ವಿಮೋಚನಕಾಂಡ 18:23 - ಪರಿಶುದ್ದ ಬೈಬಲ್23 ನೀನು ಈ ಸಂಗತಿಗಳನ್ನು ಮಾಡಿದರೆ, ಯೆಹೋವನ ಚಿತ್ತವಿದ್ದರೆ, ನೀನು ನಿನ್ನ ಕೆಲಸವನ್ನು ಮಾಡುತ್ತಾ ಮುಂದುವರಿಯಲು ಶಕ್ತನಾಗುವೆ ಮತ್ತು ಅದೇ ಸಮಯದಲ್ಲಿ ಜನರೆಲ್ಲರೂ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಂಡು ಮನೆಗೆ ಹೋಗಬಹುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ದೇವರು ನಿನಗೆ ಹೀಗೆ ಮಾಡುವುದಕ್ಕೆ ಅಪ್ಪಣೆಕೊಡುವುದಾದರೆ, ನೀನು ಈ ಕೆಲಸದ ಹೊರೆಯನ್ನು ನಿರ್ವಹಿಸಲು ಸಾಧ್ಯವಾಗುವುದು. ಇದು ಮಾತ್ರವಲ್ಲದೆ ಈ ಜನರೆಲ್ಲರೂ ಸಂತುಷ್ಟರಾಗಿ ತಮ್ಮ ತಮ್ಮ ಮನೆಗಳಿಗೆ ಹೋಗುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಹೀಗೆ ಮಾಡಲು ದೇವರು ನಿನಗೆ ಅಪ್ಪಣೆ ಕೊಡಲಿ; ಮಾಡಿದರೆ ಈ ಹೊಣೆಯನ್ನು ನಿರ್ವಹಿಸಲು ಶಕ್ತನಾಗುವೆ; ಈ ಜನರೂ ಕೂಡ ಸಂತುಷ್ಟರಾಗಿ ತಮ್ಮ ತಮ್ಮ ಮನೆಗಳಿಗೆ ಹಿಂದಿರುಗುವರು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ದೇವರು ಹೀಗೆ ಮಾಡುವದಕ್ಕೆ ನಿನಗೆ ಅಪ್ಪಣೆ ಕೊಡುವದಾದರೆ ನೀನು ಈ ಕೆಲಸದ ಭಾರವನ್ನು ನಿರ್ವಹಿಸಲಾಗುವದು; ಇದು ಮಾತ್ರವಲ್ಲದೆ ಈ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಸಂತೋಷವಾಗಿ ಹೋಗುವರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಈ ಕಾರ್ಯವನ್ನು ಮಾಡುವುದಕ್ಕೆ ದೇವರು ನಿನಗೆ ಅಪ್ಪಣೆ ಕೊಟ್ಟರೆ, ಆಗ ನೀನು ಇದನ್ನು ನಿರ್ವಹಿಸಲು ಶಕ್ತನಾಗುವೆ. ಈ ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು,” ಎಂದನು. ಅಧ್ಯಾಯವನ್ನು ನೋಡಿ |
ಆದರೆ ಅವರು, “ಬೇಡ, ನೀನು ನಮ್ಮ ಜೊತೆ ಬರುವುದು ಬೇಡ. ಏಕೆಂದರೆ ನಾವು ಯುದ್ಧರಂಗದಿಂದ ಓಡಿಹೋಗಿಬಿಟ್ಟರೆ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ನಮ್ಮಲ್ಲಿ ಅರ್ಧದಷ್ಟು ಜನರು ಸತ್ತರೂ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ಆದರೆ ನೀನು ನಮ್ಮ ಹತ್ತು ಸಾವಿರ ಜನರಷ್ಟು ಬೆಲೆಯುಳ್ಳವನಾಗಿರುವೆ! ನೀನು ನಗರದಲ್ಲಿರುವುದೇ ಉತ್ತಮ. ಅಲ್ಲಿಂದಲೇ ನೀನು ನಮಗೆ ಸಹಾಯ ಮಾಡಬಹುದು” ಎಂದು ಹೇಳಿದರು.