ವಿಮೋಚನಕಾಂಡ 2:14 - ಪರಿಶುದ್ದ ಬೈಬಲ್14 ಅದಕ್ಕೆ ಆ ಮನುಷ್ಯನು, “ನಿನ್ನನ್ನು ನಮ್ಮ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು? ನಿನ್ನೆ ಆ ಈಜಿಪ್ಟಿನವನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿರುವಿಯೋ?” ಎಂದು ಉತ್ತರಿಸಿದನು. ಆಗ ಮೋಶೆಗೆ ಭಯವಾಯಿತು. ಮೋಶೆಯು ತನ್ನೊಳಗೆ, “ನಾನು ಮಾಡಿದ್ದು ಪ್ರತಿಯೊಬ್ಬರಿಗೂ ತಿಳಿದಿದೆ” ಅಂದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆ ಮನುಷ್ಯನು ಅವನಿಗೆ, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ, ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದು ಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದಿಯೋ?” ಅಂದನು. ಈ ಮಾತನ್ನು ಕೇಳಿ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ಬಯಲಿಗೆ ಬಂತಲ್ಲಾ” ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದಕ್ಕೆ ಅವನು, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿ ಹಾಗೂ ನ್ಯಾಯಾಧಿಪತಿಯನ್ನಾಗಿ ನೇಮಿಸಿದವರು ಯಾರು? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನು ಕೊಂದುಹಾಕಬೇಕೆಂದಿರುವೆಯಾ?” ಎಂದನು. ಈ ಮಾತನ್ನು ಕೇಳಿದ್ದೇ ಮೋಶೆ, “ನಾನು ಮಾಡಿದ ಕಾರ್ಯ ಬಯಲಾಗಿಬಿಟ್ಟಿತಲ್ಲಾ!” ಎಂದು ಅಂಜಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆ ಮನುಷ್ಯನು - ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಈ ಮಾತನ್ನು ಕೇಳಿ ಮೋಶೆ - ಆ ಕಾರ್ಯವು ಬೈಲಿಗೆ ಬಂತಲ್ಲಾ ಅಂದುಕೊಂಡು ಅಂಜಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅದಕ್ಕವನು, “ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿದ್ದಾರೆ? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದು ಹಾಕಬೇಕೆಂದಿದ್ದೀಯೋ?” ಎಂದನು. ಆಗ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ತಿಳಿದಿರಬೇಕು,” ಎಂದುಕೊಂಡನು. ಅಧ್ಯಾಯವನ್ನು ನೋಡಿ |
ಮನೆಯ ಸುತ್ತಲೂ ನಿಂತುಕೊಂಡಿದ್ದ ಗಂಡಸರು ಅವನಿಗೆ, “ದಾರಿಬಿಡು” ಎಂದು ಕೂಗಿದರು. ಆಮೇಲೆ ಅವರು ತಮ್ಮೊಳಗೆ, “ಈ ಲೋಟನು ನಮ್ಮ ನಗರಕ್ಕೆ ಪ್ರವಾಸಿಗನಂತೆ ಬಂದು ಈಗ ನಮಗೇ ನ್ಯಾಯವನ್ನು ಹೇಳಿಕೊಡುತ್ತಿದ್ದಾನೆ” ಎಂದು ಮಾತಾಡಿಕೊಂಡರು. ಆಮೇಲೆ ಅವರು ಲೋಟನಿಗೆ, “ನಾವು ಆ ಪುರುಷರಿಗೆ ಮಾಡುವುದಕ್ಕಿಂತ ನಿನಗೇ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ” ಎಂದು ಕೂಗಿಹೇಳಿ ಲೋಟನ ಸಮೀಪಕ್ಕೆ ಬಂದು ಬಾಗಿಲನ್ನು ಮುರಿದುಹಾಕಲು ಸಿದ್ಧರಾದರು.
“ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಈ ಮೋಶೆ. ಅವರು ಅವನಿಗೆ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?’ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಆ ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ಈ ದೇವದೂತನನ್ನೇ.