Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:2 - ಪರಿಶುದ್ದ ಬೈಬಲ್‌

2 ಆ ಸ್ತ್ರೀಯು ಗರ್ಭಿಣಿಯಾಗಿ ಗಂಡುಮಗುವಿಗೆ ಜನ್ಮವಿತ್ತಳು. ಮಗುವು ಸುಂದರವಾಗಿತ್ತು. ಆಕೆ ಮೂರು ತಿಂಗಳವರೆಗೆ ಆ ಮಗುವನ್ನು ಬಚ್ಚಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದು ಸುಂದರವಾದ ಕೂಸೆಂದು ತಿಳಿದು ಮೂರು ತಿಂಗಳು ಅದನ್ನು ಬಚ್ಚಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಕೆ ಗರ್ಭಿಣಿಯಾಗಿ ಒಂದು ಗಂಡುಮಗುವನ್ನು ಹೆತ್ತಳು. ಅದು ಅತಿ ಚೆಲುವಾದ ಕೂಸೆಂದು ತಿಳಿದು ಮೂರು ತಿಂಗಳು ಬಚ್ಚಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಕೆ ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತು ಅದು ಚೆಲುವಾದ ಕೂಸೆಂದು ತಿಳಿದು ಮೂರು ತಿಂಗಳು ಬಚ್ಚಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆ ಸ್ತ್ರೀಯು ಗರ್ಭಧರಿಸಿ, ಗಂಡು ಮಗುವನ್ನು ಹೆತ್ತಳು. ಅದು ಸುಂದರವಾಗಿದ್ದುದರಿಂದ ಮೂರು ತಿಂಗಳು ಬಚ್ಚಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:2
8 ತಿಳಿವುಗಳ ಹೋಲಿಕೆ  

ಮೋಶೆಯು ಹುಟ್ಟಿದಾಗ ಅವನ ತಂದೆತಾಯಿಗಳು ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳವರೆಗೆ ಅಡಗಿಸಿಟ್ಟರು. ಮಗುವಾಗಿದ್ದ ಮೋಶೆಯ ಸೌಂದರ್ಯವನ್ನು ಅವರು ಕಂಡದ್ದರಿಂದ ರಾಜನಾದ ಫರೋಹನ ಆಜ್ಞೆಗೂ ಅವಿಧೇಯರಾಗಲು ಹಿಂಜರಿಯಲಿಲ್ಲ.


“ಮೋಶೆಯು ಜನಿಸಿದ್ದು ಈ ಕಾಲದಲ್ಲೇ. ಅವನು ಬಹು ಸುಂದರನಾಗಿದ್ದನು. ಮೋಶೆಯನ್ನು ಅವನ ತಂದೆಯ ಮನೆಯಲ್ಲಿ ಮೂರು ತಿಂಗಳವರೆಗೆ ನೋಡಿಕೊಳ್ಳಲಾಯಿತು.


ದಯಾವಂತನಿಗೂ ಉದಾರಿಗೂ ಒಳ್ಳೆಯದಾಗುವುದು. ನ್ಯಾಯವಾದ ವ್ಯಾಪಾರಸ್ಥನಿಗೆ ಒಳ್ಳೆಯದಾಗುವುದು.


ಅಮ್ರಾಮನು ನೂರಮೂವತ್ತೇಳು ವರ್ಷ ಜೀವಿಸಿದನು. ಅಮ್ರಾಮನು ತನ್ನ ತಂದೆಯ ಸಹೋದರಿಯಾದ ಯೋಕೆಬೆದಳನ್ನು ಮದುವೆಯಾದನು. ಅಮ್ರಾಮ್ ಮತ್ತು ಯೋಕೆಬೆದಳು ಆರೋನ ಮತ್ತು ಮೋಶೆಗೆ ಜನ್ಮವಿತ್ತರು.


ಅಮ್ರಾಮನು ಕೆಹಾತನ ಕುಲಕ್ಕೆ ಸೇರಿದವನು. ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಅವಳು ಲೇವಿ ಕುಟುಂಬದವಳು. ಅವಳು ಈಜಿಪ್ಟಿನಲ್ಲಿ ಹುಟ್ಟಿದಳು. ಅಮ್ರಾಮ್ ಮತ್ತು ಯೋಕೆಬೆದಳಿಗೆ ಇಬ್ಬರು ಗಂಡುಮಕ್ಕಳು ಹುಟ್ಟಿದರು. ಅವರು ಯಾರೆಂದರೆ ಆರೋನ ಮತ್ತು ಮೋಶೆ. ಅವರಿಗೆ ಒಬ್ಬ ಮಗಳೂ ಇದ್ದಳು. ಅವಳ ಹೆಸರು ಮಿರ್ಯಾಮಳು.


ಭೂಮಿಯು ಒಳ್ಳೆಯದನ್ನು ಯೋಸೇಫನಿಗೆ ಕೊಡಲಿ. ಯೋಸೇಫನು ತನ್ನ ಸಹೋದರರಿಂದ ಬೇರ್ಪಡಿಸಿಕೊಂಡಿರುವನು. ಆದ್ದರಿಂದ ಉರಿಯುವ ಪೊದೆಯಲ್ಲಿರುವ ಯೆಹೋವನು ಉತ್ತಮವಾದವುಗಳನ್ನು ಯೋಸೇಫನಿಗೆ ಕೊಡಲಿ.


ಇಷಯನು ಕಿರಿಯ ಮಗನನ್ನು ಕರೆತರಲು ಒಬ್ಬನನ್ನು ಕಳುಹಿಸಿದನು. ಇವನಾದರೋ ಕೆಂಬಣ್ಣದವನೂ ಸುಂದರನೇತ್ರನೂ ನೋಟಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಮೇಲೆದ್ದು ನಿಲ್ಲು, ಅವನನ್ನು ಅಭಿಷೇಕಿಸು. ಇವನನ್ನೇ ನಾನು ಆರಿಸಿದ್ದು” ಎಂದು ಆಜ್ಞಾಪಿಸಿದನು.


ನಂತರ ಯೆಹೋವಾಷ ಮತ್ತು ಯೆಹೋಷೆಬಳು ಯೆಹೋವನ ಆಲಯದಲ್ಲಿ ಅಡಗಿಕೊಂಡರು. ಯೆಹೋವಾಷನು ಆರು ವರ್ಷಗಳ ಕಾಲ ಅಡಗಿಕೊಂಡಿದ್ದನು. ಅತಲ್ಯಳು ಯೆಹೂದ ದೇಶವನ್ನು ಆಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು