Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:11 - ಪರಿಶುದ್ದ ಬೈಬಲ್‌

11 ಮೂರನೆಯ ದಿನದಲ್ಲಿ ನನಗಾಗಿ ಸಿದ್ಧರಾಗಬೇಕು. ಮೂರನೆಯ ದಿನದಲ್ಲಿ ನಾನು ಸೀನಾಯ್ ಬೆಟ್ಟದ ಮೇಲೆ ಇಳಿದುಬರುವೆನು; ಜನರೆಲ್ಲರೂ ನನ್ನನ್ನು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮೂರನೆಯ ದಿನದಲ್ಲಿ ಅವರು ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮೂರನೆಯ ದಿನ ಸಿದ್ಧರಾಗಿರಲಿ. ಏಕೆಂದರೆ ಆ ಮೂರನೆಯ ದಿನ ಸರ್ವೇಶ್ವರನಾದ ನಾನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಲು ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಂಡು ಮೂರನೆಯ ದಿನದಲ್ಲಿ ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲಕ್ಕೆ ಇಳಿದುಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮೂರನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ. ಏಕೆಂದರೆ ಮೂರನೆಯ ದಿನದಲ್ಲಿ ಯೆಹೋವ ದೇವರು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:11
20 ತಿಳಿವುಗಳ ಹೋಲಿಕೆ  

ಮೂರನೆಯ ದಿನದ ಮುಂಜಾನೆಯಲ್ಲಿ ಆ ಬೆಟ್ಟದ ಮೇಲೆ ಗುಡುಗು ಮಿಂಚುಗಳು ಉಂಟಾದವು. ಒಂದು ಕಾರ್ಮುಗಿಲು ಬೆಟ್ಟದ ಮೇಲೆ ಇಳಿದುಬಂತು; ತುತ್ತೂರಿಯ ಮಹಾ ಧ್ವನಿಯು ಕೇಳಿಸಿತು. ಪಾಳೆಯದಲ್ಲಿದ್ದ ಜನರೆಲ್ಲರೂ ಭಯಭೀತರಾದರು.


ಮೋಶೆಯು ಹೇಳಿದ್ದೇನೆಂದರೆ: “ಸೇಯೀರ್‌ನಲ್ಲಿ ಮುಂಜಾನೆಯ ಬೆಳಕು ಪ್ರಕಾಶಿಸುವಂತೆ ಪಾರಾನ್ ಬೆಟ್ಟಗಳ ಮೇಲಿನಿಂದ ಬೆಳಕು ಪ್ರಕಾಶಿಸುವಂತೆ ಯೆಹೋವನು ಸೀನಾಯಿ ಬೆಟ್ಟದಿಂದ ಬಂದನು. ಆತನು ಹತ್ತು ಸಾವಿರ ಪರಿಶುದ್ಧರೊಂದಿಗೆ ಬಂದನು. ಆತನ ಬಲಶಾಲಿಗಳಾದ ಸೈನಿಕರು ಆತನೊಂದಿಗಿದ್ದರು.


ಮೋಶೆಯು ಬೆಟ್ಟವನ್ನೇರಿ ಹೋದನಂತರ ಯೆಹೋವನು ಮೇಘದಲ್ಲಿ ಅವನ ಬಳಿಗೆ ಇಳಿದುಬಂದನು. ಯೆಹೋವನು ಮೋಶೆಯೊಡನೆ ಅಲ್ಲಿ ನಿಂತನು ಮತ್ತು ಮೋಶೆಯು ಯೆಹೋವನ ಹೆಸರನ್ನು ಕರೆದನು.


ನಾನು ಪರಲೋಕದಿಂದ ಇಳಿದು ಬಂದದ್ದು ದೇವರ ಚಿತ್ತಕ್ಕನುಸಾರವಾಗಿ ಮಾಡುವುದಕ್ಕಾಗಿಯೇ ಹೊರತು ನನ್ನ ಚಿತ್ತಕ್ಕನುಸಾರವಾಗಿಯಲ್ಲ.


ಪರಲೋಕದಿಂದ ಇಳಿದುಬಂದ ಮನುಷ್ಯಕುಮಾರನೊಬ್ಬನೇ ಪರಲೋಕಕ್ಕೆ ಏರಿಹೋದ ಏಕೈಕ ವ್ಯಕ್ತಿಯಾಗಿದ್ದಾನೆ.


ಯೆಹೋವನೇ, ಆಕಾಶವನ್ನು ಹರಿದು ಇಳಿದು ಬಾ. ಪರ್ವತಗಳನ್ನು ಮುಟ್ಟು. ಆಗ ಅವುಗಳಿಂದ ಹೊಗೆಯು ಮೇಲೇರುವುದು.


ಆತನು ಆಕಾಶವನ್ನು ಹರಿದು ಕೆಳಗಿಳಿದು ಬಂದನು. ಆತನು ದಟ್ಟವಾದ ಕಪ್ಪುಮೋಡದ ಮೇಲೆ ನಿಂತುಕೊಂಡನು.


ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿದ ಆತ್ಮವನ್ನೇ ಅವರ ಮೇಲೆ ಸುರಿಸುವೆನು. ಆಗ ಸ್ವತಃ ನೀನೇ ಈ ಜನರ ಭಾರವನ್ನು ವಹಿಸಬೇಕಾಗಿರುವುದಿಲ್ಲ. ಈ ಎಪ್ಪತ್ತು ಮಂದಿ ಹಿರಿಯರು ಆ ಭಾರವನ್ನು ಹೊರಲು ನಿನಗೆ ಸಹಾಯ ಮಾಡುವರು.


ಯೆಹೋವನು ಸೀನಾಯಿ ಬೆಟ್ಟಕ್ಕೆ ಇಳಿದುಬಂದನು. ಬಳಿಕ ಯೆಹೋವನು ಮೋಶೆಯನ್ನು ಕರೆದು ಬೆಟ್ಟದ ತುದಿಗೆ ಬರಲು ಹೇಳಿದನು. ಆದ್ದರಿಂದ ಮೋಶೆ ಮೇಲಕ್ಕೆ ಹೋದನು.


ಸೀನಾಯಿ ಬೆಟ್ಟವು ಹೊಗೆಯಿಂದ ಕವಿದುಕೊಂಡಿತು. ಕುಲುಮೆಯಿಂದ ಬರುವ ಹೊಗೆಯಂತೆ, ಬೆಟ್ಟದಿಂದ ಹೊಗೆಯು ಮೇಲಕ್ಕೇರಿತು. ಯೆಹೋವನು ಬೆಂಕಿಯಲ್ಲಿ ಬೆಟ್ಟದ ಮೇಲೆ ಇಳಿದು ಬಂದದ್ದರಿಂದ ಇದು ಸಂಭವಿಸಿತು. ಇಡೀ ಬೆಟ್ಟ ನಡುಗಲಾರಂಭಿಸಿತು.


ಈಗ ನಾನು ಇಳಿದುಹೋಗಿ ಈಜಿಪ್ಟಿನವರಿಂದ ನನ್ನ ಜನರನ್ನು ರಕ್ಷಿಸುವೆನು. ನಾನು ಅವರನ್ನು ಆ ದೇಶದಿಂದ ಬಿಡುಗಡೆ ಮಾಡಿ ಒಳ್ಳೆಯದಾದ ಮತ್ತು ವಿಶಾಲವಾದ ದೇಶಕ್ಕೆ ಅವರನ್ನು ನಡೆಸುವೆನು. ಅದು ಸಮೃದ್ಧಿಕರವಾದ ದೇಶ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ದೇಶ ಅದಾಗಿದೆ.


ಯೆಹೋವನು ಪಟ್ಟಣವನ್ನೂ ಗೋಪುರವನ್ನೂ ನೋಡಲು ಇಳಿದುಬಂದನು. ಜನರು ಅವುಗಳನ್ನು ಕಟ್ಟುತ್ತಿರುವುದನ್ನು ಕಂಡು


ನಾಳೆ ಮುಂಜಾನೆ ಸೀನಾಯಿ ಬೆಟ್ಟಕ್ಕೇರಿ ಬಾ. ಬೆಟ್ಟದ ಮೇಲೆ ನನ್ನೆದುರಿನಲ್ಲಿ ನಿಂತುಕೊ.


“ನಿಮ್ಮನ್ನು ನೀವು ಶುದ್ಧೀಕರಿಸಿಕೊಳ್ಳಿರಿ. ನಾಳೆ ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುತ್ತಾನೆ” ಎಂದು ಯೆಹೋಶುವನು ಜನರಿಗೆ ತಿಳಿಸಿದನು.


ಆಮೇಲೆ ಸೀನಾಯ ಬೆಟ್ಟಕ್ಕೆ ಇಳಿದುಬಂದೆ. ಪರಲೋಕದಿಂದ ಅವರೊಂದಿಗೆ ಮಾತನಾಡಿದೆ. ಅವರಿಗೆ ಒಳ್ಳೆಯ ಕಟ್ಟಳೆಗಳನ್ನು ದಯಪಾಲಿಸಿದೆ; ಸತ್ಯಬೋಧನೆಯನ್ನು ನೀಡಿದೆ, ವಿಧಿನಿಯಮಗಳನ್ನು ಕಲಿಸಿದೆ. ಅವುಗಳೆಲ್ಲಾ ಉತ್ತಮವಾದವುಗಳೇ.


ಸೀನಾಯಿ ಬೆಟ್ಟದ ಮೇಲೆ ಯೆಹೋವನ ಮಹಿಮೆಯು ಇಳಿದು ಬಂದಿತು. ಮೋಡವು ಆರುದಿನಗಳವರೆಗೆ ಬೆಟ್ಟವನ್ನು ಕವಿದುಕೊಂಡಿತ್ತು. ಏಳನೆಯ ದಿನದಲ್ಲಿ, ಮೋಡದೊಳಗಿಂದ ಯೆಹೋವನು ಮೋಶೆಯೊಡನೆ ಮಾತಾಡಿದನು.


ಇಸ್ರೇಲರಿಗೆ ಯೆಹೋವನ ಮಹಿಮೆಯು ಬೆಟ್ಟದ ತುದಿಯಲ್ಲಿ ಉರಿಯುವ ಬೆಂಕಿಯಂತೆ ಕಾಣುತ್ತಿತ್ತು.


ಸೀನಾಯಿ ಬೆಟ್ಟದ ಬಳಿಯಲ್ಲಿ ನೀನು ಯೆಹೋವನ ಸನ್ನಿಧಾನದಲ್ಲಿ ನಿಂತಿದ್ದನ್ನು ನೀವು ಜ್ಞಾಪಕ ಮಾಡಿಕೊಳ್ಳಿರಿ. ಆತನು ನನಗೆ ಹೇಳಿದ್ದೇನೆಂದರೆ: ‘ನಾನು ಹೇಳುವ ಮಾತುಗಳನ್ನು ಕೇಳುವಂತೆ ಜನರನ್ನೆಲ್ಲಾ ಒಟ್ಟುಗೂಡಿಸು. ನನ್ನ ಮಾತುಗಳನ್ನು ಕೇಳಿ ಅವರು ಜೀವಮಾನವೆಲ್ಲಾ ನನ್ನನ್ನು ಸನ್ಮಾನಿಸಲು ಮತ್ತು ಭಯಭಕ್ತಿಯಿಂದಿರಲು ಕಲಿತುಕೊಳ್ಳುವರು ಮತ್ತು ಅವರ ಮಕ್ಕಳಿಗೂ ಕಲಿಸುವರು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು