Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:1 - ಪರಿಶುದ್ದ ಬೈಬಲ್‌

1 ಮೋಶೆಯ ಮಾವನಾದ ಇತ್ರೋನನು ಮಿದ್ಯಾನಿನಲ್ಲಿ ಯಾಜಕನಾಗಿದ್ದನು. ಮೋಶೆಗೆ ಮತ್ತು ಇಸ್ರೇಲರಿಗೆ ದೇವರು ಅನೇಕ ರೀತಿಗಳಲ್ಲಿ ಸಹಾಯ ಮಾಡಿದ್ದರ ಬಗ್ಗೆ, ಯೆಹೋವನು ಇಸ್ರೇಲರನ್ನು ಈಜಿಪ್ಟಿನಿಂದ ಹೊರಗೆ ನಡಿಸಿದ್ದರ ಬಗ್ಗೆ ಇತ್ರೋನನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರು ಮೋಶೆಗೂ ತನ್ನ ಜನರಾದ ಇಸ್ರಾಯೇಲರಿಗೂ ಮಹೋಪಕಾರಗಳನ್ನು ಮಾಡಿದ್ದನ್ನೂ, ಯೆಹೋವನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಕರತಂದದ್ದನ್ನೂ, ಮಿದ್ಯಾನ್ಯರ ಆಚಾರ್ಯನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇತ್ರೋ, ಮೋಶೆಯ ಮಾವ ಹಾಗೂ ಮಿದ್ಯಾನರ ಪೂಜಾರಿ. ದೇವರು ಮೋಶೆಗೂ ತಮ್ಮ ಜನರಾದ ಇಸ್ರಯೇಲರಿಗೂ ಮಾಡಿದ ಮಹಾತ್ಕಾರ್ಯಗಳನ್ನು ಕುರಿತು ಇವನು ಕೇಳಿದ್ದನು. ಸರ್ವೇಶ್ವರ ಸ್ವಾಮಿ ಹೇಗೆ ಇಸ್ರಯೇಲರನ್ನು ಈಜಿಪ್ಟಿನಿಂದ ಕರೆದುತಂದರೆಂಬ ವಿಷಯ ಇವನಿಗೆ ಮುಟ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರು ಮೋಶೆಗೂ ತನ್ನ ಜನರಾದ ಇಸ್ರಾಯೇಲ್ಯರಿಗೂ ಮಹೋಪಕಾರಗಳನ್ನು ಮಾಡಿದ್ದನ್ನೂ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ ಕರತಂದದ್ದನ್ನೂ ವಿುದ್ಯಾನ್ಯರ ಆಚಾರ್ಯನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರು ಮೋಶೆಗೂ, ತಮ್ಮ ಜನರಾದ ಇಸ್ರಾಯೇಲರಿಗೂ ಮಾಡಿದವುಗಳೆಲ್ಲವನ್ನೂ ಯೆಹೋವ ದೇವರು ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದದ್ದನ್ನೂ, ಮಿದ್ಯಾನಿನ ಯಾಜಕನೂ, ಮೋಶೆಯ ಮಾವನೂ ಆಗಿದ್ದ ಇತ್ರೋವನಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:1
33 ತಿಳಿವುಗಳ ಹೋಲಿಕೆ  

ಮೋಶೆಯ ಮಾವನ ಹೆಸರು ಇತ್ರೋನನು. ಇತ್ರೋನನು ಮಿದ್ಯಾನಿನ ಯಾಜಕನಾಗಿದ್ದನು. ಮೋಶೆಯು ಇತ್ರೋನನ ಕುರಿಗಳಿಗೆ ಕುರುಬನಾಗಿದ್ದನು. ಒಂದು ದಿನ, ಮೋಶೆಯು ಕುರಿಗಳನ್ನು ಮರುಭೂಮಿಯ ಪಶ್ಚಿಮಭಾಗಕ್ಕೆ ನಡೆಸಿಕೊಂಡು ದೇವರ ಬೆಟ್ಟವೆಂದು ಕರೆಯಲ್ಪಡುವ ಸೀನಾಯಿ ಎಂಬ ಹೋರೇಬ್ ಬೆಟ್ಟಕ್ಕೆ ಹೋದನು.


ಮೋಶೆಯು ಮಿದ್ಯಾನ್ಯರ ಒಂದು ಬಾವಿಯ ಬಳಿ ಕುಳಿತುಕೊಂಡಿದ್ದನು. ಮಿದ್ಯಾನ್ಯರ ಒಬ್ಬ ಪುರೋಹಿತನಿಗೆ ಏಳು ಮಂದಿ ಹೆಣ್ಣುಮಕ್ಕಳಿದ್ದರು. ಆ ಹುಡುಗಿಯರು ಬಂದು ತಮ್ಮ ತಂದೆಯ ಕುರಿಗಳಿಗೆ ನೀರನ್ನು ಕುಡಿಸಲು ಬಾವಿಯಿಂದ ನೀರು ಸೇದಿ ತೊಟ್ಟಿಗಳಲ್ಲಿ ಹಾಕುತ್ತಿದ್ದರು.


ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಸಮಯದಲ್ಲಿ ಬೇರೆಬೇರೆ ಭಾಷೆಗಳನ್ನು ಮಾತಾಡುವ ಅನೇಕ ವಿದೇಶಿಯರು ಯೆಹೂದ್ಯನೊಬ್ಬನ ಬಳಿಗೆ ಬಂದು, ಅವನ ಬಟ್ಟೆಯ ಅಂಚನ್ನು ಹಿಡಿದು, ‘ದೇವರು ನಿಮ್ಮೊಂದಿಗಿದ್ದಾನೆಂದು ನಾವು ಕೇಳಿದ್ದೇವೆ. ನಿಮ್ಮೊಂದಿಗೆ ನಾವೂ ಬಂದು ಆತನನ್ನು ಆರಾಧಿಸಬಹುದೋ?’” ಎಂದು ಕೇಳುವರು.


ಯೆಹೋವನ ಮಹತ್ವವನ್ನು ಸಂಪೂರ್ಣವಾಗಿ ವರ್ಣಿಸಲು ಯಾರಿಗೂ ಆಗದು; ಆತನನ್ನು ಸಂಪೂರ್ಣವಾಗಿ ಸ್ತುತಿಸುವುದಕ್ಕೂ ಯಾರಿಗೂ ಸಾಧ್ಯವಿಲ್ಲ.


ಆತನು ತನ್ನ ಜನರನ್ನು ಈಜಿಪ್ಟಿನಿಂದ ಹೊರತಂದನು. ಜನರು ಉಲ್ಲಾಸಪಡುತ್ತಾ ಹರ್ಷಗೀತೆಗಳನ್ನು ಹಾಡುತ್ತಾ ಹೊರಬಂದರು!


ನಾವು ಅವುಗಳನ್ನು ಮರೆಯುವುದೇ ಇಲ್ಲ. ನಮ್ಮ ಜನರು ಕೊನೆಯ ತಲೆಮಾರಿನವರೆಗೂ ಅವುಗಳನ್ನು ಹೇಳುತ್ತಲೇ ಇರುವರು. ನಾವೆಲ್ಲರೂ ಯೆಹೋವನ ಪರಾಕ್ರಮವನ್ನೂ ಅದ್ಭುತಕಾರ್ಯಗಳನ್ನೂ ಹೇಳುತ್ತಾ ಕೊಂಡಾಡುವೆವು.


ದೇವರೇ, ಪೂರ್ವಕಾಲದಲ್ಲಿ ನೀನು ಮಾಡಿದ ಮಹತ್ಕಾರ್ಯಗಳ ಕುರಿತು ಕೇಳಿದ್ದೇವೆ. ಅವುಗಳ ಕುರಿತು ನಮ್ಮ ಪೂರ್ವಿಕರೇ ನಮಗೆ ತಿಳಿಸಿದರು.


ದೀನರೇ, ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದನ್ನು ಕೇಳಿ ಸಂತೋಷಪಡಿರಿ.


ಅದಕ್ಕೆ ಅವರು, “ನಿನ್ನ ಸೇವಕರಾದ ನಾವು ಬಹುದೂರ ದೇಶದಿಂದ ಬಂದಿದ್ದೇವೆ. ನಾವು ಬಂದದ್ದಕ್ಕೆ ಕಾರಣವೇನೆಂದರೆ ನಾವು ನಿಮ್ಮ ದೇವರಾದ ಯೆಹೋವನ ಅದ್ಭುತಶಕ್ತಿಯ ಬಗ್ಗೆ ಕೇಳಿದೆವು. ಆತನು ಮಾಡಿದ ಅದ್ಭುತಕಾರ್ಯಗಳ ಬಗ್ಗೆ ಕೇಳಿದೆವು. ಆತನು ಈಜಿಪ್ಟಿನಲ್ಲಿ ಮಾಡಿದ ಪ್ರತಿಯೊಂದು ಅದ್ಭುತದ ಬಗ್ಗೆ ಕೇಳಿದೆವು.


ಯೆಹೋವನು ನಿಮಗೆ ಸಹಾಯ ಮಾಡಿದ ರೀತಿಯ ಬಗ್ಗೆ ನಾವು ಕೇಳಿ ಭಯಗೊಂಡಿದ್ದೇವೆ. ನೀವು ಈಜಿಪ್ಟಿನಿಂದ ಹೊರಬಂದ ಮೇಲೆ ಆತನು ಕೆಂಪುಸಮುದ್ರದ ನೀರನ್ನು ಬತ್ತಿಸಿದ್ದನ್ನು ನಾವು ಕೇಳಿದ್ದೇವೆ. ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿದ್ದ ಸೀಹೋನ್ ಮತ್ತು ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನೀವು ಹೇಗೆ ನಾಶಮಾಡಿದಿರೆಂಬುದನ್ನೂ ಕೇಳಿದ್ದೇವೆ.


ನಾನು ನನ್ನ ಸ್ವಕಾರ್ಯಗಳ ಬಗ್ಗೆಯೂ ಮಾತಾಡುವುದಿಲ್ಲ. ಯೆಹೂದ್ಯರಲ್ಲದ ಜನರನ್ನು ತನಗೆ ವಿಧೇಯರನ್ನಾಗಿ ಮಾಡಿಕೊಳ್ಳಲು ಕ್ರಿಸ್ತನು ನನ್ನ ಮೂಲಕ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ ಮಾಡಿದ ಕಾರ್ಯಗಳನ್ನು ಹೇಳಿಕೊಳ್ಳುತ್ತೇನೆ.


ಆಗ ಇಡೀ ಸಭೆಯು ಮೌನವಾಯಿತು. ಅವರು ಪೌಲ ಬಾರ್ನಬರಿಗೆ ಕಿವಿಗೊಟ್ಟರು. ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ದೇವರು ತಮ್ಮ ಮೂಲಕವಾಗಿ ಮಾಡಿದ ಎಲ್ಲಾ ಅದ್ಭುತಕಾರ್ಯಗಳ ಮತ್ತು ಸೂಚಕಕಾರ್ಯಗಳ ಬಗ್ಗೆ ಪೌಲ ಬಾರ್ನಬರು ಹೇಳಿದರು.


ಆಗ ಜೆರುಸಲೇಮ್ ಒಂದು ಅದ್ಭುತವಾದ ಸ್ಥಳವಾಗುವುದು; ಜನರು ಸಂತೋಷದಿಂದಿರುವರು. ಅಲ್ಲಿ ನಡೆದ ಒಳ್ಳೆಯ ಸಂಗತಿಗಳ ಬಗ್ಗೆ ಕೇಳಿದಾಗ ಬೇರೆ ಜನಾಂಗಗಳ ಜನರು ಅದನ್ನು ಹೊಗಳುವರು; ವಿಸ್ಮಯಪಡುವರು. ನಾನು ಜೆರುಸಲೇಮಿಗೆ ಮಾಡುತ್ತಿರುವ ಒಳಿತಿನ ವಿಷಯವು ಅವರ ಕಿವಿಗೆ ಬೀಳುವುದು.’


ಆತನ ಅದ್ಭುತಕಾರ್ಯಗಳನ್ನು ಜ್ಞಾಪಿಸಿಕೊಳ್ಳಿರಿ. ಆತನ ಮಹತ್ಕಾರ್ಯಗಳನ್ನೂ ವಿವೇಕದ ನಿರ್ಧಾರಗಳನ್ನೂ ಜ್ಞಾಪಿಸಿಕೊಳ್ಳಿರಿ.


ಹೆಬೆರನೆಂಬ ಒಬ್ಬ ಮನುಷ್ಯನಿದ್ದನು. ಅವನು ಕೇನ್ಯರ ಕುಲದವನಾಗಿದ್ದನು. ಅವನು ಉಳಿದ ಕೇನ್ಯರನ್ನು ಬಿಟ್ಟು ಚಾನನ್ನೀಮ್ ಎಂಬ ಊರಲ್ಲಿ ಓಕ್ ವೃಕ್ಷದ ಬಳಿ ಮನೆ ಮಾಡಿಕೊಂಡಿದ್ದನು. (ಕೇನ್ಯರು ಹೋಬಾಬನ ಸಂತತಿಯವರಾಗಿದ್ದರು. ಹೋಬಾಬನು ಮೋಶೆಯ ಮಾವನಾಗಿದ್ದನು.) ಚಾನನ್ನೀಮ್ ಕೆದೆಷ್ ನಗರದ ಸಮೀಪದಲ್ಲಿತ್ತು.


ಹೋಬಾಬನು ಮಿದ್ಯಾನ್ಯನಾದ ರೆಗೂವೇಲನ ಮಗನು. ರೆಗೂವೇಲನು ಮೋಶೆಯ ಮಾವ. ಮೋಶೆಯು ಹೋಬಾಬನಿಗೆ, “ದೇವರು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣ ಮಾಡುತ್ತಿದ್ದೇವೆ. ನಮ್ಮೊಂದಿಗೆ ಬಾ. ನೀನು ನಮ್ಮೊಂದಿಗೆ ಉದ್ದಾರವಾಗುವೆ; ಯಾಕೆಂದರೆ ಯೆಹೋವನು ಇಸ್ರೇಲರಿಗೆ ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾನೆ.”


ಬಳಿಕ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂತಿರುಗಿದನು. ಮೋಶೆ ಇತ್ರೋನನಿಗೆ, “ಈಜಿಪ್ಟಿನಲ್ಲಿರುವ ನನ್ನ ಜನರ ಬಳಿಗೆ ಹೋಗಿ ಅವರು ಇನ್ನೂ ಜೀವಂತವಾಗಿದ್ದಾರೋ ಏನೋ ನೋಡುವೆನು” ಎಂದು ಹೇಳಿದನು. ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗಿ ಬಾ” ಎಂದು ಹೇಳಿದನು.


ಮೋಶೆಯು ರೆಗೂವೇಲನೊಂದಿಗೆ ವಾಸಮಾಡಲು ಇಷ್ಟಪಟ್ಟನು; ರೆಗೂವೇಲನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆ ಮಾಡಿಸಿದನು.


ಬಳಿಕ ಅವರು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಮರಳಿಹೋದರು. ಅವರ ತಂದೆ, “ಈ ದಿನ ನೀವು ಬಹುಬೇಗನೆ ಮನೆಗೆ ಬಂದಿದ್ದೀರಲ್ಲಾ!” ಎಂದು ಕೇಳಿದನು.


ಆದ್ದರಿಂದ ನನ್ನ ಈ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು.


ಕೇನ್ಯರು (ಕೇನ್ಯರು ಮೋಶೆಯ ಮಾವನ ಗೋತ್ರದವರಾಗಿದ್ದರು.) ಖರ್ಜೂರ ನಗರವನ್ನು (ಜೆರಿಕೊವನ್ನು) ಬಿಟ್ಟು ಯೆಹೂದ್ಯರ ಸಂಗಡ ಹೋದರು. ಅವರು ನೆಗೆವಿನಲ್ಲಿ ಅರಾದ್ ನಗರದ ಹತ್ತಿರವಿದ್ದ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು