Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:8 - ಪರಿಶುದ್ದ ಬೈಬಲ್‌

8 ಜನರೆಲ್ಲರೂ ಒಟ್ಟಾಗಿ ಮಾತಾಡಿದರು. “ಯೆಹೋವನು ಹೇಳುವ ಪ್ರತಿಯೊಂದಕ್ಕೂ ನಾವು ವಿಧೇಯರಾಗುವೆವು” ಎಂದು ಅವರು ಅರಿಕೆಮಾಡಿದರು. ಬಳಿಕ ಮೋಶೆಯು ತಿರುಗಿ ಬೆಟ್ಟವನ್ನೇರಿ ಯೆಹೋವನ ಸನ್ನಿಧಿಗೆ ಹೋಗಿ ಜನರ ಪ್ರತಿಕ್ರಿಯೆಯನ್ನು ದೇವರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜನರೆಲ್ಲರೂ ಒಗ್ಗಟ್ಟಾಗಿ, “ಯೆಹೋವನು ಹೇಳಿದಂತೆಯೇ ಮಾಡುವೆವು” ಎಂದು ಉತ್ತರಕೊಟ್ಟರು. ಮೋಶೆ ಯೆಹೋವನ ಬಳಿಗೆ ಹಿಂತಿರುಗಿ ಹೋಗಿ ಅವರು ಹೇಳಿದ ಮಾತುಗಳನ್ನು ಆತನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಜನರೆಲ್ಲರು, “ಸರ್ವೇಶ್ವರ ಸ್ವಾಮಿ ಹೇಳಿದಂತೆಯೇ ನಾವು ಮಾಡುತ್ತೇವೆ,” ಎಂದು ಒಕ್ಕೊರಲಿನಿಂದ ಉತ್ತರಕೊಟ್ಟರು. ಮೋಶೆ ಸರ್ವೇಶ್ವರನ ಬಳಿಗೆ ಹೋಗಿ ಜನರ ಆ ಉತ್ತರವನ್ನು ಅರಿಕೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಜನರೆಲ್ಲರೂ - ಯೆಹೋವನು ಹೇಳಿದಂತೆಯೇ ಮಾಡುವೆವು ಎಂದು ಒಗ್ಗಟ್ಟಾಗಿ ಪ್ರತ್ಯುತ್ತರ ಕೊಡಲಾಗಿ ಮೋಶೆ ಯೆಹೋವನ ಬಳಿಗೆ ಹೋಗಿ ಅವರ ಮಾತುಗಳನ್ನು ಆತನಿಗೆ ಅರಿಕೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಜನರೆಲ್ಲಾ ಒಂದಾಗಿ ಉತ್ತರಕೊಟ್ಟು, “ಯೆಹೋವ ದೇವರು ಹೇಳಿದ್ದನ್ನೆಲ್ಲಾ ಮಾಡುತ್ತೇವೆ,” ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಯೆಹೋವ ದೇವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:8
9 ತಿಳಿವುಗಳ ಹೋಲಿಕೆ  

ವಿಶೇಷ ಒಡಂಬಡಿಕೆಯಿಂದ ಬರೆಯಲ್ಪಟ್ಟಿದ್ದ ಸುರುಳಿಯನ್ನು ಮೋಶೆಯು ಎಲ್ಲಾ ಜನರಿಗೆ ಕೇಳುವಂತೆ ಓದಿದನು. ಆಗ ಜನರು, “ಯೆಹೋವನ ಆಜ್ಞೆಗಳನ್ನೆಲ್ಲ ಅನುಸರಿಸಿ ಆತನಿಗೆ ವಿಧೇಯರಾಗಿರುತ್ತೇವೆ” ಅಂದರು.


ಮೋಶೆಯು ಯೆಹೋವನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ಜನರಿಗೆ ತಿಳಿಸಿದನು. ಆಗ ಜನರೆಲ್ಲರೂ, “ಯೆಹೋವನ ಆಜ್ಞೆಗಳಿಗೆಲ್ಲಾ ನಾವು ವಿಧೇಯರಾಗುವೆವು” ಎಂದು ಒಂದೇ ಸ್ವರದಿಂದ ಹೇಳಿದರು.


ಆಗ ಜನರು ಯೆಹೋಶುವನಿಗೆ, “ನಾವು ನಮ್ಮ ದೇವರಾದ ಯೆಹೋವನ ಸೇವೆಯನ್ನೇ ಮಾಡುವೆವು. ನಾವು ಆತನ ಆಜ್ಞೆಯನ್ನು ಪಾಲಿಸುವೆವು” ಎಂದರು.


ಆಗ ಜನರು ಮೋಶೆಗೆ, “ನೀನು ನಮ್ಮೊಡನೆ ಮಾತಾಡು; ನಾವು ನಿನಗೆ ಕಿವಿಗೊಡುವೆವು. ಆದರೆ ಯೆಹೋವನು ನಮ್ಮೊಡನೆ ಮಾತಾಡದಿರಲಿ. ಇಲ್ಲವಾದರೆ ನಾವು ಸಾಯುವೆವು” ಅಂದರು.


ಯೆಹೋವನು ಮೋಶೆಯನ್ನು ಕಳುಹಿಸಿದ್ದಾನೆಂದು ಜನರು ನಂಬಿದರು. ಯೆಹೋವನು ಇಸ್ರೇಲರಿಗೆ ಸಹಾಯಮಾಡಬೇಕೆಂದಿರುವುದನ್ನು ಅವರು ತಿಳಿದು ತಲೆಬಾಗಿ ಆತನನ್ನು ಆರಾಧಿಸಿದರು. ಯೆಹೋವನು ತಮ್ಮ ಸಂಕಟಗಳನ್ನು ನೋಡಿದ್ದರಿಂದ ಅವರು ಆತನನ್ನು ಆರಾಧಿಸಿದರು.


ಆದರೆ ಜನರು, “ಇಲ್ಲ! ನಾವು ಯೆಹೋವನ ಸೇವೆ ಮಾಡುತ್ತೇವೆ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು