Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 17:5 - ಪರಿಶುದ್ದ ಬೈಬಲ್‌

5 ಯೆಹೋವನು ಮೋಶೆಗೆ, “ಇಸ್ರೇಲ್ ಜನರ ಮುಂದೆ ಹೋಗು. ನಿನ್ನೊಡನೆ ಜನರ ಕೆಲವು ಹಿರಿಯರನ್ನು ಕರೆದುಕೊ. ನಿನ್ನ ಊರುಗೋಲನ್ನು ಹಿಡಿದುಕೊಂಡು ಹೋಗು. ನೀನು ನೈಲ್ ನದಿಯನ್ನು ಹೊಡೆಯಲು ಉಪಯೋಗಿಸಿದ ಕೋಲು ಇದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದಕ್ಕೆ ಯೆಹೋವನು ಮೋಶೆಗೆ, “ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಇಸ್ರಾಯೇಲರ ಹಿರಿಯರಲ್ಲಿ ಕೆಲವರನ್ನು ಕರೆದುಕೊಂಡು ಜನರ ಮುಂದೆ ಹೊರಟು, ನಾನು ತೋರಿಸುವ ಸ್ಥಳಕ್ಕೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅದಕ್ಕೆ ಸರ್ವೇಶ್ವರ, “ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು, ಇಸ್ರಯೇಲರ ಹಿರಿಯರಲ್ಲಿ ಕೆಲವರನ್ನು ಕರೆದುಕೊಂಡು, ನಾನು ತೋರಿಸುವ ಸ್ಥಳಕ್ಕೆ ಜನರ ಮುಂದೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅದಕ್ಕೆ ಯೆಹೋವನು - ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಇಸ್ರಾಯೇಲ್ಯರ ಹಿರಿಯರಲ್ಲಿ ಕೆಲವರನ್ನು ಕರಕೊಂಡು ಜನರ ಮುಂದೆ ಹೊರಟು [ನಾನು ತೋರಿಸುವ ಸ್ಥಳಕ್ಕೆ] ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಯೆಹೋವ ದೇವರು ಮೋಶೆಗೆ, “ಜನರ ಮುಂದೆ ಹಾದು ಹೋಗಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರನ್ನು ಕರಕೊಂಡು ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 17:5
8 ತಿಳಿವುಗಳ ಹೋಲಿಕೆ  

“ನರಪುತ್ರನೇ, ಆ ಜನರು ನಿನ್ನನ್ನು ವಿರೋಧಿಸಿದರೂ ನೀನು ಅವರಿಗೆ ಭಯಪಡಬೇಡ ಮತ್ತು ಅವರು ಹೇಳುವ ಮಾತುಗಳಿಗೆ ನೀನು ಹೆದರಬೇಡ. ಮುಳ್ಳುಗಳೂ ಮುಳ್ಳುಪೊದೆಗಳೂ ನಿನಗೆ ಒತ್ತುವಂತೆಯೂ ನೀನು ಚೇಳುಗಳ ಮೇಲೆ ಕುಳಿತುಕೊಂಡಿರುವಂತೆಯೂ ಅದು ಇರುವದು. ಆದರೆ ಅವರಾಡುವ ಮಾತುಗಳಿಗೆ ಭಯಪಡಬೇಡ. ಅವರು ದಂಗೆಕೋರರು.


ಇದಲ್ಲದೆ ಯೆಹೋವನು ಅವನಿಗೆ, “ನೀನು ಹೋಗಿ ಇಸ್ರೇಲರ ನಾಯಕರನ್ನು ಒಟ್ಟುಗೂಡಿಸಿ ಅವರಿಗೆ, ‘ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನನಗೆ ಕಾಣಿಸಿಕೊಂಡನು. ಅಬ್ರಹಾಮನ, ಇಸಾಕನ, ಯಾಕೋಬನ ದೇವರು ಹೇಳುವುದೇನೆಂದರೆ, ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದವುಗಳನ್ನು ನಾನು ಲಕ್ಷ್ಯವಿಟ್ಟು ನೋಡಿದ್ದೇನೆ.


“ಹಿರಿಯರು ನಿನಗೆ ಕಿವಿಗೊಡುವರು. ಆಗ ನೀನು ಮತ್ತು ಹಿರಿಯರು ಈಜಿಪ್ಟಿನ ರಾಜನ ಬಳಿಗೆ ಹೋಗಿ, ‘ಇಬ್ರಿಯರ ದೇವರಾದ ಯೆಹೋವನು ನಮಗೆ ಕಾಣಿಸಿಕೊಂಡನು. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಬೇಕು’ ಎಂದು ಹೇಳಿರಿ.


ನಿನ್ನ ಕೈಯಲ್ಲಿರುವ ಊರುಗೋಲನ್ನು ಕೆಂಪುಸಮುದ್ರದ ಮೇಲೆ ಚಾಚು. ಆಗ ಸಮುದ್ರವು ಇಬ್ಭಾಗವಾಗುವುದು. ಜನರು ಒಣನೆಲದ ಮೇಲೆ ಸಮುದ್ರವನ್ನು ದಾಟಬಹುದು.


ತೊರೆಗಳೂ ನದಿಗಳೂ ಹರಿಯುವಂತೆ ಮಾಡುವಾತನು ನೀನೇ. ನದಿಗಳನ್ನು ಒಣಗಿಸುವಾತನೂ ನೀನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು