Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:21 - ಪರಿಶುದ್ದ ಬೈಬಲ್‌

21 ಯೆಹೋವನು ಮೋಶೆಗೆ, “ಕೆಳಗಿಳಿದು ಹೋಗಿ, ಜನರು ನನ್ನನ್ನು ನೋಡಲು ನನ್ನ ಹತ್ತಿರ ಬರಬಾರದೆಂದು ಅವರನ್ನು ಎಚ್ಚರಿಸು. ಇಲ್ಲವಾದರೆ ಅವರಲ್ಲಿ ಅನೇಕರು ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಯೆಹೋವನು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಗಡಿಯನ್ನು ದಾಟಿ ಯೆಹೋವನ ಹತ್ತಿರಕ್ಕೆ ಬಂದರೆ ಅವರಲ್ಲಿ ಬಹಳ ಜನರು ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ಸರ್ವೇಶ್ವರ ಮೋಶೆಗೆ, “ನೀನಿಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಸರ್ವೇಶ್ವರನಾದ ನನ್ನ ಹತ್ತಿರಕ್ಕೆ ಮೇರೆಯನ್ನು ದಾಟಿ ಬಂದಾರು; ಹಾಗೆ ಬಂದರೆ ಬಹುಜನ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಯೆಹೋವನು ಮೋಶೆಗೆ - ನೀನಿಳಿದು ಹೋಗಿ ಜನರನ್ನು ಎಚ್ಚರಿಸಬೇಕು; ಅವರು ನೋಡಬೇಕೆಂಬ ಆಶೆಯಿಂದ ಯೆಹೋವನ ಹತ್ತಿರಕ್ಕೆ ಮೇರೆಯನ್ನು ದಾಟಿ ಬಂದಾರು; ಹಾಗೆ ಬಂದರೆ ಬಹುಜನ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೆಹೋವ ದೇವರು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ಯೆಹೋವ ದೇವರನ್ನು ನೋಡುವದಕ್ಕಾಗಿ ಮುಂದೆ ಬಂದರೆ, ಅವರಲ್ಲಿ ಬಹಳ ಜನರು ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:21
12 ತಿಳಿವುಗಳ ಹೋಲಿಕೆ  

ಆದರೆ ಯಾಜಕರಿಲ್ಲದ ಕಾರಣ ಬೇತ್‌ಷೆಮೆಷಿನ ಜನರು ಪವಿತ್ರ ಪೆಟ್ಟಿಗೆಯನ್ನು ಹಣಿಕಿ ನೋಡಿದ್ದರಿಂದ ಬೇತ್‌ಷೆಮೆಷಿನ ಎಪ್ಪತ್ತು ಜನರನ್ನು ಯೆಹೋವನು ಕೊಂದನು. ಯೆಹೋವನು ಕ್ರೂರವಾಗಿ ಶಿಕ್ಷಿಸಿದ್ದರಿಂದ ಬೇತ್‌ಷೆಮೆಷಿನ ಜನರು ಗೋಳಾಡಿ,


ಆಗ ಯೆಹೋವನು, “ಇನ್ನೂ ಹತ್ತಿರ ಬರಬೇಡ. ನಿನ್ನ ಪಾದರಕ್ಷೆಗಳನ್ನು ತೆಗೆದುಹಾಕು. ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ.


ದೇವರನ್ನು ಆರಾಧಿಸಲು ಹೋಗುವಾಗ ಎಚ್ಚರಿಕೆಯಿಂದಿರಿ. ಮೂಢರಂತೆ ಯಜ್ಞಗಳನ್ನು ಅರ್ಪಿಸುವುದಕ್ಕಿಂತ ದೇವರಿಗೆ ಕಿವಿಗೊಡುವುದೇ ಉತ್ತಮ. ಮೂಢರು ದುಷ್ಕೃತ್ಯಗಳನ್ನು ಮಾಡುತ್ತಲೇ ಇರುವರು; ಆದರೆ ಅವರಿಗೆ ಅದು ಗೊತ್ತೇ ಇಲ್ಲ.


ನನ್ನನ್ನು ಯಾರೂ ಮುಖಾಮುಖಿಯಾಗಿ ಕಾಣಲು ಸಾಧ್ಯವಿಲ್ಲ. ನನ್ನನ್ನು ನೋಡಿದ ಯಾವನೂ ಬದುಕಲಾರನು.


ಪೊದೆಯು ಉರಿಯುತ್ತಿದ್ದರೂ ಸುಟ್ಟುಹೋಗದಿರುವುದಕ್ಕೆ ಕಾರಣವೇನೆಂದು ತಿಳಿದುಕೊಳ್ಳಲು ಮೋಶೆಯು ಪೊದೆಯ ಸಮೀಪಕ್ಕೆ ಹೋಗತೊಡಗಿದನು.


ಇಲ್ಲವಾದರೆ, ಕೆಹಾತ್ಯರು ಒಳಗೆ ಬಂದು ಪರಿಶುದ್ಧವಸ್ತುಗಳನ್ನು ಮುಟ್ಟುವರು. ಆ ಮಹಾ ಪರಿಶುದ್ಧವಸ್ತುಗಳನ್ನು ಅವರು ಒಂದು ಕ್ಷಣ ಮುಟ್ಟಿದರೂ ಸಾಯುತ್ತಾರೆ” ಎಂದು ಹೇಳಿದನು.


ಆದರೆ ನೀವು ಬೆಂಕಿಗೆ ಭಯಪಟ್ಟಿದ್ದರಿಂದ ಬೆಟ್ಟವನ್ನು ಏರಲಿಲ್ಲ. ಆಗ ನಾನು ನಿಮಗೂ ಯೆಹೋವನಿಗೂ ಮಧ್ಯದಲ್ಲಿದ್ದುಕೊಂಡು ಯೆಹೋವನು ಹೇಳಿದ್ದನ್ನು ತಿಳಿಸಿದೆನು.


“ಇಸ್ರೇಲರು ಪ್ರಯಾಣಮಾಡುವ ಸಮಯದಲ್ಲಿ ಆರೋನನು ಮತ್ತು ಅವನ ಪುತ್ರರು ಪವಿತ್ರವಸ್ತುಗಳಿಗೂ ಪವಿತ್ರ ಉಪಕರಣಗಳಿಗೂ ಹೊದಿಸಿದ ನಂತರ, ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಹೋಗಬಹುದು. ಈ ರೀತಿ ಅವರು ಪವಿತ್ರವಸ್ತುಗಳನ್ನು ಮುಟ್ಟಬಾರದು; ಅವರು ಮುಟ್ಟಿದರೆ ಸಾಯುತ್ತಾರೆ.


“ಕೆಹಾತ್ಯರು ಲೇವಿಯರ ಮಧ್ಯದಿಂದ ಇಲ್ಲವಾಗದಂತೆ ಎಚ್ಚರಿಕೆಯಾಗಿರಿ.


ಅವರು ಮಹಾಪರಿಶುದ್ಧ ವಸ್ತುಗಳ ಹತ್ತಿರ ಬಂದಾಗ ಸಾಯದಂತೆ ನೀವು ಅವರ ವಿಷಯದಲ್ಲಿ ಮಾಡಬೇಕಾದದ್ದೇನೆಂದರೆ, ಆರೋನನೂ ಅವನ ಪುತ್ರರೂ ಒಳಗೆ ಬಂದು, ಪ್ರತಿಯೊಬ್ಬ ಕೆಹಾತ್ಯನು ಮಾಡಬೇಕಾದ ಕೆಲಸವನ್ನು ಮತ್ತು ಹೊತ್ತುಕೊಂಡು ಹೋಗಬೇಕಾದದ್ದನ್ನು ತೋರಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು