ವಿಮೋಚನಕಾಂಡ 18:8 - ಪರಿಶುದ್ದ ಬೈಬಲ್8 ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ಸಂಗತಿಯನ್ನು ಮೋಶೆ ಇತ್ರೋನನಿಗೆ ಹೇಳಿದನು. ಯೆಹೋವನು ಫರೋಹನಿಗೆ ಮತ್ತು ಈಜಿಪ್ಟಿನವರಿಗೆ ಮಾಡಿದ ಸಂಗತಿಗಳ ಬಗ್ಗೆ ಮೋಶೆಯು ಹೇಳಿದನು. ದಾರಿಯ ಉದ್ದಕ್ಕೂ ತಮಗೆ ಬಂದೊದಗಿದ ಎಲ್ಲಾ ಸಮಸ್ಯೆಗಳ ಬಗ್ಗೆ ಮತ್ತು ತೊಂದರೆ ಬಂದೊದಗಿದ ಪ್ರತಿ ಸಾರಿಯೂ ಯೆಹೋವನು ಇಸ್ರೇಲರನ್ನು ಹೇಗೆ ರಕ್ಷಿಸಿದನೆಂಬುದನ್ನು ಮೋಶೆಯು ತನ್ನ ಮಾವನಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆ ನಂತರ ಮೋಶೆಯು ಯೆಹೋವನು ಇಸ್ರಾಯೇಲರ ಪರವಾಗಿ ಫರೋಹನಿಗೂ, ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ, ದಾರಿಯಲ್ಲಿ ತಮಗುಂಟಾದ ಎಲ್ಲಾ ಕಷ್ಟಗಳನ್ನೂ, ಯೆಹೋವನು ಆ ಕಷ್ಟಗಳಿಂದ ತಪ್ಪಿಸಿದ್ದನ್ನೂ ತನ್ನ ಮಾವನಿಗೆ ವಿವರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸರ್ವೇಶ್ವರ ಸ್ವಾಮಿ ಇಸ್ರಯೇಲರ ಪರವಾಗಿ ಫರೋಹನಿಗೂ ಈಜಿಪ್ಟಿನವರಿಗೂ ಮಾಡಿದ್ದೆಲ್ಲವನ್ನೂ ಮತ್ತು ದಾರಿಯಲ್ಲಿ ತಮಗುಂಟಾದ ಎಲ್ಲ ಕಷ್ಟದುಃಖಗಳನ್ನು ಹಾಗು ಸರ್ವೇಶ್ವರ ಹೇಗೆ ಅವುಗಳಿಂದ ಕಾಪಾಡಿದರೆಂಬುದನ್ನು ಮೋಶೆ ತನ್ನ ಮಾವನಿಗೆ ವಿವರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ತರುವಾಯ ಮೋಶೆಯು - ಯೆಹೋವನು ಇಸ್ರಾಯೇಲ್ಯರಿಗೋಸ್ಕರ ಫರೋಹನಿಗೂ ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ ದಾರಿಯಲ್ಲಿ ತಮಗುಂಟಾದ ಎಲ್ಲಾ ಕಷ್ಟಗಳನ್ನೂ ಯೆಹೋವನು ಆ ಕಷ್ಟಗಳಿಂದ ತಪ್ಪಿಸಿದ್ದನ್ನೂ ಮಾವನಿಗೆ ವಿವರಿಸಲಾಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇಸ್ರಾಯೇಲರಿಗೋಸ್ಕರ ಯೆಹೋವ ದೇವರು ಫರೋಹನಿಗೂ ಈಜಿಪ್ಟಿನವರಿಗೂ ಮಾಡಿದ್ದೆಲ್ಲವನ್ನೂ, ಅವರಿಗೆ ಒದಗಿದ ಎಲ್ಲಾ ಸಂಕಟವನ್ನೂ ಯೆಹೋವ ದೇವರು ತಮ್ಮನ್ನು ಹೇಗೆ ತಪ್ಪಿಸಿದನೆಂಬುದನ್ನೂ ಮೋಶೆಯು ತನ್ನ ಮಾವನಿಗೆ ತಿಳಿಯಪಡಿಸಿದನು. ಅಧ್ಯಾಯವನ್ನು ನೋಡಿ |
ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.