ವಿಮೋಚನಕಾಂಡ 19:20 - ಪರಿಶುದ್ದ ಬೈಬಲ್20 ಯೆಹೋವನು ಸೀನಾಯಿ ಬೆಟ್ಟಕ್ಕೆ ಇಳಿದುಬಂದನು. ಬಳಿಕ ಯೆಹೋವನು ಮೋಶೆಯನ್ನು ಕರೆದು ಬೆಟ್ಟದ ತುದಿಗೆ ಬರಲು ಹೇಳಿದನು. ಆದ್ದರಿಂದ ಮೋಶೆ ಮೇಲಕ್ಕೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೆಹೋವನು ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದನು. ಆತನು ಬೆಟ್ಟದ ತುದಿಗೆ ಬಾ ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸರ್ವೇಶ್ವರ ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದರು. ಅವರು, “ಬೆಟ್ಟದ ತುದಿಗೆ ಬಾ,” ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯೆಹೋವನು ಸೀನಾಯಿಬೆಟ್ಟದ ಶಿಖರಕ್ಕೆ ಇಳಿದು ಬಂದನು. ಆತನು - ಬೆಟ್ಟದ ತುದಿಗೆ ಬಾ ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯೆಹೋವ ದೇವರು ಸೀನಾಯಿ ಬೆಟ್ಟದ ತುದಿಯಲ್ಲಿ ಇಳಿದುಬಂದು ಮೋಶೆಯನ್ನು ಬೆಟ್ಟದ ತುದಿಗೆ ಕರೆದರು. ಮೋಶೆಯು ಮೇಲೆ ಹೋದನು. ಅಧ್ಯಾಯವನ್ನು ನೋಡಿ |
ಆಗ ಯೆಹೋವನು ಎಲೀಯನಿಗೆ, “ಹೋಗು, ನನ್ನ ಎದುರಿಗೆ ಬೆಟ್ಟದ ಮೇಲೆ ನಿಲ್ಲು. ನಾನು ನಿನ್ನ ಬಳಿಯಲ್ಲಿ ಹಾದು ಹೋಗುತ್ತೇನೆ” ಎಂದು ಹೇಳಿದನು. ಆಗ ಬಿರುಗಾಳಿಯು ಬೀಸಿತು. ಆ ಬಿರುಗಾಳಿಯು ಬೆಟ್ಟಗಳನ್ನು ಸೀಳಿಹಾಕಿತು; ಅದು ದೊಡ್ಡ ಬಂಡೆಗಳನ್ನು ಯೆಹೋವನ ಎದುರಿನಲ್ಲಿ ಒಡೆದುಹಾಕಿತು. ಆದರೆ ಆ ಗಾಳಿಯೇ ಯೆಹೋವನಲ್ಲ! ಆ ಬಿರುಗಾಳಿಯ ನಂತರ ಅಲ್ಲಿ ಒಂದು ಭೂಕಂಪವುಂಟಾಯಿತು. ಆದರೆ ಆ ಭೂಕಂಪವು ಯೆಹೋವನಲ್ಲ.