಿನಿಂದ ಕರೆದುಕೊಂಡು ಬಂದ ನಿನ್ನ ಜನರು ಭಯಂಕರವಾದ ಪಾಪ ಮಾಡಿದ್ದಾರೆ.


ಬಹಳ ಸಮಯ ದಾಟಿಹೋದರೂ ಮೋಶೆ ಬೆಟ್ಟದಿಂದ ಕೆಳಗಿಳಿಯಲಿಲ್ಲವಾದ್ದರಿಂದ ಇಸ್ರೇಲರು ಆರೋನನ ಬಳಿಗೆ ಒಟ್ಟಾಗಿ ಬಂದು, “ನೋಡು, ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನು. ಆದರೆ ಅವನಿಗೇನಾಯಿತೋ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ಕೆಲವು ದೇವರುಗಳನ್ನು ಮಾಡಿಕೊಡು” ಎಂದು ಹೇಳಿದರು.


ಅಲ್ಲದೆ ಮೋಶೆಯು, “ನೀವು ಗೊಣಗುಟ್ಟುತ್ತಿರುವುದನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ರಾತ್ರಿಯಲ್ಲಿ ಆತನು ನಿಮಗೆ ಮಾಂಸವನ್ನು ಕೊಡುವನು. ಪ್ರತಿ ಮುಂಜಾನೆ ನಿಮಗೆ ಬೇಕಾದಷ್ಟು ರೊಟ್ಟಿಯು ದೊರಕುವುದು. ನೀವು (ಆರೋನನ ಮೇಲೂ ನನ್ನ ಮೇಲೂ) ಗೊಣಗುಟ್ಟುತ್ತಿದ್ದೀರಿ? ಆದರೆ ನಮಗೆ ದೂರು ಹೇಳಲು ನಾವೆಷ್ಟರವರು? ನೀವು ಯೆಹೋವನ ವಿರುದ್ಧವಾಗಿ ದೂರು ಹೇಳುತ್ತಿದ್ದೀರೆಂಬುದು ನಿಮ್ಮ ಜ್ಞಾಪಕದಲ್ಲಿರಲಿ” ಎಂದು ಹೇಳಿದನು.


ಅವರು, “ಯೆಹೋವನು ನಮ್ಮನ್ನು ಈಜಿಪ್ಟಿನಲ್ಲಿ ಕೊಂದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ನಮಗೆ ಈಜಿಪ್ಟಿನಲ್ಲಿ ಮಾಂಸವೂ ರೊಟ್ಟಿಯೂ ಇತ್ತು. ನಮಗೆ ಬೇಕಿದ್ದ ಆಹಾರವೆಲ್ಲಾ ನಮ್ಮಲ್ಲಿತ್ತು. ಆದರೆ ಈಗ ನೀವು ನಮ್ಮನ್ನು ಈ ಅರಣ್ಯಕ್ಕೆ ಕರೆದುಕೊಂಡು ಬಂದಿರಿ. ನಾವೆಲ್ಲರೂ ಇಲ್ಲಿ ಹಸಿವೆಯಿಂದ ಸಾಯುವೆವು” ಎಂದು ಹೇಳಿದರು.


ಆದ್ದರಿಂದ ಅದೇ ದಿನದಲ್ಲಿ ಯೆಹೋವನು ಇಸ್ರೇಲರನ್ನು ಈಜಿಪ್ಟ್ ದೇಶದಿಂದ ಜನರನ್ನು ಗುಂಪುಗುಂಪುಗಳಾಗಿ ಹೊರತಂದನು.


ಆದ್ದರಿಂದ ನನ್ನ ಈ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು.


“ಆದರೆ ನನ್ನ ಜನರು ನನಗೆ ಕಿವಿಗೊಡಲಿಲ್ಲ. ಇಸ್ರೇಲರು ನನಗೆ ವಿಧೇಯರಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು