ವಿಮೋಚನಕಾಂಡ 2:13 - ಪರಿಶುದ್ದ ಬೈಬಲ್13 ಮರುದಿನ, ಇಬ್ಬರು ಇಬ್ರಿಯರು ಜಗಳವಾಡುತ್ತಿರುವುದನ್ನು ಕಂಡ ಮೋಶೆಯು ಅವರಲ್ಲಿ ತಪ್ಪು ಮಾಡಿದವನಿಗೆ, “ನಿನ್ನ ನೆರೆಯವನಿಗೆ ಯಾಕೆ ಹೊಡೆಯುತ್ತಿರುವೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮರುದಿನ ಅವನು ಮತ್ತೆ ಹೊರಗೆ ಹೋದಾಗ, ಇಬ್ರಿಯರಾದ ಇಬ್ಬರು ಜಗಳವಾಡುತ್ತಿದ್ದರು. ಅನ್ಯಾಯಮಾಡುತ್ತಿದ್ದವನಿಗೆ ಅವನು, “ಏನಯ್ಯಾ, ನೀನು ಯಾಕೆ ಸ್ವಕುಲದವರನ್ನು ಹೊಡೆಯುತ್ತೀ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಮಾರನೆಯ ದಿನ ಕೂಡ ಮೋಶೆ ಹೊರಗೆ ಹೋಗಿ ನೋಡಿದನು. ಈ ಸಾರಿ ಇಬ್ಬರು ಹಿಬ್ರಿಯರೇ ಜಗಳವಾಡುತ್ತಿದ್ದರು. ತಪ್ಪಿತಸ್ಥನಿಗೆ, “ಏನಯ್ಯಾ ಸ್ವಕುಲದವನನ್ನೇ ಹೊಡೆಯುತ್ತಿರುವೆ ಏಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಮರುದಿವಸ ಅವನು ಹೊರಟುಹೋಗಿ ನೋಡಿದಾಗ ಇಬ್ಬರು ಇಬ್ರಿಯರೇ ಜಗಳವಾಡುತ್ತಿದ್ದರು. ಅನ್ಯಾಯ ಮಾಡುತ್ತಿದ್ದವನಿಗೆ ಅವನು - ಏನಯ್ಯಾ, ನೀನು ಯಾಕೆ ಸ್ವಕುಲದವನನ್ನು ಹೊಡೆಯುತ್ತೀ ಎಂದು ಕೇಳಿದಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಮರುದಿನ ಅವನು ಮತ್ತೆ ಹೊರಗೆ ಹೋದಾಗ, ಹಿಬ್ರಿಯರಾದ ಇಬ್ಬರು ಮನುಷ್ಯರು ಜಗಳವಾಡುತ್ತಿದ್ದರು. ತಪ್ಪು ಮಾಡಿದವನಿಗೆ ಮೋಶೆ, “ಏಕೆ ನಿನ್ನ ಜೊತೆಯವನನ್ನು ಹೊಡೆಯುತ್ತೀ?” ಎಂದನು. ಅಧ್ಯಾಯವನ್ನು ನೋಡಿ |