Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 17:16 - ಪರಿಶುದ್ದ ಬೈಬಲ್‌

16 ಮೋಶೆ, “ನಾನು ನನ್ನ ಕೈಗಳನ್ನು ಯೆಹೋವನ ಸಿಂಹಾಸನದ ಕಡೆಗೆ ಎತ್ತಿದೆನು. ಆದ್ದರಿಂದ ಯೆಹೋವನು ಎಂದಿನಂತೆ ಅಮಾಲೇಕ್ಯರ ವಿರುದ್ಧವಾಗಿ ಯುದ್ಧಮಾಡಿದನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೋಶೆಯು, “ಅಮಾಲೇಕ್ಯರ ಕೈಯು ಯೆಹೋವನ ಸಿಂಹಾಸನಕ್ಕೆ ವಿರೋಧವಾಗಿ ಎತ್ತಲ್ಪಟ್ಟಿದ್ದರಿಂದ ಯೆಹೋವನ ಸಿಂಹಾಸನದಾಣೆಗೂ ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಗಳಲ್ಲಿ ಯುದ್ಧವಿರುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಲ್ಲದೆ, “ಸರ್ವೇಶ್ವರನ ಪತಾಕೆಯನ್ನು ಎತ್ತಿಹಿಡಿಯಿರಿ. ಅಮಾಲೇಕ್ಯರ ಮೇಲೆ ಸರ್ವೇಶ್ವರನಿಗೆ ತಲತಲಾಂತರಕ್ಕೂ ಯುದ್ಧವಿರುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯಾಹುವಿನ ಸಿಂಹಾಸನದ ಆಣೆ, ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಕ್ಕೂ ಯುದ್ಧವಿರುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅನಂತರ ಮೋಶೆ, “ಯೆಹೋವ ದೇವರ ಸಿಂಹಾಸನಕ್ಕೆ ವಿರೋಧವಾಗಿ ಅಮಾಲೇಕ್ಯರ ಕೈಗಳು ಎತ್ತಿದ್ದರಿಂದ, ಯೆಹೋವ ದೇವರು ತಲತಲಾಂತರಗಳಲ್ಲಿ ಅಮಾಲೇಕ್ಯರ ವಿರುದ್ಧ ಯುದ್ಧಮಾಡುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 17:16
5 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ, “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಹೀಗಿರಲು, ನೀವು ನನಗೊಂದು ಮನೆಯನ್ನು ಕಟ್ಟಲು ಸಾಧ್ಯವೆಂದು ಯೋಚಿಸುವಿರಾ? ವಿಶ್ರಮಿಸಿಕೊಳ್ಳಲು ನೀವು ಸ್ಥಳ ಮಾಡುವಿರಾ? ಇಲ್ಲ, ಸಾಧ್ಯವಿಲ್ಲ!


‘ಪ್ರಭುವು ಹೀಗೆನ್ನುತ್ತಾನೆ, ಪರಲೋಕವು ನನ್ನ ಸಿಂಹಾಸನ. ಭೂಮಿಯು ನನ್ನ ಪಾದಪೀಠ. ನೀವು ನನಗೋಸ್ಕರ ಯಾವ ಬಗೆಯ ಮನೆಯನ್ನು ಕಟ್ಟಬಲ್ಲಿರಿ? ನಾನು ವಿಶ್ರಮಿಸಿಕೊಳ್ಳತಕ್ಕ ಸ್ಥಳವೇ ಇಲ್ಲ!


“ನೀನು ನನಗೋಸ್ಕರವಾಗಿ ನಿನ್ನ ಒಬ್ಬನೇ ಮಗನನ್ನು ವಧಿಸಲು ಸಿದ್ಧನಾಗಿದ್ದೆ. ಆದ್ದರಿಂದ ನಾನು ನಿನಗೆ ಈ ವಾಗ್ದಾನವನ್ನು ಮಾಡುತ್ತೇನೆ:


ಯೆಹೋವನೇ ನನ್ನ ಬಲ, ಆತನು ನನ್ನನ್ನು ರಕ್ಷಿಸುತ್ತಾನೆ. ನನ್ನ ಬಲವೂ ಕೀರ್ತನೆಯೂ ಯಾಹುವೇ; ಆತನಿಂದ ನನಗೆ ರಕ್ಷಣೆ ಆಯಿತು. ಯೆಹೋವನು ನನ್ನ ದೇವರು. ಮತ್ತು ನಾನು ಆತನನ್ನು ಸ್ತುತಿಸುತ್ತೇನೆ. ಯೆಹೋವನೇ ನಮ್ಮ ಪೂರ್ವಿಕರ ದೇವರು. ನಾನು ಆತನನ್ನು ಸನ್ಮಾನಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು