Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 17:14 - ಪರಿಶುದ್ದ ಬೈಬಲ್‌

14 ಬಳಿಕ ಯೆಹೋವನು ಮೋಶೆಗೆ, “ಈ ಯುದ್ಧದ ಕುರಿತು ಬರೆ: ಜನರು ಇಲ್ಲಿ ನಡೆದದ್ದನ್ನು ಜ್ಞಾಪಿಸಿಕೊಳ್ಳುವಂತೆ ಈ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ನಾನು ಅಮಾಲೇಕ್ಯರನ್ನು ಭೂಮಿಯ ಮೇಲಿಂದ ಸಂಪೂರ್ಣವಾಗಿ ನಾಶಮಾಡುವೆನೆಂದು ಯೆಹೋಶುವನಿಗೆ ಹೇಳಲು ಮರೆಯಬೇಡ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೆಹೋವನು ಮೋಶೆಗೆ, “ಇದನ್ನು ಜ್ಞಾಪಕಾರ್ಥಕವಾಗಿ ಒಂದು ಗ್ರಂಥದಲ್ಲಿ ಬರೆ. ಅದನ್ನು ಯೆಹೋಶುವನಿಗೆ ತಿಳಿಸು. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಮಿಯ ಮೇಲೆ ಇರದಂತೆ ಸಂಪೂರ್ಣವಾಗಿ ನಾಶಮಾಡಿ ಬಿಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಸರ್ವೇಶ್ವರ, “ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಇಲ್ಲದಂತೆ ಮಾಡುವೆನು ಎಂಬ ಈ ಮಾತನ್ನು ಜ್ಞಾಪಕಾರ್ಥವಾಗಿ ಪುಸ್ತಕದಲ್ಲಿ ಬರೆ ಮತ್ತು ಯೆಹೋಶುವನಿಗೆ ಮನದಟ್ಟಾಗುವಂತೆ ಮಾಡು” ಎಂದು ಮೋಶೆಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಯೆಹೋವನು ಮೋಶೆಗೆ - ಭೂವಿುಯ ಮೇಲೆ ಅಮಾಲೇಕ್ಯರ ಹೆಸರೇ ಇಲ್ಲದಂತೆ ಮಾಡುವೆನು; ಈ ಮಾತನ್ನು ಜ್ಞಾಪಕಾರ್ಥವಾಗಿ ಪುಸ್ತಕದಲ್ಲಿ ಬರೆ, ಮತ್ತು ಯೆಹೋಶುವನಿಗೆ ಮಂದಟ್ಟು ಮಾಡಿಕೊಡು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಯೆಹೋವ ದೇವರು ಮೋಶೆಗೆ, “ಇದನ್ನು ಜ್ಞಾಪಕಾರ್ಥವಾಗಿ ಗ್ರಂಥದಲ್ಲಿ ಬರೆ. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಲೋಕದಲ್ಲಿ ಇರದಂತೆ ಸಂಪೂರ್ಣವಾಗಿ ಅಳಿಸಿಬಿಡುವೆನು. ಇದನ್ನು ಯೆಹೋಶುವನಿಗೆ ಮನದಟ್ಟಾಗುವಂತೆ ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 17:14
30 ತಿಳಿವುಗಳ ಹೋಲಿಕೆ  

ಬಳಿಕ ಯೆಹೋವನು ಮೋಶೆಗೆ, “ನಾನು ನಿನಗೆ ಹೇಳಿದ ಸಂಗತಿಗಳನ್ನೆಲ್ಲಾ ಬರೆ. ಆ ಸಂಗತಿಗಳು ನಾನು ನಿನ್ನೊಂದಿಗೆ ಮತ್ತು ಇಸ್ರೇಲರೊಂದಿಗೆ ಮಾಡಿದ ಒಡಂಬಡಿಕೆಯಾಗಿದೆ” ಎಂದು ಹೇಳಿದನು.


ದಾವೀದನು ಅವರನ್ನು ಸೋಲಿಸಿ ಅವರನ್ನು ಕೊಂದನು. ಅವರು ಹೊತ್ತಾರೆಯಿಂದ ಮಾರನೆಯ ದಿನದ ಸಂಜೆಯವರೆಗೆ ಹೋರಾಡಿದರು. ನಾನೂರು ಮಂದಿ ಯುವಕರು ತಮ್ಮ ಒಂಟೆಗಳ ಮೇಲೇರಿ ಓಡಿಹೋದದ್ದನ್ನು ಬಿಟ್ಟರೆ, ಉಳಿದ ಅಮಾಲೇಕ್ಯರಲ್ಲಿ ಯಾರೂ ತಪ್ಪಿಸಿಕೊಳ್ಳಲಾಗಲಿಲ್ಲ.


ಮೂರನೆಯ ದಿನ ದಾವೀದನು ಮತ್ತು ಅವನ ಜನರು ಚಿಕ್ಲಗ್ ಊರಿಗೆ ಬಂದರು. ಅಮಾಲೇಕ್ಯರು ಚಿಕ್ಲಗನ್ನು ಆಕ್ರಮಣ ಮಾಡಿರುವುದನ್ನು ಅವರು ನೋಡಿದರು. ಅಮಾಲೇಕ್ಯರು ನೆಗೆವ್ ಪ್ರದೇಶದ ಮೇಲೆ ದಾಳಿ ಮಾಡಿದರು. ಅವರು ಚಿಕ್ಲಗನ್ನು ಆಕ್ರಮಿಸಿದ್ದರು ಮತ್ತು ಆ ನಗರವನ್ನು ಸುಟ್ಟುಹಾಕಿದ್ದರು.


ಆತನು ಸೋಲಿಸಿದ ದೇಶಗಳು ಯಾವುವೆಂದರೆ: ಅರಾಮ್, ಮೋವಾಬ್, ಅಮ್ಮೋನಿಯ, ಫಿಲಿಷ್ಟಿಯ ಮತ್ತು ಅಮಾಲೇಕ್ಯ. ಚೋಬದ ರಾಜನಾದ ರೆಹೋಬನ ಮಗ ಹದದೆಜೆರನನ್ನು ಸಹ ದಾವೀದನು ಸೋಲಿಸಿದನು.


“ತರುವಾಯ ಬಿಳಾಮನು ಅಮಾಲೇಕ್ಯರನ್ನು ನೋಡಿ ಹೀಗೆಂದನು: “ಅಮಾಲೇಕ್ಯರು ಎಲ್ಲಾ ಜನಾಂಗಗಳಲ್ಲಿ ಬಲಿಷ್ಠರು; ಅಮಾಲೇಕ್ಯರು ಎಲ್ಲಾ ಜನಾಂಗಗಳಲ್ಲಿ ಮೊದಲನೆಯವರು; ಆದರೆ ಕೊನೆಯಲ್ಲಿ ಅವರು ನಾಶವಾಗುವರು.”


ಭೂಮಿಯ ಮೇಲಿರುವ ಜನರು ಅವನನ್ನು ಜ್ಞಾಪಿಸಿಕೊಳ್ಳುವುದಿಲ್ಲ; ಇನ್ನು ಮೇಲೆ ಅವನನ್ನು ಯಾರೂ ಜ್ಞಾಪಿಸಿಕೊಳ್ಳುವುದಿಲ್ಲ.


ಆದ್ದರಿಂದ ಮೋಶೆ ಯೆಹೋವನ ಆಜ್ಞೆಗಳನ್ನೆಲ್ಲಾ ಒಂದು ಸುರುಳಿಯಲ್ಲಿ ಬರೆದನು. ಮರುದಿನ ಮುಂಜಾನೆ, ಅವನು ಬೇಗನೆ ಎದ್ದು ಬೆಟ್ಟದ ಕೆಳಭಾಗದ ಹತ್ತಿರ, ಹನ್ನೆರಡು ಕುಲಗಳಿಗೆ ಒಂದೊಂದರಂತೆ ಹನ್ನೆರಡು ಕಂಬಗಳುಳ್ಳ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಇಸ್ರೇಲರ ಹನ್ನೆರಡು ಕುಲಗಳಿಗೆ ಒಂದೊಂದರಂತೆ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು.


“ಈ ಹಬ್ಬವು ನಿಮ್ಮ ಕೈಗಳಲ್ಲಿ ಜ್ಞಾಪಕಪಟ್ಟಿಯಂತಿದ್ದು ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ಮತ್ತು ನಿಮಗೆ ಆತನು ನೀಡಿದ ಉಪದೇಶಗಳನ್ನು ನೆನಪಿಗೆ ತರುತ್ತದೆ.


“ಆದ್ದರಿಂದ ನೀವು ಆ ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವಿರಿ. ಅದು ನಿಮಗೆ ವಿಶೇಷವಾದ ಹಬ್ಬವಾಗಿರುವುದು. ನಿಮ್ಮ ಸಂತತಿಯವರು ಈ ಹಬ್ಬದಿಂದ ಯೆಹೋವನನ್ನು ಎಂದೆಂದಿಗೂ ಸನ್ಮಾನಿಸುವರು.


ನೀತಿವಂತರ ನೆನಪು ಆಶೀರ್ವಾದದಾಯಕ. ಕೆಡುಕರಾದರೋ ಬಹುಬೇಗನೆ ಮರೆಯಲ್ಪಡುವರು.


ವೈರಿಗಳು ಇಲ್ಲವಾದರು. ನೀನು ಅವರ ನಗರಗಳನ್ನು ನಾಶಮಾಡಿದೆ! ಈಗ ಹಾಳಾದ ಕಟ್ಟಡಗಳು ಮಾತ್ರ ಉಳಿದಿವೆ; ದುಷ್ಟರನ್ನು ಜ್ಞಾಪಕಕ್ಕೆ ತರುವ ಯಾವುದೂ ಉಳಿದಿಲ್ಲ.


“ನನ್ನ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡು ಬರೆದಿಟ್ಟರೆ ಎಷ್ಟೋ ಒಳ್ಳೆಯದು. ಸುರುಳಿಯಲ್ಲಿ ಬರೆದಿಟ್ಟರೆ ಅದೆಷ್ಟೋ ಮೇಲು.


ನಿನ್ನ ಆಜ್ಞೆಗಳಿಗೆ ಅವಿಧೇಯರಾಗಬಾರದೆಂದು ಈಗ ನಮಗೆ ತಿಳಿಯುತ್ತದೆ. ಅನ್ಯಜನರನ್ನು ಮದುವೆ ಮಾಡಿಕೊಳ್ಳಬಾರದು. ಅವರು ಘೋರ ಪಾಪಿಗಳು. ನಾವು ಹೀಗೆಯೇ ಅವರೊಂದಿಗೆ ಮದುವೆಯಾದರೆ ನೀನು ನಮ್ಮನ್ನು ನಾಶಮಾಡುವೆ ಎಂದು ನಾವು ತಿಳಿದಿದ್ದೇವೆ. ಹೀಗಿರುವಲ್ಲಿ ಇಸ್ರೇಲ್ ಜನಾಂಗದಲ್ಲಿ ಯಾರೂ ಉಳಿಯಲಾರರು.


ಆಗ ಅಲ್ಲಿ ಸ್ವಲ್ಪವೇ ಮಂದಿ ಅಮಾಲೇಕ್ಯರು ವಾಸಿಸುತ್ತಿದ್ದರು. ಈ ಸಿಮೆಯೋನರು ಅವರನ್ನು ಕೊಂದು ಆ ಸ್ಥಳದಲ್ಲಿ ನೆಲೆಸಿದರು. ಇಂದಿನವರೆಗೂ ಸಿಮೆಯೋನರು ಅಲ್ಲಿ ನೆಲೆಸಿದ್ದಾರೆ.


ದಾವೀದನು ಅಮಾಲೇಕ್ಯರನ್ನು ಸೋಲಿಸಿದ ಬಳಿಕ, ಚಿಕ್ಲಗಿಗೆ ಹಿಂದಿರುಗಿಬಂದು, ಅಲ್ಲಿ ಎರಡು ದಿವಸ ಇದ್ದನು. ಸೌಲನ ಮರಣಾನಂತರ ಇದು ಸಂಭವಿಸಿತು.


ಆತನು ನಿನಗೆ, ‘ಹೋಗು ದುಷ್ಟರಾದ ಅಮಾಲೇಕ್ಯರ ಮೇಲೆ ಯುದ್ಧ ಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಗೊಳಿಸು’ ಎಂದು ಆಜ್ಞಾಪಿಸಿದರು.


ಅದಕ್ಕೆ ನೀವು, ‘ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಜೋರ್ಡನ್ ನದಿಯನ್ನು ದಾಟುತ್ತಿರುವಾಗ ಹರಿಯುವ ನೀರು ನಿಂತುಹೋಯಿತು’ ಎಂದು ಹೇಳಿರಿ. ಆ ಕಲ್ಲುಗಳು ಇಸ್ರೇಲರಿಗೆ ಸದಾಕಾಲ ಸಾಕ್ಷಿಗಳಾಗಿರುತ್ತವೆ” ಎಂದು ಹೇಳಿದನು.


ಆಮೇಲೆ ಮೋಶೆಯು ಬೋಧನೆಗಳನ್ನೆಲ್ಲಾ ಬರೆದು ಯಾಜಕರ ಕೈಯಲ್ಲಿ ಅದನ್ನು ಕೊಟ್ಟನು. ಯಾಜಕರು ಲೇವಿಯ ಕುಲದವರು. ಅವರ ಕರ್ತವ್ಯ ಏನಾಗಿತ್ತೆಂದರೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊರುವುದು. ಮೋಶೆಯು ಇಸ್ರೇಲರ ಎಲ್ಲಾ ಹಿರಿಯರಿಗೂ ಬೋಧನೆಯ ಪುಸ್ತಕವನ್ನು ಕೊಟ್ಟನು.


ಮೋಶೆ ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರೇಲರು ಪ್ರಯಾಣಗಳಲ್ಲಿ ಇಳಿದುಕೊಂಡ ಸ್ಥಳಗಳ ಹೆಸರುಗಳನ್ನು ಬರೆದನು.


ಆದ್ದರಿಂದ ಯೆಹೋಶುವನು ಮತ್ತು ಅವನ ಸೈನಿಕರು ಅಮಾಲೇಕ್ಯರನ್ನು ಯುದ್ಧದಲ್ಲಿ ಸೋಲಿಸಿದರು.


ಆದರೆ ಯೆಹೋವನು ಮೋಶೆಗೆ, “ನನಗೆ ವಿರೋಧವಾಗಿ ಪಾಪಮಾಡುವ ಜನರ ಹೆಸರನ್ನು ಮಾತ್ರವೇ ನನ್ನ ಪುಸ್ತಕದಿಂದ ಅಳಿಸುತ್ತೇನೆ.


“ಯೆರೆಮೀಯನೇ, ಒಂದು ಸುರಳಿಯನ್ನು ತೆಗೆದುಕೊಂಡು ನಾನು ನಿನಗೆ ಹೇಳಿದ ಎಲ್ಲಾ ಸಂದೇಶಗಳನ್ನು ಅದರಲ್ಲಿ ಬರೆದಿಡು. ನಾನು ನಿನಗೆ ಇಸ್ರೇಲ್ ಮತ್ತು ಯೆಹೂದ ಜನಾಂಗಗಳ ಬಗ್ಗೆಯೂ ಮತ್ತು ಉಳಿದ ಜನಾಂಗಗಳ ಬಗ್ಗೆಯೂ ಹೇಳಿದ್ದೇನೆ. ಯೋಷೀಯನ ಆಳ್ವಿಕೆಯ ಕಾಲದಿಂದ ಇಲ್ಲಿಯವರೆಗೂ ನಾನು ನಿನಗೆ ಹೇಳಿದ ಪ್ರತಿಯೊಂದು ಶಬ್ಧವನ್ನೂ ಬರೆದಿಡು.


ಸಿಮೆಯೋನನ ಕುಲದ ಐನೂರು ಮಂದಿ ಸೇಯೀರ್ ಬೆಟ್ಟಪ್ರಾಂತ್ಯಕ್ಕೆ ಹೋದರು. ಇಷ್ಷೀಯ ಗಂಡುಮಕ್ಕಳು ಈ ಗುಂಪಿನ ನಾಯಕರಾಗಿದ್ದರು. ಅವರು ಯಾರೆಂದರೆ: ಪೆಲಟ್ಯ, ನೆಗರ್ಯ, ರೆಫಾಯ ಮತ್ತು ಉಜ್ಜೀಯೇಲ್. ಅಲ್ಲಿ ವಾಸಿಸುವ ಜನರೊಂದಿಗೆ ಇವರು ಕಾದಾಡಿದರು.


ಇಸ್ರೇಲರ ದೇವರಾದ ಯೆಹೋವನು ಹೀಗೆ ಹೇಳಿದನು: “ಯೆರೆಮೀಯನೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ಈ ಪುಸ್ತಕವನ್ನು ನೀನೇ ಬರೆಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು