ವಿಮೋಚನಕಾಂಡ 2:10 - ಪರಿಶುದ್ದ ಬೈಬಲ್10 ಮಗುವು ಬೆಳೆಯಿತು. ಸ್ವಲ್ಪಕಾಲದ ನಂತರ ಆ ಸ್ತ್ರೀಯು ಬಾಲಕನನ್ನು ರಾಜನ ಮಗಳ ಬಳಿಗೆ ಕರೆದುಕೊಂಡು ಬಂದಳು. ರಾಜನ ಮಗಳು ಆ ಬಾಲಕನನ್ನು ತನ್ನ ಸ್ವಂತ ಮಗನೆಂದು ಸ್ವೀಕರಿಸಿದಳು. ಆ ಬಾಲಕನನ್ನು ನೀರಿನೊಳಗಿಂದ ಎಳೆದೆನೆಂದು ಆ ಬಾಲಕನಿಗೆ “ಮೋಶೆ” ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆ ಹುಡುಗನು ಬೆಳೆದಾಗ, ಅವನನ್ನು ಫರೋಹನ ಮಗಳ ಬಳಿಗೆ ತೆಗೆದುಕೊಂಡು ಬಂದಳು, ಅವನು ಆಕೆಗೆ ಮಗನಾದನು. “ಇವನನ್ನು ನೀರಿನೊಳಗಿನಿಂದ ಎಳೆದುಕೊಂಡಿದ್ದೇನೆ,” ಎಂದು ಹೇಳಿ ಆಕೆಯು ಅವನಿಗೆ “ಮೋಶೆ” ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆ ಹುಡುಗನು ಬೆಳೆದಾಗ ಅವನನ್ನು ಫರೋಹನ ಪುತ್ರಿಯ ಬಳಿಗೆ ಕರೆದುಕೊಂಡು ಬಂದಳು. ಅವನು ಆಕೆಗೆ ಮಗನಾದನು. “ನೀರಿನಿಂದ ನಾನು ಇವನನ್ನು ಎತ್ತಿದೆ” ಎಂದು ಹೇಳಿ ಆಕೆ ಅವನಿಗೆ “ಮೋಶೆ" ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆ ಹುಡುಗನು ಬೆಳೆದಾಗ ಅವನನ್ನು ಫರೋಹನ ಕುಮಾರ್ತೆಯ ಬಳಿಗೆ ತೆಗೆದುಕೊಂಡು ಬಂದಳು; ಅವನು ಆಕೆಗೆ ಮಗನಾದನು. ಇವನನ್ನು ನೀರಿನೊಳಗಿಂದ ಎಳೆದಿದ್ದೇನೆಂದು ಹೇಳಿ ಆಕೆ ಅವನಿಗೆ ಮೋಶೆ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆ ಮಗುವು ಬೆಳೆದಾಗ, ಅವನನ್ನು ಫರೋಹನ ಮಗಳ ಬಳಿಗೆ ತೆಗೆದುಕೊಂಡು ಹೋದಳು. ಅವನು ಆಕೆಗೆ ಮಗನಾದನು. ಆಕೆಯು, “ನೀರಿನೊಳಗಿಂದ ಇವನನ್ನು ಎಳೆದೆ,” ಎಂದು ಹೇಳಿ ಅವನಿಗೆ “ಮೋಶೆ” ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿ |