Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:24 - ಪರಿಶುದ್ದ ಬೈಬಲ್‌

24 ದೇವರು ಅವರ ನರಳಾಟವನ್ನು ಕೇಳಿ ತಾನು ಅಬ್ರಹಾಮನೊಂದಿಗೂ ಇಸಾಕನೊಂದಿಗೂ ಯಾಕೋಬನೊಂದಿಗೂ ಮಾಡಿದ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ದೇವರು ಅವರ ನರಳಾಟವನ್ನು ಕೇಳಿ, ತಾನು ಅಬ್ರಹಾಮ, ಇಸಾಕ, ಯಾಕೋಬನ ಸಂಗಡ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ದೇವರು ಆ ಜನರ ನರಳಾಟವನ್ನು ಕೇಳಿ ತಾವು ಅಬ್ರಹಾಮ, ಇಸಾಕ, ಯಕೋಬರಿಗೆ ಮಾಡಿದ್ದ ವಾಗ್ದಾನವನ್ನು ನೆನಪಿಗೆ ತಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ದೇವರು ಅವರ ನರಳಾಟವನ್ನು ಕೇಳಿ ತಾನು ಅಬ್ರಹಾಮ ಇಸಾಕ ಯಾಕೋಬರಿಗೆ ಮಾಡಿದ ವಾಗ್ದಾನವನ್ನು ನೆನಪಿಗೆ ತಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ದೇವರು ಅವರ ನರಳಾಟವನ್ನು ಕೇಳಿದಾಗ, ಅವರು ಅಬ್ರಹಾಮ, ಇಸಾಕ ಮತ್ತು ಯಾಕೋಬನ ಸಂಗಡ ತಾವು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:24
33 ತಿಳಿವುಗಳ ಹೋಲಿಕೆ  

ನಾನು ನಿನ್ನ ಸಂಗಡವಿದ್ದು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಕುಟುಂಬಕ್ಕೂ ಈ ಪ್ರದೇಶಗಳನ್ನೆಲ್ಲ ಕೊಡುವೆನು. ನಾನು ನಿನ್ನ ತಂದೆಯಾದ ಅಬ್ರಹಾಮನಿಗೆ ಪ್ರಮಾಣ ಮಾಡಿದ್ದನ್ನು ನೆರವೇರಿಸುವೆನು.


ಆತನು ತನ್ನ ಸೇವಕನಾದ ಆಬ್ರಹಾಮನಿಗೆ ತಾನು ಮಾಡಿದ ವಾಗ್ದಾನವನ್ನು ಜ್ಞಾಪಿಸಿಕೊಂಡನು.


ಈಗ ಇಸ್ರೇಲರ ಕಷ್ಟಗಳನ್ನೂ ಬಲ್ಲೆನು; ಅವರು ಈಜಿಪ್ಟಿನವರ ಗುಲಾಮರೆಂದೂ ಬಲ್ಲೆನು; ನಾನು ನನ್ನ ಒಡಂಬಡಿಕೆಯನ್ನು ಜ್ಞಾಪಿಸಿಕೊಂಡಿದ್ದೇನೆ.


ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಂಡನು. ತನ್ನ ಮಹಾಪ್ರೀತಿಯಿಂದ ಅವರನ್ನು ಸಂತೈಸಿದನು.


ಆತನು ಸೆರೆಯಾಳುಗಳ ಪ್ರಾರ್ಥನೆಗಳನ್ನು ಕೇಳುತ್ತಾನೆ. ಮರಣದಂಡನೆಗೆ ಒಳಗಾದವರನ್ನು ಆತನು ಬಿಡಿಸುತ್ತಾನೆ.


ಯಾಕೆಂದರೆ ಇಕ್ಕಟ್ಟಿನಲ್ಲಿರುವ ಬಡವರಿಗೆ ಆತನು ಸಹಾಯಮಾಡುತ್ತಾನೆ; ಅವರ ವಿಷಯದಲ್ಲಿ ಆತನು ನಾಚಿಕೊಳ್ಳುವುದಿಲ್ಲ; ಆತನು ಅವರನ್ನು ದ್ವೇಷಿಸುವುದಿಲ್ಲ. ಅವರು ಆತನನ್ನು ಕೂಗಿಕೊಳ್ಳುವಾಗ ಆತನು ಅವರಿಗೆ ಮರೆಯಾಗುವುದಿಲ್ಲ.


ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಟ್ಟಾಗ ನೀನು ನನಗೆ ಸದುತ್ತರವನ್ನು ದಯಪಾಲಿಸಿದೆ; ನನಗೆ ಬಲವನ್ನು ಅನುಗ್ರಹಿಸಿದೆ.


ಆ ರಾತ್ರಿ ಯೆಹೋವನು ಇಸಾಕನಿಗೆ ಪ್ರತ್ಯಕ್ಷನಾಗಿ, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು. ಭಯಪಡಬೇಡ, ನಾನು ನಿನ್ನ ಸಂಗಡವಿದ್ದೇನೆ. ನಾನು ನಿನ್ನನ್ನು ಆಶೀರ್ವದಿಸುವೆನು. ನಾನು ನಿನ್ನ ಕುಟುಂಬವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಸೇವಕನಾದ ಅಬ್ರಹಾಮನಿಗಾಗಿಯೇ ಇದನ್ನು ಮಾಡುತ್ತೇನೆ” ಎಂದು ಹೇಳಿದನು.


ನಮ್ಮ ಪೂರ್ವಿಕರು ನಿನ್ನಲ್ಲಿ ಮೊರೆಯಿಟ್ಟಾಗ ಅವರನ್ನು ಶತ್ರುಗಳಿಂದ ಬಿಡಿಸಿದೆ. ನಿನ್ನಲ್ಲಿ ಭರವಸವಿಟ್ಟಿದ್ದ ಅವರಿಗೆ ನಿರಾಶೆಯಾಗಲಿಲ್ಲ.


ಅನೇಕ ಸಲ ಶತ್ರುಗಳು ಇಸ್ರೇಲರಿಗೆ ತುಂಬ ಕಷ್ಟಗಳನ್ನು ಉಂಟು ಮಾಡುತ್ತಿದ್ದರು. ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಿದ್ದರು; ಪ್ರತಿಸಲವೂ ಯೆಹೋವನು ಅವರ ಗೋಳಾಟವನ್ನು ಕೇಳಿ ಮರುಕಪಡುತ್ತಿದ್ದನು. ಪ್ರತಿಸಲವೂ ಅವರನ್ನು ಶತ್ರುಗಳಿಂದ ರಕ್ಷಿಸಲು ಒಬ್ಬ ನ್ಯಾಯಾಧೀಶನನ್ನು ಕಳುಹಿಸಿ ಕೊಡುತ್ತಿದ್ದನು. ಯೆಹೋವನು ಆ ನ್ಯಾಯಾಧೀಶರ ಜೊತೆಯಲ್ಲಿಯೇ ಇರುತ್ತಿದ್ದನು. ಹೀಗಾಗಿ ಪ್ರತಿಸಲವೂ ಇಸ್ರೇಲರನ್ನು ಅವರ ಶತ್ರುಗಳಿಂದ ರಕ್ಷಿಸಲಾಯಿತು.


ಅಬ್ರಹಾಮನಿಂದ ಬಲಿಷ್ಠವಾದ ಮಹಾಜನಾಂಗ ಹುಟ್ಟುವುದು; ಅವನ ಮೂಲಕ ಈ ಲೋಕದ ಜನರೆಲ್ಲರೂ ಆಶೀರ್ವಾದ ಹೊಂದುವರು.


ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಯು ನಿನ್ನ ಎಲ್ಲಾ ಸಂತತಿಯವರಿಗೆ ಶಾಶ್ವತವಾಗಿ ಅನ್ವಯಿಸುವುದು. ನಾನೇ ನಿನಗೂ ನಿನ್ನ ಎಲ್ಲಾ ಸಂತತಿಯವರಿಗೂ ದೇವರಾಗಿರುವೆನು.


ದಯವಿಟ್ಟು, ಸೆರೆಯಾಳುಗಳ ಗೋಳಾಟಕ್ಕೆ ಕಿವಿಗೊಡು! ಸಾಯಲಿರುವವರನ್ನು ನಿನ್ನ ಮಹಾಶಕ್ತಿಯಿಂದ ಕಾಪಾಡು.


ಆಗ ಆ ಪುರುಷನು, “ಇನ್ನು ಮೇಲೆ ನಿನ್ನ ಹೆಸರು ‘ಯಾಕೋಬ’ ಎಂದಿರುವುದಿಲ್ಲ. ಇಂದಿನಿಂದ ನಿನ್ನ ಹೆಸರು ‘ಇಸ್ರೇಲ್’ ಎಂದಾಗುವುದು. ನಾನೇ ನಿನಗೆ ಈ ಹೆಸರನ್ನು ಕೊಟ್ಟಿದ್ದೇನೆ; ಯಾಕೆಂದರೆ ನೀನು ದೇವರೊಡನೆಯೂ ಮನುಷ್ಯರೊಡನೆಯೂ ಹೋರಾಡಿದೆ; ಆದರೂ ನೀನು ಸೋಲಲಿಲ್ಲ” ಎಂದು ಹೇಳಿದನು.


ಜನರು ಈಜಿಪ್ಟಿನಲ್ಲಿ ಬಹಳ ಸಂಕಟಪಡುತ್ತಿರುವುದನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳಾಟವನ್ನು ನಾನು ಕೇಳಿದ್ದೇನೆ. ನಾನು ಅವರನ್ನು ರಕ್ಷಿಸುವುದಕ್ಕಾಗಿ ಇಳಿದುಬಂದಿದ್ದೇನೆ. ಮೋಶೆಯೇ, ಈಗ ನಾನು ನಿನ್ನನ್ನು ಈಜಿಪ್ಟಿಗೆ ಕಳುಹಿಸುತ್ತಿದ್ದೇನೆ’ ಎಂದು ಹೇಳಿದನು.


ಆದರೆ ದೇವರು ನೋಹನನ್ನು ಮರೆಯಲಿಲ್ಲ. ದೇವರು ನೋಹನನ್ನು ಮತ್ತು ನಾವೆಯಲ್ಲಿದ್ದ ಎಲ್ಲಾ ಪ್ರಾಣಿಗಳನ್ನು ನೆನಪುಮಾಡಿಕೊಂಡನು. ದೇವರು ಭೂಮಿಯ ಮೇಲೆ ಗಾಳಿಯನ್ನು ಬರಮಾಡಿದನು. ನೀರು ಕಡಿಮೆಯಾಗಲು ಪ್ರಾರಂಭಿಸಿತು.


ಆಗ ಯೆಹೋವನು ಅಬ್ರಾಮನಿಗೆ, “ನಿನಗೆ ಈ ವಿಷಯಗಳು ತಿಳಿದಿರಬೇಕು. ನಿನ್ನ ಸಂತತಿಯವರು ಪರದೇಶಿಯರಾಗಿ ತಮ್ಮದಲ್ಲದ ದೇಶದಲ್ಲಿ ವಾಸಮಾಡುವರು. ಅಲ್ಲಿನ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳುವರು. ಅಲ್ಲಿ ಅವರು ನಾನೂರು ವರ್ಷಗಳವರೆಗೆ ಬಾಧೆಪಡುವರು.


ಇದಲ್ಲದೆ ದೇವದೂತನು ಆಕೆಗೆ, “ಹಾಗರಳೇ, ಈಗ ನೀನು ಗರ್ಭಿಣಿಯಾಗಿರುವೆ; ನಿನಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು; ಯಾಕೆಂದರೆ ಯೆಹೋವನು ನಿನ್ನ ಕಷ್ಟಗಳನ್ನು ಕೇಳಿದ್ದಾನೆ; ಆತನು ನಿನಗೆ ಸಹಾಯ ಮಾಡುವನು.


“ನೀನು ನನಗೋಸ್ಕರವಾಗಿ ನಿನ್ನ ಒಬ್ಬನೇ ಮಗನನ್ನು ವಧಿಸಲು ಸಿದ್ಧನಾಗಿದ್ದೆ. ಆದ್ದರಿಂದ ನಾನು ನಿನಗೆ ಈ ವಾಗ್ದಾನವನ್ನು ಮಾಡುತ್ತೇನೆ:


ಯೆಹೋವನು ಇಸಾಕನಿಗೆ ಪ್ರತ್ಯಕ್ಷನಾಗಿ, “ನೀನು ಈಜಿಪ್ಟಿಗೆ ಹೋಗಬೇಡ. ನೀನು ಯಾವ ಪ್ರದೇಶದಲ್ಲಿರಬೇಕೆಂದು ನಾನು ಆಜ್ಞಾಪಿಸಿದೆನೋ ಆ ಪ್ರದೇಶದಲ್ಲಿ ವಾಸಿಸು.


ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು. ನೀನು ಅನೇಕ ಮಕ್ಕಳನ್ನು ಪಡೆದು ಮಹಾಜನಾಂಗವಾಗಿ ಬೆಳೆಯುವೆ. ಅನೇಕ ಜನಾಂಗಗಳೂ ರಾಜರುಗಳೂ ನಿನ್ನೊಳಗಿಂದ ಬರುವರು.


ನಾನು ಅಬ್ರಹಾಮನಿಗೂ ಇಸಾಕನಿಗೂ ವಿಶೇಷವಾದ ದೇಶವನ್ನು ಕೊಟ್ಟೆನು. ಈಗ ನಾನು ಆ ದೇಶವನ್ನು ನಿನಗೆ ಕೊಡುವೆನು. ನಾನು ಆ ದೇಶವನ್ನು ನಿನ್ನ ಮುಂದಿನ ಸಂತತಿಗಳವರಿಗೆ ಕೊಡುವೆನು” ಎಂದು ಹೇಳಿದನು.


ನಾವು ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ನೀವು ಬಲ್ಲಿರಿ. “ಈಗ ನಾವು ನಿಮ್ಮ ಪ್ರದೇಶದ ಗಡಿಯಲ್ಲಿರುವ ಕಾದೇಶೆಂಬ ಊರಲ್ಲಿದ್ದೇವೆ.


“ನಾಳೆ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ಒಬ್ಬ ಮನುಷ್ಯನನ್ನು ಕಳುಹಿಸುತ್ತೇನೆ. ಅವನು ಬೆನ್ಯಾಮೀನ್ ಕುಟುಂಬಕ್ಕೆ ಸೇರಿದವನು. ನೀನು ಅವನನ್ನು ಅಭಿಷೇಕಿಸು. ನನ್ನ ಜನರಾದ ಇಸ್ರೇಲರಿಗೆ ಅವನು ರಾಜನಾಗುತ್ತಾನೆ. ಈ ಮನುಷ್ಯನು ನನ್ನ ಜನರನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ. ನನ್ನ ಜನರ ಸಂಕಟವನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳನ್ನು ನಾನು ಆಲಿಸಿದ್ದೇನೆ” ಎಂದು ತಿಳಿಸಿದ್ದನು.


ಆದರೆ ಯೆಹೋವನು ಇಸ್ರೇಲರಿಗೆ ದಯಾಪರನಾಗಿದ್ದನು. ಯೆಹೋವನು ಕರುಣೆಯಿಂದ ಇಸ್ರೇಲರಿಗೆ ಅಭಿಮುಖನಾದನು. ಏಕೆಂದರೆ ಆತನು ಅಬ್ರಹಾಮನೊಂದಿಗೆ ಇಸಾಕನೊಂದಿಗೆ ಮತ್ತು ಯಾಕೋಬನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದನು. ಯೆಹೋವನು ಇಸ್ರೇಲರನ್ನು ನಾಶಗೊಳಿಸಲಿಲ್ಲ. ಅವರನ್ನು ಇನ್ನೂ ತಳ್ಳಿಬಿಟ್ಟಿರಲಿಲ್ಲ.


ಯೆಹೋವನೇ, ನಾನು ಆಪತ್ತುಗಳಲ್ಲಿರುವಾಗ ನನಗೆ ವಿಮುಖನಾಗಬೇಡ, ನನಗೆ ಕಿವಿಗೊಡು. ಸಹಾಯಕ್ಕಾಗಿ ಮೊರೆಯಿಡುವಾಗ ಬೇಗನೆ ಸದುತ್ತರವನ್ನು ದಯಪಾಲಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು