Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:17 - ಪರಿಶುದ್ದ ಬೈಬಲ್‌

17 ಆಗ ಮೋಶೆ ದೇವರನ್ನು ಸಂಧಿಸುವುದಕ್ಕಾಗಿ ಜನರನ್ನು ಪಾಳೆಯದಿಂದ ಹೊರಗೆ ನಡಿಸಿ, ಬೆಟ್ಟದ ಬಳಿಗೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೇವದರ್ಶನಕ್ಕಾಗಿ ಮೋಶೆ ಜನರನ್ನು ಪಾಳೆಯದ ಹೊರಕ್ಕೆ ಕರೆದುಕೊಂಡು ಬರಲು, ಅವರು ಬೆಟ್ಟದ ಕೆಳಗೆ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದೇವದರ್ಶನಕ್ಕಾಗಿ ಮೋಶೆ ಜನರನ್ನು ಪಾಳೆಯದ ಹೊರಕ್ಕೆ ಬರಮಾಡಿದನು. ಅವರು ಬಂದು ಬೆಟ್ಟದ ಬುಡದಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದೇವದರ್ಶನಕ್ಕಾಗಿ ಮೋಶೆ ಜನರನ್ನು ಪಾಳೆಯದ ಹೊರಕ್ಕೆ ಬರಮಾಡಲು ಅವರು ಬೆಟ್ಟದ ಬುಡದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಮೋಶೆಯು ದೇವರನ್ನು ಸಂಧಿಸುವುದಕ್ಕೆ ಜನರನ್ನು ಪಾಳೆಯದೊಳಗಿಂದ ಹೊರಗೆ ಬರಮಾಡಿದನು. ಆಗ ಅವರು ಬೆಟ್ಟದ ಕೆಳಗೆ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:17
8 ತಿಳಿವುಗಳ ಹೋಲಿಕೆ  

ಸೀನಾಯಿ ಬೆಟ್ಟದ ಬಳಿಯಲ್ಲಿ ನೀನು ಯೆಹೋವನ ಸನ್ನಿಧಾನದಲ್ಲಿ ನಿಂತಿದ್ದನ್ನು ನೀವು ಜ್ಞಾಪಕ ಮಾಡಿಕೊಳ್ಳಿರಿ. ಆತನು ನನಗೆ ಹೇಳಿದ್ದೇನೆಂದರೆ: ‘ನಾನು ಹೇಳುವ ಮಾತುಗಳನ್ನು ಕೇಳುವಂತೆ ಜನರನ್ನೆಲ್ಲಾ ಒಟ್ಟುಗೂಡಿಸು. ನನ್ನ ಮಾತುಗಳನ್ನು ಕೇಳಿ ಅವರು ಜೀವಮಾನವೆಲ್ಲಾ ನನ್ನನ್ನು ಸನ್ಮಾನಿಸಲು ಮತ್ತು ಭಯಭಕ್ತಿಯಿಂದಿರಲು ಕಲಿತುಕೊಳ್ಳುವರು ಮತ್ತು ಅವರ ಮಕ್ಕಳಿಗೂ ಕಲಿಸುವರು.’


ಆದರೆ ನೀವು ಬೆಂಕಿಗೆ ಭಯಪಟ್ಟಿದ್ದರಿಂದ ಬೆಟ್ಟವನ್ನು ಏರಲಿಲ್ಲ. ಆಗ ನಾನು ನಿಮಗೂ ಯೆಹೋವನಿಗೂ ಮಧ್ಯದಲ್ಲಿದ್ದುಕೊಂಡು ಯೆಹೋವನು ಹೇಳಿದ್ದನ್ನು ತಿಳಿಸಿದೆನು.


ಅರಣ್ಯದಲ್ಲಿ ಯೆಹೂದ್ಯರ ಸಮೂಹದೊಂದಿಗೆ ಇದ್ದವನು ಈ ಮೋಶೆಯೇ. ಸಿನಾಯ್ ಬೆಟ್ಟದ ಬಳಿ ತನ್ನೊಂದಿಗೆ ಮಾತಾಡಿದ ದೇವದೂತನೊಂದಿಗೆ ಅವನಿದ್ದನು. ಅಲ್ಲದೆ ಅವನು ನಮ್ಮ ಪಿತೃಗಳೊಂದಿಗೆ ಇದ್ದನು. ಜೀವಕರವಾದ ಆಜ್ಞೆಗಳನ್ನು ಮೋಶೆಯು ದೇವರಿಂದ ಸ್ವೀಕರಿಸಿಕೊಂಡು ಅವುಗಳನ್ನು ನಮಗೆ ಕೊಟ್ಟನು.


ಮೂರನೆಯ ದಿನದ ಮುಂಜಾನೆಯಲ್ಲಿ ಆ ಬೆಟ್ಟದ ಮೇಲೆ ಗುಡುಗು ಮಿಂಚುಗಳು ಉಂಟಾದವು. ಒಂದು ಕಾರ್ಮುಗಿಲು ಬೆಟ್ಟದ ಮೇಲೆ ಇಳಿದುಬಂತು; ತುತ್ತೂರಿಯ ಮಹಾ ಧ್ವನಿಯು ಕೇಳಿಸಿತು. ಪಾಳೆಯದಲ್ಲಿದ್ದ ಜನರೆಲ್ಲರೂ ಭಯಭೀತರಾದರು.


ಸೀನಾಯಿ ಬೆಟ್ಟವು ಹೊಗೆಯಿಂದ ಕವಿದುಕೊಂಡಿತು. ಕುಲುಮೆಯಿಂದ ಬರುವ ಹೊಗೆಯಂತೆ, ಬೆಟ್ಟದಿಂದ ಹೊಗೆಯು ಮೇಲಕ್ಕೇರಿತು. ಯೆಹೋವನು ಬೆಂಕಿಯಲ್ಲಿ ಬೆಟ್ಟದ ಮೇಲೆ ಇಳಿದು ಬಂದದ್ದರಿಂದ ಇದು ಸಂಭವಿಸಿತು. ಇಡೀ ಬೆಟ್ಟ ನಡುಗಲಾರಂಭಿಸಿತು.


ಆದ್ದರಿಂದ ಜನರೆಲ್ಲರೂ ದೇವದರ್ಶನಗುಡಾರಕ್ಕೆ ಬಂದರು. ಮೋಶೆ ಆಜ್ಞಾಪಿಸಿದ ವಸ್ತುಗಳನ್ನು ಅವರು ತಂದರು. ಎಲ್ಲಾ ಜನರು ಯೆಹೋವನ ಸನ್ನಿಧಿಯಲ್ಲಿ ನಿಂತರು.


ಆಗ ನೀವು ಬೆಟ್ಟದ ಸಮೀಪಕ್ಕೆ ಬಂದು ನಿಂತುಕೊಂಡಿರಿ. ಆ ಪರ್ವತವು ಬೆಂಕಿಯಿಂದ ಪ್ರಜ್ವಲಿಸಿ ಆಕಾಶದ ತನಕ ಮುಟ್ಟಿತ್ತು. ಆಗ ಕಾರ್ಮೋಡವೂ ಕತ್ತಲೆಯೂ ಆವರಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು