ವಿಮೋಚನಕಾಂಡ 17:6 - ಪರಿಶುದ್ದ ಬೈಬಲ್6 ಹೋರೇಬಿನಲ್ಲಿ ನಾನು ನಿನ್ನ ಮುಂದೆ ಒಂದು ಬಂಡೆಯ ಮೇಲೆ ನಿಲ್ಲುವೆನು. ಊರುಗೋಲಿನಿಂದ ಆ ಬಂಡೆಯನ್ನು ಹೊಡೆ; ಆಗ ನೀರು ಅದರೊಳಗಿಂದ ಬರುವುದು. ಆಗ ಜನರು ಕುಡಿಯಬಹುದು” ಎಂದು ಹೇಳಿದನು. ಅಂತೆಯೇ ಮೋಶೆ ಮಾಡಿದನು. ಇಸ್ರೇಲರ ಹಿರಿಯರು ಇದನ್ನು ನೋಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನಗೆದುರಾಗಿ ನಿಂತುಕೊಳ್ಳುವೆನು. ನೀನು ಆ ಬಂಡೆಯನ್ನು ಹೊಡೆದಾಗ, ಜನರು ಕುಡಿಯುವಂತೆ ನೀರು ಹೊರಗೆ ಬರುವುದು” ಎಂದನು. ಮೋಶೆ ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅಲ್ಲೇ ಹೋರೇಬಿನಲ್ಲಿರುವ ಬಂಡೆಯೊಂದರ ಮೇಲೆ ನಾನೇ ನಿನ್ನ ಮುಂದೆ ನಿಲ್ಲುವೆನು. ಆ ಬಂಡೆಯನ್ನು ನೀನು ಹೊಡೆ. ಆಗ ಅದರಿಂದ ನೀರು ಹೊರಡುವುದು; ಜನರು ಕುಡಿಯಲಿ,” ಎಂದು ಅಪ್ಪಣೆಕೊಟ್ಟರು. ಹಾಗೆಯೇ ಮೋಶೆ ಇಸ್ರಯೇಲರ ಹಿರಿಯರ ಕಣ್ಣೆದುರಿನಲ್ಲೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನ್ನೆದುರಾಗಿ ನಿಲ್ಲುವೆನು. ನೀನು ಆ ಬಂಡೆಯನ್ನು ಹೊಡೆದಾಗ ಅದರಿಂದ ನೀರು ಹೊರಡುವದು, ಜನರು ಕುಡಿಯುವರು ಎಂದು ಮೋಶೆಗೆ ಅಪ್ಪಣೆ ಕೊಡಲಾಗಿ ಮೋಶೆ ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಲ್ಲಿ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು, ನೀನು ಬಂಡೆಯನ್ನು ಹೊಡೆಯಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವುದು,” ಎಂದರು. ಮೋಶೆಯು ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು. ಅಧ್ಯಾಯವನ್ನು ನೋಡಿ |