Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:23 - ಪರಿಶುದ್ದ ಬೈಬಲ್‌

23 ಸ್ವಲ್ಪಕಾಲದ ಬಳಿಕ ಈಜಿಪ್ಟಿನ ರಾಜನೂ ಸತ್ತುಹೋದನು. ಇಸ್ರೇಲರು ತಾವು ಮಾಡಬೇಕಾದ ಪ್ರಯಾಸಕರವಾದ ಬಿಟ್ಟೀಕೆಲಸದಿಂದ ನಿಟ್ಟುಸಿರುಬಿಡುತ್ತಾ ಗೋಳಾಡುತ್ತಾ ಇದ್ದರು. ಅವರ ಗೋಳು ದೇವರಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಹೀಗೆ ಬಹಳ ದಿನಗಳು ಕಳೆದ ಮೇಲೆ ಈಜಿಪ್ಟ್ ದೇಶದ ಅರಸನು ಕಾಲವಾದನು. ಇಸ್ರಯೇಲರು ತಾವು ಮಾಡಬೇಕಾಗಿದ್ದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಿದ್ದರು. ಆ ಗೋಳು ದೇವರಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಈ ಮೇರೆಗೆ ಬಹಳ ದಿನಗಳು ಕಳೆದ ಮೇಲೆ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲ್ಯರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸುರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹೀಗೆ ಬಹಳ ದಿನಗಳಾದ ಮೇಲೆ ಈಜಿಪ್ಟಿನ ಅರಸನು ಸತ್ತನು. ಇಸ್ರಾಯೇಲರು ದಾಸತ್ವದ ಕಾರಣದಿಂದ ನರಳಾಡುತ್ತಾ ಮೊರೆಯಿಡುತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:23
31 ತಿಳಿವುಗಳ ಹೋಲಿಕೆ  

ಜನರು ನಿಮ್ಮ ಹೊಲಗಳಲ್ಲಿ ಕೆಲಸ ಮಾಡಿದರೂ ನೀವು ಅವರಿಗೆ ಕೂಲಿಯನ್ನು ಕೊಡಲಿಲ್ಲ. ಅವರು ನಿಮ್ಮ ವಿರುದ್ಧವಾಗಿ ಗೋಳಾಡುತ್ತಿದ್ದಾರೆ. ಅವರು ನಿಮ್ಮ ಬೆಳೆಗಳ ಸುಗ್ಗಿಯನ್ನು ಮಾಡಿದರು. ಈಗ ಪರಲೋಕ ಸೇನೆಯ ಅಧಿಪತಿಯಾದ ಪ್ರಭುವು ಅವರ ಗೋಳಾಟವನ್ನು ಕೇಳಿಸಿಕೊಂಡಿದ್ದಾನೆ.


“ನಲವತ್ತು ವರ್ಷಗಳಾದ ಮೇಲೆ ಮೋಶೆಯು ಸಿನಾಯ್ ಬೆಟ್ಟದ ಸಮೀಪದಲ್ಲಿರುವ ಮರಳುಗಾಡಿನಲ್ಲಿದ್ದಾಗ ಉರಿಯುತ್ತಿದ್ದ ಪೊದೆಯ ಜ್ವಾಲೆಯಲ್ಲಿ ದೇವದೂತನೊಬ್ಬನು ಕಾಣಿಸಿಕೊಂಡನು.


ಇದಲ್ಲದೆ ದೇವದೂತನು ಆಕೆಗೆ, “ಹಾಗರಳೇ, ಈಗ ನೀನು ಗರ್ಭಿಣಿಯಾಗಿರುವೆ; ನಿನಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು; ಯಾಕೆಂದರೆ ಯೆಹೋವನು ನಿನ್ನ ಕಷ್ಟಗಳನ್ನು ಕೇಳಿದ್ದಾನೆ; ಆತನು ನಿನಗೆ ಸಹಾಯ ಮಾಡುವನು.


ಇದು ಸರ್ವಶಕ್ತನಾದ ಯೆಹೋವನು ಅದ್ಭುತವನ್ನು ನಡಿಸುತ್ತಾನೆಂಬುದಕ್ಕೆ ಗುರುತಾಗಿದೆ. ಜನರು ಯಾವಾಗಲಾದರೂ ಸರಿಯೇ ಸಹಾಯಕ್ಕಾಗಿ ಮೊರೆಯಿಟ್ಟರೆ ಆತನು ಸಹಾಯವನ್ನು ಕಳುಹಿಸುವನು. ಯೆಹೋವನು ಅವರನ್ನು ರಕ್ಷಿಸಲೂ ಕಾಪಾಡಲೂ ಒಬ್ಬನನ್ನು ಕಳುಹಿಸುವನು. ಆ ಮನುಷ್ಯನು ಬೇರೆಯವರಿಂದ ಶೋಷಿತರಾದವರನ್ನು ಸಂರಕ್ಷಿಸುವನು.


ಆಗ ನಾನು ಸಹಾಯಕ್ಕಾಗಿ ಯೆಹೋವನನ್ನು ಕೂಗಿಕೊಂಡೆನು; ನನ್ನ ದೇವರಿಗೆ ಮೊರೆಯಿಟ್ಟೆನು. ಆತನು ತನ್ನ ಆಲಯದಲ್ಲಿ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಗೆ ಕಿವಿಗೊಟ್ಟನು.


ಆದರೆ ಯೆಹೋವನು ಹೇಳುವುದೇನೆಂದರೆ: “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ. ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.”


ನಮ್ಮ ಪೂರ್ವಿಕರು ಈಜಿಪ್ಟಿನಲ್ಲಿ ಸಂಕಟ ಅನುಭವಿಸುವುದನ್ನು ನೀನು ನೋಡಿದೆ. ಕೆಂಪು ಸಮುದ್ರದ ಬಳಿ ಸಹಾಯಕ್ಕಾಗಿ ಅವರು ಮೊರೆಯಿಟ್ಟಾಗ ನೀನು ಅವರಿಗೆ ಕಿವಿಗೊಟ್ಟೆ.


ಸೂರ್ಯ ಮುಳುಗುವುದರೊಳಗೆ ಅವನಿಗೆ ಸಲ್ಲಬೇಕಾದ ಕೂಲಿಯನ್ನು ಕೊಟ್ಟುಬಿಡು, ಅವನು ಬಡವನಾಗಿದ್ದಾನೆ. ನೀನು ಕೊಡುವ ಕೂಲಿಯಿಂದಲೇ ಅವನು ತನ್ನ ಹಸಿವನ್ನು ನೀಗಿಸಿಕೊಳ್ಳಬೇಕು. ನೀನು ಅವನ ಕೂಲಿ ಕೊಡದಿದ್ದಲ್ಲಿ ಅವನು ದೇವರಾದ ಯೆಹೋವನಿಗೆ ದೂರು ಹೇಳುವನು. ಆಗ ನೀನು ಪಾಪಮಾಡುವವನಾಗಿರುವೆ.


ಮೋಶೆ ಇನ್ನೂ ಮಿದ್ಯಾನಿನಲ್ಲಿದ್ದಾಗ ಯೆಹೋವನು, “ಈಗ ನೀನು ಸುರಕ್ಷಿತವಾಗಿ ಈಜಿಪ್ಟಿಗೆ ಹೋಗಬಹುದು. ನಿನ್ನನ್ನು ಕೊಲ್ಲಬೇಕೆಂದಿದ್ದವರು ಸತ್ತುಹೋಗಿದ್ದಾರೆ” ಅಂದನು.


ಅದಕ್ಕೆ ಯೆಹೋವನು, “ನೀನು ಮಾಡಿದ್ದೇನು? ನೀನು ನಿನ್ನ ತಮ್ಮನನ್ನೇ ಕೊಲೆಮಾಡಿದೆ! ಅವನ ರಕ್ತವು ಭೂಮಿಯ ಕಡೆಯಿಂದ ನನ್ನನ್ನು ಕೂಗುತಿದೆ.


ನಾವು ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ನೀವು ಬಲ್ಲಿರಿ. “ಈಗ ನಾವು ನಿಮ್ಮ ಪ್ರದೇಶದ ಗಡಿಯಲ್ಲಿರುವ ಕಾದೇಶೆಂಬ ಊರಲ್ಲಿದ್ದೇವೆ.


ಅವರು ಫರೋಹನೊಡನೆ ಮಾತಾಡಿದಾಗ ಮೋಶೆಗೆ ಎಂಭತ್ತು ವರ್ಷ ವಯಸ್ಸಾಗಿತ್ತು. ಆರೋನನಿಗೆ ಎಂಭತ್ತ ಮೂರು ವರ್ಷ ವಯಸ್ಸಾಗಿತ್ತು.


ಸರ್ವಶಕ್ತನಾದ ಯೆಹೋವನ ದ್ರಾಕ್ಷಿತೋಟವೇ ಇಸ್ರೇಲ್ ದೇಶ. ಯೆಹೋವನು ಪ್ರೀತಿಸುವ ದ್ರಾಕ್ಷಿಬಳ್ಳಿಯೇ ಯೆಹೂದದ ಪ್ರಜೆ. ಯೆಹೋವನು ನ್ಯಾಯವನ್ನು ಅಪೇಕ್ಷಿಸಿದರೂ ಸಿಕ್ಕಿದ್ದು ನರಹತ್ಯವೇ. ಯೆಹೋವನು ಧರ್ಮವನ್ನು ಅಪೇಕ್ಷಿಸಿದರೂ ದೊರಕಿದ್ದು ಗೋಳಾಟವೇ.


ಈಜಿಪ್ಟಿನವರು ಇಸ್ರೇಲರ ಜೀವಿತವನ್ನು ಕಷ್ಟಕರವನ್ನಾಗಿ ಮಾಡಿದರು. ಇಸ್ರೇಲರಿಂದ ಇಟ್ಟಿಗೆ, ಗಾರೆ, ಬೇಸಾಯ ಮತ್ತು ಪ್ರತಿಯೊಂದು ಕೆಲಸವನ್ನು ಬಲವಂತವಾಗಿ ಮಾಡಿಸಿಕೊಂಡರು.


ಈಗ ಇಸ್ರೇಲರ ಕಷ್ಟಗಳನ್ನೂ ಬಲ್ಲೆನು; ಅವರು ಈಜಿಪ್ಟಿನವರ ಗುಲಾಮರೆಂದೂ ಬಲ್ಲೆನು; ನಾನು ನನ್ನ ಒಡಂಬಡಿಕೆಯನ್ನು ಜ್ಞಾಪಿಸಿಕೊಂಡಿದ್ದೇನೆ.


ಅಂತೆಯೇ ಮೋಶೆಯು ಇಸ್ರೇಲರಿಗೆ ತಿಳಿಸಿದನು. ಆದರೆ ಜನರು ಬಹು ಪ್ರಯಾಸಪಟ್ಟು ದುಡಿಯುತ್ತಿದ್ದುದರಿಂದ ಮೋಶೆಯ ಮಾತಿಗೆ ಕಿವಿಗೊಡುವಷ್ಟು ತಾಳ್ಮೆ ಅವರಿಗಿರಲಿಲ್ಲ.


“ಯಾಕೋಬನು ಈಜಿಪ್ಟಿಗೆ ಹೋದನು. ತರುವಾಯ, ಈಜಿಪ್ಟಿನವರು ಅವನ ವಂಶದವರಿಗೆ ಜೀವನವನ್ನು ಕಠಿಣಗೊಳಿಸಿದರು. ಆದ್ದರಿಂದ ಅವರು ಯೆಹೋವನಲ್ಲಿ ಸಹಾಯಕ್ಕಾಗಿ ಮೊರೆಯಿಟ್ಟರು. ಯೆಹೋವನು ಮೋಶೆ ಆರೋನರನ್ನು ಕಳುಹಿಸಿದನು. ಮೋಶೆ ಆರೋನರು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದು ಇಲ್ಲಿ ನೆಲೆಗೊಳಿಸಿದರು.


“ಹಿಂಸೆಗೂ ಅನ್ಯಾಯಕ್ಕೂ ಒಳಗಾಗಿರುವವರು ತಮ್ಮನ್ನು ಬಲಿಷ್ಠರಿಂದ ಬಿಡಿಸಬಲ್ಲ ಯಾರಿಗಾದರೂ ಮೊರೆಯಿಡುವರು.


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು. ಸಹಾಯಕ್ಕಾಗಿ ನಾನಿಡುವ ಮೊರೆಯನ್ನು ಲಾಲಿಸು.


ಸೀಸೆರನ ಹತ್ತಿರ ಒಂಭೈನೂರು ಕಬ್ಬಿಣದ ರಥಗಳಿದ್ದವು. ಅವನು ಇಪ್ಪತ್ತು ವರ್ಷಗಳ ಕಾಲ ಇಸ್ರೇಲರನ್ನು ತುಂಬ ಬಾಧಿಸಿದನು. ಆದ್ದರಿಂದ ಇಸ್ರೇಲರು ಸಹಾಯಕ್ಕಾಗಿ ಯೆಹೋವನಲ್ಲಿ ಮೊರೆಯಿಟ್ಟರು.


“ನಾಳೆ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ಒಬ್ಬ ಮನುಷ್ಯನನ್ನು ಕಳುಹಿಸುತ್ತೇನೆ. ಅವನು ಬೆನ್ಯಾಮೀನ್ ಕುಟುಂಬಕ್ಕೆ ಸೇರಿದವನು. ನೀನು ಅವನನ್ನು ಅಭಿಷೇಕಿಸು. ನನ್ನ ಜನರಾದ ಇಸ್ರೇಲರಿಗೆ ಅವನು ರಾಜನಾಗುತ್ತಾನೆ. ಈ ಮನುಷ್ಯನು ನನ್ನ ಜನರನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ. ನನ್ನ ಜನರ ಸಂಕಟವನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳನ್ನು ನಾನು ಆಲಿಸಿದ್ದೇನೆ” ಎಂದು ತಿಳಿಸಿದ್ದನು.


ಯೆಹೋವನೇ, ನಾನು ಆಪತ್ತುಗಳಲ್ಲಿರುವಾಗ ನನಗೆ ವಿಮುಖನಾಗಬೇಡ, ನನಗೆ ಕಿವಿಗೊಡು. ಸಹಾಯಕ್ಕಾಗಿ ಮೊರೆಯಿಡುವಾಗ ಬೇಗನೆ ಸದುತ್ತರವನ್ನು ದಯಪಾಲಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು