ವಿಮೋಚನಕಾಂಡ 19:16 - ಪರಿಶುದ್ದ ಬೈಬಲ್16 ಮೂರನೆಯ ದಿನದ ಮುಂಜಾನೆಯಲ್ಲಿ ಆ ಬೆಟ್ಟದ ಮೇಲೆ ಗುಡುಗು ಮಿಂಚುಗಳು ಉಂಟಾದವು. ಒಂದು ಕಾರ್ಮುಗಿಲು ಬೆಟ್ಟದ ಮೇಲೆ ಇಳಿದುಬಂತು; ತುತ್ತೂರಿಯ ಮಹಾ ಧ್ವನಿಯು ಕೇಳಿಸಿತು. ಪಾಳೆಯದಲ್ಲಿದ್ದ ಜನರೆಲ್ಲರೂ ಭಯಭೀತರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಮೂರನೆಯ ದಿನ ಸೂರ್ಯೋದಯ ಆಗುವಾಗ ಆ ಬೆಟ್ಟದ ಮೇಲೆ ಗುಡುಗು, ಮಿಂಚು, ಕಾರ್ಮುಗಿಲು ಹಾಗು ತುತೂರಿಯ ಮಹಾಧ್ವನಿ ಉಂಟಾಯಿತು. ಪಾಳೆಯದಲ್ಲಿದ್ದ ಜನರೆಲ್ಲರು ನಡುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮೂರನೆಯ ದಿನದಲ್ಲಿ ಸೂರ್ಯೋದಯವಾಗುವಾಗ ಆ ಬೆಟ್ಟದ ಮೇಲೆ ಗುಡುಗೂ ವಿುಂಚೂ ಕಾರ್ಮುಗಿಲೂ ತುತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಮೂರನೆಯ ದಿನದಲ್ಲಿ ಉದಯವಾದಾಗ, ಬೆಟ್ಟದ ಮೇಲೆ ಗುಡುಗು, ಮಿಂಚು, ದಟ್ಟವಾದ ಮೇಘ ಮತ್ತು ತುತೂರಿಯ ಮಹಾ ಧ್ವನಿ ಉಂಟಾದವು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿದರು. ಅಧ್ಯಾಯವನ್ನು ನೋಡಿ |
ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.