ವಿಮೋಚನಕಾಂಡ 2:15 - ಪರಿಶುದ್ದ ಬೈಬಲ್15 ಮೋಶೆಯು ಮಾಡಿದ್ದು ಫರೋಹನಿಗೂ ತಿಳಿಯಿತು. ಆದ್ದರಿಂದ ಮೋಶೆಯನ್ನು ಕೊಲ್ಲಿಸಲು ಅವನು ತೀರ್ಮಾನಿಸಿದನು. ಆದರೆ ಮೋಶೆ ಫರೋಹನ ಬಳಿಯಿಂದ ಮಿದ್ಯಾನ್ ದೇಶಕ್ಕೆ ಓಡಿಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಡೆದ ಸಂಗತಿಯು ಫರೋಹನಿಗೆ ತಿಳಿದುಬಂದಾಗ, ಅವನು ಮೋಶೆಯನ್ನು ಕೊಲ್ಲಬೇಕೆಂದು ಆಲೋಚಿಸುತ್ತಿದ್ದನು. ಆದುದರಿಂದ ಮೋಶೆಯು ಫರೋಹನ ಬಳಿಯಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದ ಒಂದು ಬಾವಿಯ ಬಳಿಯಲ್ಲಿ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಡೆದ ಸಂಗತಿ ಫರೋಹನಿಗೆ ಮುಟ್ಟಿತು. ಅವನು ಮೋಶೆಯನ್ನು ಕೊಲ್ಲಿಸಬೇಕೆಂದು ಆಲೋಚಿಸುತ್ತಿದ್ದನು. ಆದುದರಿಂದ ಮೋಶೆ ಫರೋಹನ ಬಳಿಯಿಂದ ಪಲಾಯನಗೈದು ಮಿದ್ಯಾನ್ ನಾಡನ್ನು ಸೇರಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಡೆದ ಸಂಗತಿಯು ಫರೋಹನಿಗೆ ತಿಳಿದುಬಂದಾಗ ಅವನು ಮೋಶೆಯನ್ನು ಕೊಲ್ಲಿಸಬೇಕೆಂದು ಆಲೋಚಿಸಿದ್ದರಿಂದ ಮೋಶೆ ಫರೋಹನ ಬಳಿಯಿಂದ ಓಡಿಹೋಗಿ ವಿುದ್ಯಾನ್ ದೇಶವನ್ನು ಸೇರಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಫರೋಹನು ಈ ವಿಷಯವನ್ನು ಕೇಳಿದಾಗ, ಮೋಶೆಯನ್ನು ಕೊಂದುಹಾಕುವುದಕ್ಕೆ ಪ್ರಯತ್ನಿಸಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್ ದೇಶಕ್ಕೆ ವಾಸಿಸಲು ಹೋದನು. ಅಲ್ಲಿ ಒಂದು ಬಾವಿಯ ಬಳಿಯಲ್ಲಿ ಕೂತುಕೊಂಡನು. ಅಧ್ಯಾಯವನ್ನು ನೋಡಿ |
ಅವರು ಮಿದ್ಯಾನನ್ನು ಬಿಟ್ಟು ಪಾರಾನಿಗೆ ಹೋದರು. ಇತರ ಕೆಲವು ಜನರು ಪಾರಾನಿನಲ್ಲಿ ಅವರೊಂದಿಗೆ ಸೇರಿಕೊಂಡರು. ನಂತರ ಇವರೆಲ್ಲಾ ಒಟ್ಟಿಗೆ ಈಜಿಪ್ಟಿಗೆ ಹೋದರು. ಅವರು ಈಜಿಪ್ಟಿನ ರಾಜನಾದ ಫರೋಹನ ಬಳಿಗೆ ಹೋಗಿ, ಅವನ ಸಹಾಯವನ್ನು ಕೇಳಿದರು. ಫರೋಹನು ಹದದನಿಗೆ ಒಂದು ಮನೆಯನ್ನು ಮತ್ತು ಸ್ವಲ್ಪ ಭೂಮಿಯನ್ನು ಕೊಟ್ಟನು. ಫರೋಹನು ಅವನ ಊಟಕ್ಕಾಗಿ ಪ್ರತಿ ತಿಂಗಳು ಆಹಾರವನ್ನು ಕೊಟ್ಟನು.