Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:12 - ಪರಿಶುದ್ದ ಬೈಬಲ್‌

12 ಇತ್ರೋನನು ದೇವರಿಗೆ ಯಜ್ಞಗಳನ್ನು, ಕಾಣಿಕೆಗಳನ್ನು ಸಮರ್ಪಿಸಿದನು. ಆಗ ಆರೋನನು ಮತ್ತು ಇಸ್ರೇಲರ ಎಲ್ಲಾ ಹಿರಿಯರು ಮೋಶೆಯ ಮಾವನಾದ ಇತ್ರೋನನೊಡನೆ ದೇವರ ಸನ್ನಿಧಿಯಲ್ಲಿ ಊಟಮಾಡಲು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಲ್ಲದೆ ಮೋಶೆಯ ಮಾವನಾದ ಇತ್ರೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದನು. ಆರೋನನು, ಇಸ್ರಾಯೇಲರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವುದಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದೂ ಅಲ್ಲದೆ ಮೋಶೆಯ ಮಾವ ಇತ್ರೋ ದೇವರಿಗೆ ದಹನ ಬಲಿಯನ್ನು ಹಾಗು ಇತರ ಬಲಿಗಳನ್ನು ಸಮರ್ಪಿಸಿದನು. ಆರೋನನು ಹಾಗು ಇಸ್ರಯೇಲರ ಹಿರಿಯರೆಲ್ಲರು ಬಂದು ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದಲ್ಲದೆ ಮೋಶೆಯ ಮಾವನಾದ ಇತ್ರೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಲಾಗಿ ಆರೋನನೂ ಇಸ್ರಾಯೇಲ್ಯರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವದಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮೋಶೆಯ ಮಾವ ಇತ್ರೋವನು ದಹನಬಲಿಯನ್ನೂ, ಯಜ್ಞಗಳನ್ನೂ ದೇವರಿಗಾಗಿ ತೆಗೆದುಕೊಂಡು ಬಂದನು. ಆರೋನನೂ, ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನವನ್ನು ಮಾಡುವುದಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:12
31 ತಿಳಿವುಗಳ ಹೋಲಿಕೆ  

ನೀವೂ ಮತ್ತು ನಿಮ್ಮ ಕುಟುಂಬಗಳವರೂ ಅಲ್ಲಿ ಒಟ್ಟಿಗೆ ಊಟ ಮಾಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿರುವನು. ನೀವು ದುಡಿದು ಸಂಪಾದಿಸಿದ ಎಲ್ಲಾ ವಸ್ತುಗಳನ್ನು ಇತರರೊಂದಿಗೆ ಹಂಚಿಕೊಂಡು ಆ ಸ್ಥಳದಲ್ಲಿ ಆನಂದಿಸುವಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ಆ ಎಲ್ಲಾ ಒಳ್ಳೆಯವುಗಳನ್ನು ನಿಮಗೆ ಕೊಟ್ಟನೆಂದು ನೀವು ಜ್ಞಾಪಿಸಿಕೊಳ್ಳುವಿರಿ.


ಆಮೇಲೆ ಯಾಕೋಬನು ಒಂದು ಪಶುವನ್ನು ಕೊಂದು ಅದನ್ನು ಬೆಟ್ಟದ ಮೇಲೆ ಯಜ್ಞವಾಗಿ ಅರ್ಪಿಸಿದನು; ತನ್ನ ಜನರನ್ನು ಊಟಕ್ಕೆ ಆಹ್ವಾನಿಸಿದನು. ಅವರು ಊಟ ಮಾಡಿದ ಮೇಲೆ, ಆ ರಾತ್ರಿ ಬೆಟ್ಟದ ಮೇಲೆ ಇದ್ದರು.


ಇಸ್ರೇಲರ ನಾಯಕರೆಲ್ಲರೂ ಯೆಹೋವನನ್ನು ನೋಡಿದರು, ಆದರೆ ದೇವರು ಅವರನ್ನು ನಾಶಮಾಡಲಿಲ್ಲ. ಅವರೆಲ್ಲರೂ ದೇವದರ್ಶನ ಮಾಡಿ ಅನ್ನಪಾನಗಳನ್ನು ತೆಗೆದುಕೊಂಡರು.


ಬಳಿಕ ಮೋಶೆಯು ಯಜ್ಞಗಳನ್ನು ಸಮರ್ಪಿಸುವುದಕ್ಕೆ ಇಸ್ರೇಲರ ಯೌವನಸ್ಥರನ್ನು ಕಳುಹಿಸಿದನು. ಅವರು ಯೆಹೋವನಿಗೆ ಎತ್ತುಗಳನ್ನು ಸರ್ವಾಂಗಹೋಮಗಳಾಗಿಯೂ ಸಮಾಧಾನಯಜ್ಞಗಳಾಗಿಯೂ ಅರ್ಪಿಸಿದರು.


ಆದ್ದರಿಂದ ನೀವು ತಿಂದರೂ ಕುಡಿದರೂ ಏನೇ ಮಾಡಿದರೂ ದೇವರ ಮಹಿಮೆಗಾಗಿ ಅದನ್ನು ಮಾಡಿರಿ.


ನೀವು ಪ್ರಭುವಿನ ಪಾತ್ರೆ ಮತ್ತು ದೆವ್ವಗಳ ಪಾತ್ರೆ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಕುಡಿಯಲಾಗದು. ಪ್ರಭುವಿನ ಪಂಕ್ತಿ ಮತ್ತು ದೆವ್ವಗಳ ಪಂಕ್ತಿ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಊಟ ಮಾಡಲಾರಿರಿ.


ಇಸ್ರೇಲ್ ಜನರ ಬಗ್ಗೆ ಯೋಚಿಸಿ. ಯಜ್ಞವಾಗಿ ಅರ್ಪಿತವಾದುದನ್ನು ತಿನ್ನುವ ಆ ಜನರು ಯಜ್ಞವೇದಿಕೆಯಲ್ಲಿ ಪಾಲುಗಾರರಾಗಿಲ್ಲವೇ?


ಯೇಸುವಿನೊಡನೆ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಈ ವಿಷಯಗಳನ್ನು ಕೇಳಿ ಯೇಸುವಿಗೆ, “ದೇವರ ರಾಜ್ಯದಲ್ಲಿ ಊಟಮಾಡುವವರೇ ಧನ್ಯರು!” ಎಂದನು.


ಒಂದು ಸಬ್ಬತ್ ದಿನದಲ್ಲಿ ಯೇಸು ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದನು. ಅಲ್ಲಿದ್ದ ಜನರೆಲ್ಲರೂ ಯೇಸುವನ್ನೇ ದೃಷ್ಟಿಸಿ ನೋಡುತ್ತಿದ್ದರು.


ಆ ಮೂರು ವಾರಗಳಲ್ಲಿ ನಾನು ಇಷ್ಟಪಡುತ್ತಿದ್ದ ಆಹಾರವನ್ನು ತಿನ್ನಲಿಲ್ಲ; ಮಾಂಸಾಹಾರವನ್ನು ಸೇವಿಸಲಿಲ್ಲ; ದ್ರಾಕ್ಷಾರಸವನ್ನು ಕುಡಿಯಲಿಲ್ಲ; ತಲೆಗೆ ಎಣ್ಣೆಯನ್ನು ಹಾಕಿಕೊಳ್ಳಲಿಲ್ಲ. ಮೂರು ವಾರಗಳವರೆಗೆ ಇದೆಲ್ಲವನ್ನು ನಾನು ನಿಲ್ಲಿಸಿಬಿಟ್ಟೆ.


ಯೋಬನ ಸಹೋದರಸಹೋದರಿಯರೂ ಅವನ ಪರಿಚಯಸ್ಥರೂ ಅವನ ಮನೆಗೆ ಬಂದರು; ಅವನೊಂದಿಗೆ ಊಟ ಮಾಡಿದರು; ಯೆಹೋವನು ಅವನಿಗೆ ಬಹಳ ಕಷ್ಟವನ್ನು ಬರಮಾಡಿದ್ದರಿಂದ ಅವರು ಮರುಕದಿಂದ ಅವನನ್ನು ಸಂತೈಸಿದರು. ಪ್ರತಿಯೊಬ್ಬರು ಯೋಬನಿಗೆ ಒಂದು ಬೆಳ್ಳಿಯ ನಾಣ್ಯವನ್ನೂ ಒಂದು ಚಿನ್ನದ ಉಂಗುರವನ್ನೂ ಕೊಟ್ಟರು.


ಆದ್ದರಿಂದ, ಈಗ ನೀವು (ಮೂವರು) ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಹೋಗಿ ಅವುಗಳನ್ನು ನಿಮಗೋಸ್ಕರ ದೋಷಪರಿಹಾರಕಯಜ್ಞ ಮಾಡಿರಿ. ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥಿಸುವನು. ಆಗ ನಾನು ಅವನ ಪ್ರಾರ್ಥನೆಗೆ ಖಂಡಿತವಾಗಿ ಉತ್ತರಿಸುವೆನು; ನಿಮ್ಮ ಮೂರ್ಖತನಕ್ಕೆ ಬರಬೇಕಾಗಿದ್ದ ದಂಡನೆಯನ್ನು ಮನ್ನಿಸುವೆನು. ನೀವು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ; ಆದರೆ ನನ್ನ ಸೇವಕನಾದ ಯೋಬನು ಹೇಳಿದವುಗಳು ಸತ್ಯವಾಗಿವೆ.” ಎಂದನು.


ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.


ದೇವರ ಸೇವೆ ಮಾಡುವದನ್ನು ತಿಳಿದಿದ್ದ ಲೇವಿಯರನ್ನು ಹಿಜ್ಕೀಯನು ಪ್ರೋತ್ಸಾಹಿಸಿದನು. ಜನರು ಏಳು ದಿವಸ ಹಬ್ಬವನ್ನು ಆಚರಿಸಿ ಸಮಾಧಾನಯಜ್ಞವನ್ನು ಸಮರ್ಪಿಸಿದರು; ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿದರು.


ದಾವೀದನು ಮೆಫೀಬೋಶೆತನಿಗೆ, “ಹೆದರಬೇಡ, ನಾನು ನಿನಗೆ ದಯತೋರಿಸುವೆ. ನಿನ್ನ ತಂದೆಯಾದ ಯೋನಾತಾನನ ಸಲುವಾಗಿ ನಾನು ಇದನ್ನು ಮಾಡುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಾನು ಹಿಂದಕ್ಕೆ ಕೊಡುತ್ತೇನೆ. ನೀನು ಯಾವಾಗಲೂ ನನ್ನ ಪಂಕ್ತಿಯಲ್ಲಿ ಊಟಮಾಡಬೇಕು” ಎಂದು ಹೇಳಿದನು.


ನೀವು ಅಲ್ಲಿ ಯಜ್ಞವನ್ನರ್ಪಿಸಿ ಸಮಾಧಾನಯಜ್ಞದ ಭೋಜನವನ್ನು ಮಾಡಬೇಕು. ಅಲ್ಲಿ ದೇವರ ಸನ್ನಿಧಾನದಲ್ಲಿ ಊಟ ಮಾಡಿ ಸಂತೋಷಪಡಿರಿ.


ಅದಕ್ಕೆ ರೆಗೂವೇಲನು ತನ್ನ ಹೆಣ್ಣುಮಕ್ಕಳಿಗೆ, “ಆ ಮನುಷ್ಯನು ಎಲ್ಲಿದ್ದಾನೆ? ಅವನನ್ನು ನೀವು ಯಾಕೆ ಬಿಟ್ಟುಬಂದಿರಿ? ಅವನನ್ನು ಕರೆಯಿರಿ; ಅವನು ನಮ್ಮೊಂದಿಗೆ ಊಟಮಾಡಲಿ” ಎಂದು ಹೇಳಿದನು.


ತಾವು ಯೋಸೇಫನೊಂದಿಗೆ ಊಟ ಮಾಡುವುದಾಗಿ ಸಹೋದರರಿಗೆ ತಿಳಿಯಿತು. ಆದ್ದರಿಂದ ಅವರು ಅವನಿಗೆ ಕೊಡಲು ತಮ್ಮ ಉಡುಗೊರೆಗಳನ್ನು ಮಧ್ಯಾಹ್ನದವರೆಗೆ ಸಿದ್ಧಪಡಿಸಿದರು.


ಆದ್ದರಿಂದ ಆ ಸ್ಥಳದಲ್ಲಿ ಇಸಾಕನು ಯಜ್ಞವೇದಿಕೆಯನ್ನು ಕಟ್ಟಿ ಯೆಹೋವನನ್ನು ಆರಾಧಿಸಿದನು. ಇಸಾಕನು ಆ ಸ್ಥಳದಲ್ಲಿ ಪಾಳೆಯಮಾಡಿಕೊಂಡನು; ಅವನ ಸೇವಕರು ಅಲ್ಲಿ ಒಂದು ಬಾವಿಯನ್ನು ತೋಡಿದರು.


ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.


ಆಮೇಲೆ ನೋಹನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿ ಶುದ್ಧವಾದ ಕೆಲವು ಪಶುಪಕ್ಷಿಗಳನ್ನು ತೆಗೆದುಕೊಂಡು ಅವುಗಳನ್ನು ದೇವರಿಗೆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮ ಮಾಡಿದನು.


ಹೇಬೆಲನು ತನ್ನ ಕುರಿಮಂದೆಯಿಂದ ಒಳ್ಳೆಯ ಚೊಚ್ಚಲ ಕುರಿಗಳನ್ನು ಮತ್ತು ಅವುಗಳ ಒಳ್ಳೆಯ ಕೊಬ್ಬಿದ ಭಾಗಗಳನ್ನು ತಂದನು. ಯೆಹೋವನು ಹೇಬೆಲನ ಕಾಣಿಕೆಯನ್ನು ಸ್ವೀಕರಿಸಿದನು;


ಮೋಶೆಯು ಮಿದ್ಯಾನ್ಯರ ಒಂದು ಬಾವಿಯ ಬಳಿ ಕುಳಿತುಕೊಂಡಿದ್ದನು. ಮಿದ್ಯಾನ್ಯರ ಒಬ್ಬ ಪುರೋಹಿತನಿಗೆ ಏಳು ಮಂದಿ ಹೆಣ್ಣುಮಕ್ಕಳಿದ್ದರು. ಆ ಹುಡುಗಿಯರು ಬಂದು ತಮ್ಮ ತಂದೆಯ ಕುರಿಗಳಿಗೆ ನೀರನ್ನು ಕುಡಿಸಲು ಬಾವಿಯಿಂದ ನೀರು ಸೇದಿ ತೊಟ್ಟಿಗಳಲ್ಲಿ ಹಾಕುತ್ತಿದ್ದರು.


ಮೋಶೆಯ ಮಾವನ ಹೆಸರು ಇತ್ರೋನನು. ಇತ್ರೋನನು ಮಿದ್ಯಾನಿನ ಯಾಜಕನಾಗಿದ್ದನು. ಮೋಶೆಯು ಇತ್ರೋನನ ಕುರಿಗಳಿಗೆ ಕುರುಬನಾಗಿದ್ದನು. ಒಂದು ದಿನ, ಮೋಶೆಯು ಕುರಿಗಳನ್ನು ಮರುಭೂಮಿಯ ಪಶ್ಚಿಮಭಾಗಕ್ಕೆ ನಡೆಸಿಕೊಂಡು ದೇವರ ಬೆಟ್ಟವೆಂದು ಕರೆಯಲ್ಪಡುವ ಸೀನಾಯಿ ಎಂಬ ಹೋರೇಬ್ ಬೆಟ್ಟಕ್ಕೆ ಹೋದನು.


ಮರುದಿನ ಮೋಶೆಯು ಜನರಿಗೆ ನ್ಯಾಯನಿರ್ಣಯ ಮಾಡಲು ತನ್ನ ಆಸನದ ಮೇಲೆ ಕುಳಿತುಕೊಂಡನು. ಅಲ್ಲಿ ಬಹಳ ಜನರಿದ್ದರು, ಆದ್ದರಿಂದ ಅವರು ಮುಂಜಾನೆಯಿಂದ ಸಾಯಂಕಾಲದವರೆಗೆ ಅವನ ಸುತ್ತಲೂ ನಿಂತುಕೊಂಡಿದ್ದರು.


“ಒಂದು ವಿಶೇಷ ಯಜ್ಞವೇದಿಕೆಯನ್ನು ನನಗೋಸ್ಕರ ಮಣ್ಣಿನಿಂದ ಕಟ್ಟಿರಿ. ಈ ಯಜ್ಞವೇದಿಕೆಯ ಮೇಲೆ ಕುರಿದನಗಳನ್ನು ನನಗೆ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಸಮರ್ಪಿಸಿರಿ. ನಾನು ನಿಮಗೆ ಹೇಳುವ ಪ್ರತಿಯೊಂದು ಸ್ಥಳದಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಳ್ಳಲು ಹೀಗೆಯೇ ಮಾಡಿರಿ. ಆಗ ನಾನು ಬಂದು ನಿಮ್ಮನ್ನು ಆಶೀರ್ವದಿಸುವೆನು.


ಮೋಶೆಯು ಗುಡಾರವನ್ನು ಪಾಳೆಯದ ಹೊರಗೆ ಸ್ವಲ್ಪದೂರ ತೆಗೆದುಕೊಂಡು ಹೋಗುತ್ತಿದ್ದನು. ಮೋಶೆಯು ಅದನ್ನು, “ದೇವದರ್ಶನದ ಗುಡಾರ” ಎಂದು ಕರೆದನು. ಯೆಹೋವನಿಂದ ಉತ್ತರವನ್ನು ಕೇಳಬೇಕೆಂದು ಬಯಸುವ ವ್ಯಕ್ತಿಯು ಪಾಳೆಯದ ಹೊರಗಿದ್ದ ದೇವದರ್ಶನ ಗುಡಾರಕ್ಕೆ ಹೋಗುತ್ತಿದ್ದನು.


ಹೋಬಾಬನು ಮಿದ್ಯಾನ್ಯನಾದ ರೆಗೂವೇಲನ ಮಗನು. ರೆಗೂವೇಲನು ಮೋಶೆಯ ಮಾವ. ಮೋಶೆಯು ಹೋಬಾಬನಿಗೆ, “ದೇವರು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣ ಮಾಡುತ್ತಿದ್ದೇವೆ. ನಮ್ಮೊಂದಿಗೆ ಬಾ. ನೀನು ನಮ್ಮೊಂದಿಗೆ ಉದ್ದಾರವಾಗುವೆ; ಯಾಕೆಂದರೆ ಯೆಹೋವನು ಇಸ್ರೇಲರಿಗೆ ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾನೆ.”


ಆದ್ದರಿಂದ ಇಸಾಕನು ಅವರಿಗಾಗಿ ಒಂದು ಔತಣವನ್ನು ಮಾಡಿಸಿದನು. ಅವರೆಲ್ಲರೂ ಸಮೃದ್ಧಿಯಾಗಿ ಊಟಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು