23 ಮೋಶೆಯು ಯೆಹೋವನಿಗೆ, “ಜನರು ಬೆಟ್ಟವನ್ನೇರಿ ಬರಲಾರರು. ಬೆಟ್ಟದ ಸುತ್ತಲೂ ಮೇರೆಯನ್ನು ಹಾಕಿ ಅದನ್ನು ಪವಿತ್ರ ಸ್ಧಳವನ್ನಾಗಿ ಪ್ರತ್ಯೇಕಿಸಬೇಕೆಂದು ನೀನೇ ನಮಗೆ ಎಚ್ಚರಿಕೆ ನೀಡಿದೆಯಲ್ಲಾ!” ಎಂದು ಹೇಳಿದನು.
23 ಅದಕ್ಕೆ ಮೋಶೆ ಯೆಹೋವನಿಗೆ, “ಜನರು ಸೀನಾಯಿ ಬೆಟ್ಟವನ್ನೇರುವುದಕ್ಕೆ ಆಗುವುದಿಲ್ಲ. ಯಾಕೆಂದರೆ ‘ಬೆಟ್ಟದ ಸುತ್ತಲೂ ಗಡಿಯನ್ನು ಹಾಕಿ ನಿನಗಾಗಿ ಶುದ್ಧಮಾಡು’” ಎಂದು ಆಜ್ಞಾಪಿಸಿರುವೆಯಲ್ಲಾ ಎಂದನು.
ಆದರೆ ಬೆಟ್ಟದಿಂದ ದೂರವಿರಬೇಕೆಂದು ನೀನು ಜನರಿಗೆ ಹೇಳಬೇಕು. ಒಂದು ಗೆರೆಯನ್ನು ಹಾಕಿ ಆ ಗೆರೆಯನ್ನು ದಾಟಬಾರದೆಂದು ಅವರಿಗೆ ತಿಳಿಸು. ಯಾವ ವ್ಯಕ್ತಿಯಾಗಲಿ ಬೆಟ್ಟವನ್ನು ಮುಟ್ಟಿದರೆ ಅವನನ್ನು ಕಲ್ಲುಗಳಿಂದಾಗಲಿ ಬಾಣಗಳಿಂದಾಗಲಿ ಕೊಲ್ಲಬೇಕು. ಯಾವ ಪ್ರಾಣಿಯಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕೊಲ್ಲಬೇಕು. ಯಾರೂ ಬೆಟ್ಟವನ್ನು ಮುಟ್ಟಕೂಡದು. ಕೊಂಬಿನ ತುತ್ತೂರಿ ಊದಿದಾಗ ಜನರು ಬೆಟ್ಟದ ಸಮೀಪಕ್ಕೆ ಬರಬೇಕು ಎಂದು ಹೇಳು” ಎಂದನು.
ಯೆಹೋವನು ಅವನಿಗೆ, “ಜನರ ಬಳಿಗೆ ಇಳಿದುಹೋಗಿ ಆರೋನನನ್ನು ಕರೆದುಕೊಂಡು ಬಾ. ಆದರೆ ಯಾಜಕರಾಗಲಿ ಜನರಾಗಲಿ ಬರಕೂಡದು. ಅವರು ನನ್ನ ಸಮೀಪಕ್ಕೆ ಬಂದರೆ, ನಾನು ಅವರನ್ನು ದಂಡಿಸುವೆನು” ಎಂದು ಹೇಳಿದನು.